For Quick Alerts
  ALLOW NOTIFICATIONS  
  For Daily Alerts

  'ಲವ್ ಮಾಕ್ಟೇಲ್-2' ಬಳಿಕ 'ಶುಗರ್ ಫ್ಯಾಕ್ಟರಿ' ಸೇರುತ್ತಿರುವ ನಟ ಡಾರ್ಲಿಂಗ್ ಕೃಷ್ಣ

  |

  ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಕ್ಸಸ್ ಬಳಿಕ ಪಾರ್ಟ್-2 ನಲ್ಲಿ ನಿರತರಾಗಿರುವ ಕೃಷ್ಣ ಅಭಿನಯದ ಜೊತೆಗೆ ನಿರ್ದೇಶನದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ಜೊತೆ ಡಾರ್ಲಿಂಗ್ ಕೃಷ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

  Shrikrishna@gmail.com ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ನಾಗಶೇಖರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದೆ. ಈ ಸಿನಿಮಾ ಜೊತೆಗೆ ಕೃಷ್ಣ 'ಶುಗರ್ ಫ್ಯಾಕ್ಟರಿ' ಎನ್ನುವ ಹೊಸ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಟೈಟಲ್ ಅನೌನ್ಸ್ ಮಾಡಿರುವ ಸಿನಿಮಾತಂಡ ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿದ್ಧವಾಗಿದೆ.

  'ಲವ್ ಮಾಕ್ಟೇಲ್-2' ಸಿನಿಮಾ ಡಿಸೆಂಬರ್ ಗೆ ರಿಲೀಸ್?

  ಶುಗರ್ ಫ್ಯಾಕರಿ ಚಿತ್ರಕ್ಕೆ ದೀಪಕ್ ಅರಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದೀಪಿಕ್ ಅರಸ್ ನಟಿ ಅಮೂಲ್ಯ ಅವರ ಸಹೋದರ. ಈ ಮೊದಲು ಮನಸಾಲಜಿ ಎನ್ನುವ ಸಿನಿಮಾ ನಿರ್ಮಾಣ ಮಾಡಿದ್ದರು. ಶುಗರ್ ಫ್ಯಾಕ್ಟಟರಿ ಎರಡನೇ ಸಿನಿಮಾ. ವಿಭಿನ್ನ ಕಥಾಹಂದರ ಹೊಂದಿರುವ ಹಾಸ್ಯಭರಿತ ಸಿನಿಮಾ ಇದಾಗಿದೆಯಂತೆ.

  ಈ ಸಿನಿಮಾದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ಸಖತ್ ಎಕ್ಸಾಯಿಟ್ ಆಗಿರುವುದಾಗಿ ಹೇಳಿದ್ದಾರೆ. ಇನ್ನೂ ಚಿತ್ರದಲ್ಲಿ ಮೂವರು ನಾಯಕಿಯರು ಇರಲಿದ್ದಾರೆ. ಸದ್ಯ ಚಿತ್ರತಂಡ ನಾಯಕಿಯ ಹುಡುಕಾಟದಲ್ಲಿ ಬ್ಯುಸಿಯಾಗಿದೆ.

  ದೊಡ್ಡ ಹೃದಯವಂತ ಬಾಹುಬಲಿ ನಿರ್ದೇಶಕ ರಾಜಮೌಳಿ | filmibeat Kannada

  ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿ ಇರುವ ಡಾರ್ಲಿಂಗ್ ಕೃಷ್ಣ ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. 70ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಡಿಸೆಂಬರ್ ಅಥವಾ ಮುಂದಿನ ವರ್ಷಾರಂಭದಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ.

  English summary
  Actor Darling Krishna to begin shooting for Depak Akra's Sugar Factory from January 2021.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X