ಗೋವಾದಲ್ಲಿ 'ರಾಬರ್ಟ್' ಸುಂದರಿ ಜೊತೆ ಡಾರ್ಲಿಂಗ್ ಕೃಷ್ಣ ರೊಮ್ಯಾನ್ಸ್

ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕಷ್ಣ ಸದ್ಯ ಗೋವಾದಲ್ಲಿ ಬೀಡುಬಿಟ್ಟಿದ್ದು, ರಾಬರ್ಟ್ ಸುಂದರಿ ಸೋನಲ್ ಜೊತೆ ರೊಮ್ಯಾನ್ಸ್ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Recommended Video

ಗೋವಾದಲ್ಲಿ ಸೊನಾಲ್ ಜೊತೆ ಡಾರ್ಲಿಂಗ್ ಕೃಷ್ಣ ಫುಲ್ ಬ್ಯುಸಿ | Filmibeat Kannada

ಅಂದಹಾಗೆ ಇದು ಶುಗರ್ ಫ್ಯಾಕ್ಟರಿ ಸಿನಿಮಾದ ಫೋಟೋಗಳು. ಈ ಚಿತ್ರದ ಚಿತ್ರೀಕರಣ ಗೋವಾದಲ್ಲಿ ನಡೆಯುತ್ತಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ ಟೇಲ್-2 ಸಿನಿಮಾದ ಜೊತೆಗೆ ಬೇರೆ ಬೇರೆ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇದೀಗ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಸೆಟ್ ಸೇರಿಕೊಂಡಿದ್ದಾರೆ.

ಶುಗರ್ ಫ್ಯಾಕ್ಟರಿ, ದೀಪಕ್ ಅರಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ವಿಶೇಷ ಎಂದರೆ ಚಿತ್ರದಲ್ಲಿ ಮೂವರು ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಸೋನಲ್ ಮಂಥೆರೋ, ಅದ್ವಿತಿ ಶೆಟ್ಟಿ ಮತ್ತು ಶಿಲ್ಪಾ ಶೆಟ್ಟಿ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಗೋವಾದಲ್ಲಿ ನಡೆಯುತ್ತಿರುವ ಚಿತ್ರೀಕರಣದ ಒಂದಿಷ್ಟು ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Darling Krishnaa starrer Sugar Factory is currently being filmed in Goa for the next 24 days

ಗೋವಾದಲ್ಲಿ ಸುಮಾರು 24 ದಿನಗಳು ಚಿತ್ರೀಕರಣ ನಡೆಯಲಿದ್ದು, ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಾಗಿದೆ. ಭರ್ಜರಿಯಾಗಿ ಚಿತ್ರೀಕರಣ ನಡೆಯುತ್ತಿದ್ದು, ಹಾಡನ್ನು ಸೆರೆಹಿಡಿಯಲಾಗುತ್ತಿದೆ. ಗೋವಾದ ಚಿತ್ರೀಕರಣ ಮುಗಿದ ಬಳಿಕ ಮೈಸೂರು, ಬೆಂಗಳೂರು ಮತ್ತು ವಿದೇಶದಲ್ಲೂ ಶೂಟಿಂಗ್ ಮಾಡುವ ಪ್ಲಾನ್ ಹಾಕಿಕೊಂಡಿದೆ ಸಿನಿಮಾಂಡ.

Darling Krishnaa starrer Sugar Factory is currently being filmed in Goa for the next 24 days

ನಟಿ ಸೋನಲ್ ಇತ್ತೀಚಿಗಷ್ಟೆ ರಿಲೀಸ್ ಆಗಿರುವ ರಾಬರ್ಟ್ ಸಿನಿಮಾದ ಅದ್ಭುತ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದ್ದಾರೆ. ಚಿತ್ರದಲ್ಲಿ ವಿನೋದ್ ಪ್ರಭಾಕರ್ ಪತ್ನಿಯಾಗಿ ನಟಿಸಿದ್ದಾರೆ. ಮೊದಲ ಬಾರಿಗೆ ಡಿ ಬಾಸ್ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಸಕ್ಸಸ್ ಆದ ಸಂತದಲ್ಲಿದ್ದಾರೆ.

More from Filmibeat

English summary
Darling Krishnaa starrer Sugar Factory is currently being filmed in Goa for the next 24 days.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X