»   » ಕ್ರಿಸ್ ಮಸ್ ಹಬ್ಬದ ಸಂಭ್ರಮದಲ್ಲಿ 'ಡಿ-ಬಾಸ್' ಅಂಡ್ ಟೀಮ್

ಕ್ರಿಸ್ ಮಸ್ ಹಬ್ಬದ ಸಂಭ್ರಮದಲ್ಲಿ 'ಡಿ-ಬಾಸ್' ಅಂಡ್ ಟೀಮ್

Posted By:
Subscribe to Filmibeat Kannada

ದೇಶದಾದ್ಯಂತ ಕ್ರಿಸ್ ಮಸ್ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮವನ್ನ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಸೆಲೆಬ್ರೆಟ್ ಮಾಡಿರುವುದು ವಿಶೇಷ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಅರ್ಜುನ್ ಜರ್ನಾ, ಪ್ರಜ್ವಲ್ ದೇವರಾಜ್, ನೆನಪಿರಲಿ ಪ್ರೇಮ್, ಪನ್ನಾಗಭರಣ ಸೇರಿದಂತೆ ಇನ್ನು ಹಲವರು ಒಟ್ಟಿಗೆ ಸೇರಿ ಯೇಸು ಕ್ರಿಸ್ತನ ಹಬ್ಬವನ್ನ ಆಚರಿಸಿದ್ದಾರೆ.

ಮೈಸೂರಿನಲ್ಲಿ ಕ್ರಿಸ್ಮಸ್ ಪಾರ್ಟಿ ಮಾಡಿರುವ ಸ್ಯಾಂಡಲ್ ವುಡ್ ತಾರೆಯರು, ಪ್ಯಾಲೆಸ್ ಸಿಟಿಯಲ್ಲಿ ರಾತ್ರಿಯ ಊಟ ಮಾಡಿದ್ದಾರೆ. ಈ ಫೋಟೋಗಳನ್ನ ಲವ್ಲಿ ಸ್ಟಾರ್ ಪ್ರೇಮ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

darshan and team celebrate christmas

ಹೈದ್ರಾಬಾದ್ ನಲ್ಲಿ ದರ್ಶನ್, ಅರ್ಜುನ್ ಸರ್ಜಾ, ರವಿಚಂದ್ರನ್ ಹಾಗೂ ಇನ್ನಿತರರು ಅಭಿನಯಿಸುತ್ತಿರುವ 'ಕುರುಕ್ಷೇತ್ರ' ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಮತ್ತೊಂದೆಡೆ ಪ್ರಜ್ವಲ್ ದೇವರಾಜ್, ಪ್ರೇಮ್ ಮತ್ತು ಹರಿಪ್ರಿಯಾ ಅಭಿನಯಿಸುತ್ತಿರುವ 'ಲೈಫ್ ಜೊತೆ ಒಂದು ಸೆಲ್ಫಿ' ಸಿನಿಮಾ ಚಿತ್ರೀಕರಣ ಮಂಗಳೂರಿನಲ್ಲಿ ನಡೆಯುತ್ತಿದೆ. ಈ ಚಿತ್ರವನ್ನ ದಿನಕರ್ ತೂಗುದೀಪ್ ನಿರ್ದೇಶನ ಮಾಡುತ್ತಿದ್ದು, ತೂಗುದೀಪ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

darshan and team celebrate christmas
English summary
Kannada Actor darshan, arjun sarja, nenapirali prem, prajwal devraj and pannaga bharana are celebrate christmas festival at mysore.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada