ದರ್ಶನ್-ಪವಿತ್ರಾ ಗೌಡ ವಿಚಾರಣೆಗೆ ಕೋರ್ಟ್ ಬರೋದಿಲ್ಲ; ಜೈಲಾ? ಜಾಮೀನಾ?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಗ್ಯಾಂಗ್ ಆರೋಪಿಗಳಾಗಿದ್ದಾರೆ. ಈ ಸಂಬಂಧ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನವನ್ನು ವಿಧಿಸಿದ್ದರು. ಆ ಅವಧಿ ಇಂದಿಗೆ (ಜುಲೈ 4) ಮುಗಿದ ಹಿನ್ನೆಲೆಯಲ್ಲಿ ನಿಯಮದಂತೆ ದರ್ಶನ್ ಹಾಗೂ ಅವರ ಗ್ಯಾಂಗ್ ಅನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದೆ.
ಆದರೆ, ಇಂದು (ಜುಲೈ 4) ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರು ನ್ಯಾಯಾಲಯಕ್ಕೆ ಕರೆದುಕೊಂಡು ಬರುವುದು ಅನುಮಾನ ಎನ್ನಲಾಗಿದೆ. ಇಂದು (ಜುಲೈ 4) ದರ್ಶನ್‌ಗೆ ಜಾಮೀನು ಸಿಗಬಹುದು ಎಂದು ಮಹದಾಸೆಯಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೇ ವೇಳೆ ದರ್ಶನ್ ಕೋರ್ಟ್‌ಗೆ ಬರುತ್ತಿಲ್ಲ ಅನ್ನೋ ವಿಷಯ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಪವಿತ್ರಾ ಗೌಡ ಪರ ವಕೀಲರು ನೀಡಿರುವ ಮಾಹಿತಿ ಪ್ರಕಾರ, ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಅವರ ಸಹಚರರು ಇಂದು ಕೋರ್ಟ್‌ಗೆ ಬರುವುದಿಲ್ಲ. ಆದರೆ, ಆನ್‌ಲೈನ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಷ್ಟಕ್ಕೂ ಈ ನಿರ್ಧಾರ ಯಾಕೆ ಅನ್ನೋದಕ್ಕೆ ನಿಖರವಾದ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧಿಸಿ ಮೇಲೆ 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಆ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ ಇಂದು (ಜುಲೈ 4) ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅವರ ಸಹಚರರಿಗೆ ಪ್ರಮುಖ ದಿನವಾಗಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರೂ ಜಾಮೀನ ನಿರೀಕ್ಷೆಯಲ್ಲಿದ್ದಾರೆ. ಆದರೆ, ನ್ಯಾಯಾಧೀಶರು ನೀಡುವ ಆದೇಶದಲ್ಲಿ ದರ್ಶನ್ ಜೈಲಿನಲ್ಲೇ ಇರುತ್ತಾರಾ? ಇಲ್ಲ ಜಾಮೀನು ಸಿಗುತ್ತಾ? ಅನ್ನೋದು ಇನ್ನು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ.

ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಕೋರ್ಟ್‌ಗೆ ಕರೆದುಕೊಂಡು ಬಾರದೆ ಇರುವುದಕ್ಕೆ ಕಾರಣವಿದೆ. ದರ್ಶನ್ ಕೋರ್ಟ್ ಆವರಣದೊಳಗೆ ಬರುತ್ತಿದ್ದಂತೆ ಅಭಿಮಾನಿಗಳು ಸೇರಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಪೊಲೀಸ್ ವಾಹನವನ್ನು ಚೇಜ್ ಮಾಡಿಕೊಂಡು ಬರುತ್ತಾರೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಜೊತೆಗಾರರನ್ನು ಆನ್‌ಲೈನ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರ ಗೌಡಗೆ ಈ ಬಾರಿ ಜಾಮೀನು ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಜಾಮೀನು ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದ್ದರೂ, ದರ್ಶನ್ ಹಾಗೂ ಪವಿತ್ರಾ ಗೌಡ ಪರ ವಕೀಲರು ಶತಪ್ರಯತ್ನವನ್ನು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಆರೋಪಿಗಳ ಪರ ವಕೀಲರು ಇಂದು (ಜುಲೈ 9) ನ್ಯಾಯಾಧೀಶರ ಮುಂದೆ ಯಾವ ರೀತಿ ವಾದ ಮಾಡುತ್ತಾರೆ ಅನ್ನೋ ಕುತೂಹಲವಿದೆ.
ಇತ್ತ ಕನ್ನಡ ಚಿತ್ರರಂಗದಲ್ಲಿ ಹಿರಿಯ ನಟಿ ಭಾವನಾ ರಾಮಣ್ಣ, ಹಂಸಲೇಖ, ಕೆ.ಮಂಜು ಸೇರಿದಂತೆ ಹಲವರು ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ದರ್ಶನ್ ಆರೋಪ ಮುಕ್ತರಾಗಿ ಹೊರಬರುತ್ತಿದ್ದಾರೆಂದು ಹೇಳುತ್ತಿದ್ದಾರೆ. ಆದರೆ, ಯಾರೇನು ಅಂದರೂ ಪೊಲೀಸರು ಸಲ್ಲಿಸುವ ಚಾರ್ಜ್ ಶೀಟ್ ಮೇಲೆ ದರ್ಶನ್ ಭವಿಷ್ಯ ನಿರ್ಧರಿಸಿದೆ.


Click it and Unblock the Notifications











