Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಚುಕು ಗೆಳೆಯ ಸೃಜನ್ ತಾಯಿಯ ಹುಟ್ಟುಹಬ್ಬ ಮಾಡಿದ ದರ್ಶನ್
Recommended Video
ನಟ ದರ್ಶನ್ ಮತ್ತು ಸೃಜನ್ ಇಬ್ಬರು ಕನ್ನಡ ಚಿತ್ರರಂಗದ ಕುಚುಕು ಗೆಳೆಯರು. ಖಳನಾಯಕರ ಮಕ್ಕಳಾಗಿ ನಾಯಕನ ಪಟ್ಟಕ್ಕೆ ಏರಿ ಇಂದು ಸ್ಯಾಂಡಲ್ ವುಡ್ ಸ್ಟಾರ್ ಗಳಾಗಿ ಈ ಇಬ್ಬರು ನಟರು ಮಿಂಚುತ್ತಿದ್ದಾರೆ. ಗಜ ಮತ್ತು ಸೃಜ ಇಬ್ಬರ ಸ್ನೇಹ ಎಷ್ಟು ನಿರ್ಮಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ನಿನ್ನೆ ಹಿರಿಯ ನಟಿ ಹಾಗೂ ಸೃಜನ್ ಲೋಕೇಶ್ ತಾಯಿ ಗಿರಿಜಾ ಲೋಕೇಶ್ ಅವರ ಹುಟ್ಟುಹಬ್ಬ ಇತ್ತು. ಈ ವೇಳೆ ದರ್ಶನ್ ತಾವೇ ಖುದ್ದಾಗಿ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ದರ್ಶನ್ ಮತ್ತು ಸೃಜನ್ ಜೊತೆಗೆ ಅವರ ಆಪ್ತ ಸ್ನೇಹಿತರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಗಿರಿಜಾ ಲೋಕೇಶ್ ಅವರ ಹುಟ್ಟುಹಬ್ಬವನ್ನು ದರ್ಶನ್ ಆಚರಣೆ ಮಾಡಿರುವ ಫೋಟೋವನ್ನು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ತೂಗುದೀಪ ಮತ್ತು ಲೋಕೇಶ್ ಕುಟುಂಬದ ಅನುಬಂಧ ಹೀಗೆ ಇರಲಿ ಎಂದು ಅಭಿಮಾನಿಗಳು ಕೇಳಿಕೊಂಡಿದ್ದಾರೆ.
ದರ್ಶನ್ ಬಗ್ಗೆ ನಟ ಸೃಜನ್ ಮಾಡಿದ ಕಾಮೆಂಟ್ ಏನು?
'ಕುರುಕ್ಷೇತ್ರ' ಸಿನಿಮಾದಲ್ಲಿ ಬಿಜಿ ಇದ್ದರು ದರ್ಶನ್ ಸ್ನೇಹಿತನ ತಾಯಿಯ ಹುಟ್ಟುಹಬ್ಬ ಮಾಡಿದ್ದಾರೆ. ಅಂದಹಾಗೆ, ದರ್ಶನ್ ಮತ್ತು ಸೃಜನ್ ಅನೇಕ ಸಿನಿಮಾಗಳನ್ನು ಸಹ ಒಟ್ಟಿಗೆ ಮಾಡಿದ್ದಾರೆ. 'ಜಗ್ಗುದಾದ', 'ಚಕ್ರವರ್ತಿ' ಸಿನಿಮಾಗಳು ಇತ್ತೀಚಿಗಿನ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬಂದ ಸಿನಿಮಾಗಳಾಗಿವೆ.