Don't Miss!
- Sports
U-19 ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ದಾದಾ ಮೆಚ್ಚುಗೆ
- News
ಬಿಜೆಪಿಯವರು ನಮ್ಮ ಬಳಿ ಸಿಡಿ ಇದೆ ಎಂದು ಹೇಳಿ, ಬಟ್ಟೆ ಹಾವು ತೋರಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದರ್ಶನ್ ಮೇಲೆ ಚಪ್ಪಲಿ ಎಸೆತ: ದಾವಣಗೆರೆಯಲ್ಲಿ ಅಭಿಮಾನಿಗಳ ಪ್ರತಿಭಟನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಮೇಲೆ ಚಪ್ಪಲಿ ಎಸೆದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕಾನೂನು ರೀತಿಯಲ್ಲಿ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಜಿಲ್ಲಾ ಹಾಗೂ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು, ಗಾಂಧಿ ಸರ್ಕಲ್, ಪಿ.ಬಿ.ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.
'ಕೆಜಿಎಫ್
2'
ಹಾಡಿನಲ್ಲಿ
ರಾಹುಲ್
ಗಾಂಧಿ!
ಬೆಂಗಳೂರು
ಪೊಲೀಸರಿಂದ
ಪ್ರಕರಣ
ದಾಖಲು
ಕಳೆದ ಡಿಸೆಂಬರ್ 18ರ ರಾತ್ರಿ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ದರ್ಶನ್ ತೂಗುದೀಪ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಪ್ರಮೋಷನ್‌ಗೆ ಚಿತ್ರತಂಡ ಬಂದಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಡಿ-ಬಾಸ್ ಮೇಲೆ ಚಪ್ಪಲಿ ತೂರಿ ತೇಜೋವಧೆ ಮಾಡಲು ಯತ್ನಿಸಲಾಗಿದೆ. ಇಷ್ಟಾದರೂ ದರ್ಶನ್ ತೂಗುದೀಪ ಅವರು ಆಯ್ತು ಚಿನ್ನ ಎಂದು ಹೇಳಿ ರಚಿತಾ ರಾಮ್ ಅವರಿಗೆ ಮಾತನಾಡಲು ಮೈಕ್ ನೀಡಿದ್ದಾರೆ. ಇದು ಅವರ ದೊಡ್ಡ ಗುಣ ತೋರಿಸುತ್ತದೆ ಎಂದು ದರ್ಶನ್ ತೂಗುದೀಪ ಅಭಿಮಾನಿಗಳು ಹೇಳಿದರು.

ಏಳಿಗೆ ಸಹಿಸದೆ ಕುಕೃತ್ಯ: ಆರೋಪ
ಕರ್ನಾಟಕ ಮಾತ್ರವಲ್ಲದೇ, ಬೇರೆ ರಾಜ್ಯಗಳಲ್ಲಿಯೂ ದರ್ಶನ್ ತೂಗುದೀಪ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ದೇವರಂತೆ ಆರಾಧಿಸುತ್ತಾರೆ. ಇಷ್ಟೊಂದು ಫ್ಯಾನ್ಸ್ ಹೊಂದಿರುವ ಖ್ಯಾತ ನಟನ ಏಳಿಗೆ ಸಹಿಸದೇ ಕೆಲವರು ಇಂಥ ಕುಕೃತ್ಯ ನಡೆಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ದುರ್ವರ್ತನೆ ತೋರಿದವರ ವಿರುದ್ಧ ಕಠಿಣ ಕ್ರಮ ಆಗಲೇಬೇಕು. ಇಲ್ಲದಿದ್ದರೆ, ದರ್ಶನ್ ಅಭಿಮಾನಿಗಳು ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯ
ಕೂಡಲೇ ಎಲ್ಲಾ ಕಿಡಿಗೇಡಿಗಳ ಬಂಧನ ಆಗಬೇಕು. ಬಂಧನವಾದರೆ ಸಾಲದು, ಕಠಿಣ ಕ್ರಮ ಆಗಲೇಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಯಾವ ಕಲಾವಿದರಿಗೂ ಈ ರೀತಿ ಆಗದಂತೆ ಸೂಕ್ತ ಸುರಕ್ಷಿತ ಕ್ರಮ ತೆಗೆದುಕೊಳ್ಳಬೇಕು. ಪೊಲೀಸರ ಸಮ್ಮುಖದಲ್ಲಿ ಇಂಥ ಘಟನೆ ನಡೆದಿರುವುದು ದುರದೃಷ್ಟಕರ ಎಂದು ತಿಳಿಸಿದರು.

'ಕ್ರಾಂತಿ' ಸಿನಿಮಾ ಬೆಂಬಲಿಸುವಂತೆ ಮನವಿ
ರಾಜ್ಯದಲ್ಲಿ 'ಕ್ರಾಂತಿ' ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದರ್ಶನ್ ಅಭಿನಯದ ಈ ಚಿತ್ರ ವೀಕ್ಷಿಸಲು ಅಭಿಮಾನಿಗಳು ತುದಿಗಾಲ ಮೇಲೆ ಕಾಯುತ್ತಿದ್ದಾರೆ. ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿವೆ. ದರ್ಶನ್ ಅವರು ನಟಿಸಿರುವ ಕ್ರಾಂತಿ ಸಿನಿಮಾ ಕನ್ನಡ ಭಾಷೆಯಷ್ಟೇ ಅಲ್ಲ, ಬೇರೆ ಭಾಷೆಗಳಲ್ಲಿಯೂ ಬಿಡುಗಡೆ ಆಗುತ್ತಿದೆ. ಎಲ್ಲಾ ಅಭಿಮಾನಿಗಳು ಕ್ರಾಂತಿ ಆಗಮನಕ್ಕೆ ಜಾತಕಪಕ್ಷಿಗಳಂತೆ ಎದುರು ನೋಡುತ್ತಿದ್ದು, ದರ್ಶನ್ ತೂಗುದೀಪ ಅವರ ಸಿನಿಮಾ ನೋಡುವ ಮೂಲಕ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಯಾವ ಕಲಾವಿದನಿಗೂ ಹೀಗೆ ಆಗಬಾರದು: ದರ್ಶನ್
ಇಂದು ದರ್ಶನ್ ಅವರಿಗೆ ಅವಮಾನ ಮಾಡಿರಬಹುದು. ಮುಂದೆ ಯಾವ ಕಲಾವಿದರೂ ಇಂಥ ಮುಜುಗರ ಸನ್ನಿವೇಶ ಎದುರಿಸುವಂತ ವಾತಾವರಣ ನಿರ್ಮಾಣ ಆಗಬಾರದು ಎಂಬುದೇ ನಮ್ಮ ಅಪೇಕ್ಷೆ. ಪ್ರತಿಯೊಬ್ಬ ನಟರಿಗೂ ಅವರದ್ದೇ ಆದ ಅಭಿಮಾನಿಗಳ ಬಳಗ ಇರುತ್ತದೆ. ಕಲೆ, ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕಿದೆ. ಎಲ್ಲರೂ ಸಹನೆ, ಸಂಯಮದಿಂದ ವರ್ತಿಸಬೇಕು. ನಟರಿಗೆ ಅಪಮಾನ ಯಾರೇ ಮಾಡಿದರೂ ತಪ್ಪು ಎಂದು ಅಭಿಪ್ರಾಯಪಟ್ಟರು. ಪ್ರತಿಭಟನೆಯಲ್ಲಿ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೆ. ಜಿ. ಚಂದ್ರಣ್ಣ, ಉಪಾಧ್ಯಕ್ಷ ಮಂಜಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಅಜಯ್ , ಸುರೇಶ್ ಆವರಗೆರೆ , ಕೃಷ್ಣ, ಮಧು, ನಗರ ಘಟಕದ ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ವಿಜಯಕುಮಾರ್, ಶಿವು ಸೇರಿದಂತೆ ನೂರಾರು ಡಿ ಬಾಸ್ ಅಭಿಮಾನಿಗಳು ಪಾಲ್ಗೊಂಡಿದ್ದರು.