Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಲವ್ ಮಾಕ್ಟೇಲ್-2' ಬಳಿಕ 'ಶುಗರ್ ಫ್ಯಾಕ್ಟರಿ' ಸೇರುತ್ತಿರುವ ನಟ ಡಾರ್ಲಿಂಗ್ ಕೃಷ್ಣ
ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಕ್ಸಸ್ ಬಳಿಕ ಪಾರ್ಟ್-2 ನಲ್ಲಿ ನಿರತರಾಗಿರುವ ಕೃಷ್ಣ ಅಭಿನಯದ ಜೊತೆಗೆ ನಿರ್ದೇಶನದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ಜೊತೆ ಡಾರ್ಲಿಂಗ್ ಕೃಷ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
[email protected] ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ನಾಗಶೇಖರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದೆ. ಈ ಸಿನಿಮಾ ಜೊತೆಗೆ ಕೃಷ್ಣ 'ಶುಗರ್ ಫ್ಯಾಕ್ಟರಿ' ಎನ್ನುವ ಹೊಸ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಟೈಟಲ್ ಅನೌನ್ಸ್ ಮಾಡಿರುವ ಸಿನಿಮಾತಂಡ ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿದ್ಧವಾಗಿದೆ.
'ಲವ್ ಮಾಕ್ಟೇಲ್-2' ಸಿನಿಮಾ ಡಿಸೆಂಬರ್ ಗೆ ರಿಲೀಸ್?
ಶುಗರ್ ಫ್ಯಾಕರಿ ಚಿತ್ರಕ್ಕೆ ದೀಪಕ್ ಅರಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದೀಪಿಕ್ ಅರಸ್ ನಟಿ ಅಮೂಲ್ಯ ಅವರ ಸಹೋದರ. ಈ ಮೊದಲು ಮನಸಾಲಜಿ ಎನ್ನುವ ಸಿನಿಮಾ ನಿರ್ಮಾಣ ಮಾಡಿದ್ದರು. ಶುಗರ್ ಫ್ಯಾಕ್ಟಟರಿ ಎರಡನೇ ಸಿನಿಮಾ. ವಿಭಿನ್ನ ಕಥಾಹಂದರ ಹೊಂದಿರುವ ಹಾಸ್ಯಭರಿತ ಸಿನಿಮಾ ಇದಾಗಿದೆಯಂತೆ.
ಈ ಸಿನಿಮಾದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ಸಖತ್ ಎಕ್ಸಾಯಿಟ್ ಆಗಿರುವುದಾಗಿ ಹೇಳಿದ್ದಾರೆ. ಇನ್ನೂ ಚಿತ್ರದಲ್ಲಿ ಮೂವರು ನಾಯಕಿಯರು ಇರಲಿದ್ದಾರೆ. ಸದ್ಯ ಚಿತ್ರತಂಡ ನಾಯಕಿಯ ಹುಡುಕಾಟದಲ್ಲಿ ಬ್ಯುಸಿಯಾಗಿದೆ.
Recommended Video
ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿ ಇರುವ ಡಾರ್ಲಿಂಗ್ ಕೃಷ್ಣ ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. 70ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಡಿಸೆಂಬರ್ ಅಥವಾ ಮುಂದಿನ ವರ್ಷಾರಂಭದಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ.