ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ಜೈಲಿನಲ್ಲಿರುವ ನಟ ದರ್ಶನ್; ಕಾರಣ ಏನು?

ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ರೇಣುಕಾಸ್ವಾಮಿ ಪ್ರಕರಣ ಬೆಳಕಿಗೆ ಬಂದಿತ್ತು. ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿತ್ತು. ಬಳಿಕ ಜಾಮೀನು ಪಡೆದು ಎಲ್ಲರೂ ಹೊರ ಬಂದಿದ್ದರು. ಆದರೆ ಕಳೆದ ವರ್ಷ ಜಾಮೀನು ರದ್ದಾಗಿ ಮತ್ತೆ ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿತ್ತು.

ದರ್ಶನ್ ಮತ್ತೆ ಕೇಂದ್ರ ಕಾರಾಗೃಹ ಸೇರಿ 8 ತಿಂಗಳು ಕಳೆದಿದೆ. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಪ್ರಕರಣದ ಟ್ರಯಲ್ ಆರಂಭವಾಗಿದೆ. ಮೊದಲ ಸಾಕ್ಷಿಯಾಗಿ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹಾಗೂ ತಂದೆ ಕಾಶಿನಾಥಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆ ಬಳಿಕ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಿಗಲಿಲ್ಲ.

Darshan Moves Supreme Court Again Seeking Interim Bail in Renukaswamy Case

ಏಪ್ರಿಲ್ 27ರಂದು ವಕೀಲ ರಂಜಿತ್ ರೋಹಟಗಿ ಮೂಲಕ ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮೇ 4ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ಮಧ್ಯಂತರ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಜೈಲು ವಾಸಕ್ಕೆ ಬೇಸತ್ತು ದರ್ಶನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದೆ, ಹಾಗಾಗಿ ಜಾಮೀನು ನೀಡಿ ಎಂದು ಮನವಿ ಮಾಡಿರುವುದಾಗಿ ಹೇಳಲಾಗ್ತಿದೆ.

2024ರ ಜೂನ್ 9ರಂದು ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿ ಹ*ತ್ಯೆ ಪ್ರಕರಣ ಬದಲಾಗಿತ್ತು. ಪೊಲೀಸರ ತನಿಖೆ ವೇಳೆ ನಟ ದರ್ಶನ್‌ಗೂ ಈ ಹ*ತ್ಯೆಗೂ ಸಂಬಂಧವಿದೆ ಎನ್ನಲಾಗಿತ್ತು. ಇದೇ ಕಾರಣಕ್ಕೆ ಜೂನ್ 11ರಂದು ದರ್ಶನ್ ಸೇರಿ ಉಳಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿ ಬಳಿಕ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಜೂನ್ 22ರಂದು ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.

ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗ್ತಿದೆ ಎನ್ನುವ ಆರೋಪ ಕೇಳಿಬಂದಿತ್ತು. ಹಾಗಾಗಿ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಆರೋಪಿಗಳನ್ನು ಪೊಲೀಸರು ಸ್ಥಳಾಂತರಿಸಿದ್ದರು. ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಉಳಿದುಕೊಳ್ಳುವಂತಾಗಿತ್ತು. ಅಕ್ಟೋಬರ್ 30ರಂದು ಬೆನ್ನು ನೋವಿನ ಶಸ್ತ್ರ ಚಿಕಿತ್ಸೆ ನೆಪವೊಡ್ಡಿ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು. ಕೆಲ ದಿನ ವಿಶ್ರಾಂತಿ ಪಡೆದಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಆದರೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ.

ಡಿಸೆಂಬರ್ ವೇಳೆಗೆ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಈ ಬಗ್ಗೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ರದ್ದು ಮಾಡಿತ್ತು. ನ್ಯಾಯಮೂರ್ತಿಗಳಾದ ಜೆ. ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠ ಈ ಆದೇಶ ಹೊರಡಿಸಿತ್ತು. ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ, "ಕಾನೂನಿನ ಮುಂದೆ ಯಾರು ದೊಡ್ಡವರಲ್ಲ" ಎನ್ನುವ ಸಂದೇಶ ಸಾರಿತ್ತು.

ರೇಣುಕಾಸ್ವಾಮಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಕೂಡ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ದರ್ಶನ್‌ಗೆ ಕೂಡ ಜಾಮೀನು ಸಿಗುವುದು ಕಷ್ಟ ಎನ್ನಲಾಗ್ತಿದೆ.

Read more about: darshan sandalwood controversy
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X