Darshan: 'ಕಾಟೇರ' ಶೂಟಿಂಗ್ ವೇಳೆ ದರ್ಶನ್ ಕಾಲಿಗೆ ಪೆಟ್ಟು.. ಏನಿದು ಘಟನೆ?

'ಕ್ರಾಂತಿ' ಬಳಿಕ ಚಾಲೆಂಜಿಂಗ್‌ ಸ್ಟಾರ್ ದರ್ಶನ್ 'ಕಾಟೇರ' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರಿನ ಸುತ್ತಮುತ್ತವೇ ಬಹುತೇಕ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ಚಾಲೆಂಜಿಂಗ್‌ ಸ್ಟಾರ್ ಕಾಲಿಗೆ ಪೆಟ್ಟು ಬಿದ್ದಿದೆ.

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ 'ಕಾಟೇರ' ಕೂಡ ಒಂದು. ತರುಣ್ ಸುಧೀರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

Darshan leg injury while Kaatera movie shooting in Mysore

70ರ ದಶಕದ ವೇಳೆ ನಡೆದ ಕಥೆಗೆ ಕಾಲ್ಪನಿಕ ಟಚ್ ಕೊಟ್ಟು 'ಕಾಟೇರ' ಸಿನಿಮಾ ಮಾಡಲಾಗುತ್ತಿದೆ. ಇಲ್ಲಿ ದರ್ಶನ್ ಪಕ್ಕಾ ಗ್ರಾಮೀಣ ಪ್ರದೇಶದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ 'ಕಾಟೇರ' ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಇದೇ ವೇಳೆ ದರ್ಶನ್ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ.

ದರ್ಶನ್ ಕಾಲಿಗೆ ಪೆಟ್ಟು

ದರ್ಶನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದರ್ಶನ್ ಆಸ್ಪತ್ರೆಗೆ ಬಂದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಈ ವೇಳೆ ದರ್ಶನ್ ಕುಂಟುತ್ತಲೇ ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಈ ವಿಡಿಯೋದಲ್ಲಿ ದರ್ಶನ್ ಕಾಲಿಗೆ ಪೆಟ್ಟು ಆಗಿರುವುದು ಎದ್ದು ಕಾಣುತ್ತಿದೆ. ಆಸ್ಪತ್ರೆಯಿಂದಲೇ ಹೊರಬಂದು ಅಭಿಮಾನಿಗಳಿಗೊಂದು ಸ್ಮೈಲ್ ಕೊಟ್ಟು ಕಾರು ಹತ್ತಿ ಹೊರಟಿದ್ದಾರೆ. ಇದೇ ವಿಡಿಯೋ ಇಟ್ಟುಕೊಂಡು ಅಭಿಮಾನಿಗಳು ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸುತ್ತಿದ್ದಾರೆ.

'ಕಾಟೇರ' ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು

ಮೂಲಗಳ ಪ್ರಕಾರ, 'ಕಾಟೇರ' ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಕೆಲವು ದಿನಗಳಿಂದ ನಡೆಯುತ್ತಿರುವ ಶೂಟಿಂಗ್‌ನಲ್ಲಿ ದರ್ಶನ್‌ಗೆ ಸಂಬಂಧಿಸಿದ ದೃಶ್ಯಗಳ ಚಿತ್ರೀಕರಣ ಮಾಡಲಾಗುತ್ತಿತ್ತು. ಈ ವೇಳೆ ದರ್ಶನ್ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಸಂಬಂಧ ದರ್ಶನ್ ಆಸ್ಪತ್ರೆ ಬಂದು ಚಿಕಿತ್ಸೆ ಪಡೆದು ಹೋಗಿದ್ದಾರೆ.

ಅಷ್ಟಕ್ಕೂ ದರ್ಶನ್‌ಗೆ ಪೆಟ್ಟು ಬಿದ್ದಿದ್ದು ಹೇಗೆ? ಗಾಯದ ಪ್ರಮಾಣ ಎಷ್ಟಿದೆ? ವೈದ್ಯರು ಎಷ್ಟು ದಿನ ವಿಶ್ರಾಂತಿ ಪಡೆಯಲು ಹೇಳಿದ್ದಾರೆ? ಎಂಬುವುದರ ಬಗ್ಗೆ ಸದ್ಯ ಮಾಹಿತಿ ಇಲ್ಲ. ಮೈಸೂರಿನಲ್ಲಿ ಶೂಟಿಂಗ್ ಮಾಡುವಾಗ ಪೆಟ್ಟಾಗಿದೆ ಅನ್ನೋ ಬಗ್ಗೆ ಮಾಹಿತಿ ಅಷ್ಟೇ ಸಿಕ್ಕಿದೆ.

'ರಾಬರ್ಟ್' ಬಳಿಕ ಮತ್ತೆ ಹಿಟ್ ಕಾಂಬಿನೇಷನ್

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ 'ಕಾಟೇರ' ಕೂಡ ಇದೆ. ಅದಕ್ಕೆ ಕಾರಣ ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್. ಈ ಹಿಂದೆ ಇಬ್ಬರೂ ಜೊತೆಯಾಗಿ ನಟಿಸಿದ 'ರಾಬರ್ಟ್' ಸಿನಿಮಾ ಬ್ಲಾಕ್‌ಬಸ್ಟರ್ ಲಿಸ್ಟ್ ಸೇರಿತ್ತು. ಹೀಗಾಗಿ 'ಕಾಟೇರ' ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಅಲ್ಲದೆ 70-80ರ ದಶಕದ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ ಆಗಿರೋದ್ರಿಂದ ದರ್ಶನ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರೊಂದಿಗೆ 'ಉಳುವವನೇ ಹೊಲದೊಡೆಯ' ಅನ್ನೋ ಖಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಹಾಗೇ ಮಾಲಾಶ್ರೀ ಪುತ್ರಿ ಇದೇ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

More from Filmibeat

English summary
Darshan leg injured in Kaatera Shooting
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X