ಮೈಸೂರಿನಲ್ಲಿ ಕಾರು ಅಪಘಾತ, 'ದಾಸ' ದರ್ಶನ್ ಗೆ ಕೈ ಮುರಿತ

By ತೃಪ್ತಿ ಹೆಗ್ಡೆ

Recommended Video

ಮೈಸೂರಿನಲ್ಲಿ ದರ್ಶನ್ ಕಾರ್‌ಗೆ ಅಪಘಾತ..! | Oneindia Kannada

ಮೈಸೂರು, ಸೆಪ್ಟೆಂಬರ್ 24: ಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಅವರ ಕೈ ಮುರಿದಿದೆ ಎಂದು ವರದಿಗಳು ತಿಳಿಸಿವೆ.

ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಘಟನೆ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ.

ದರ್ಶನ್ ಅವರೊಂದಿಗೆ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಸಹ ಪ್ರಯಾಣಿಸುತ್ತಿದ್ದರು. ಅವರಿಗೂ ಗಾಯವಾಗಿದ್ದು, ಮೂವರಿಗೂ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದ್ದು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ

ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ,ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿ ಎಂದು ವರದಿಗಳು ತಿಳಿಸಿವೆ.

ದರ್ಶನ್ ಗೆ ಶಸ್ತ್ರ ಚಿಕಿತ್ಸೆ

ದರ್ಶನ್ ಗೆ ಶಸ್ತ್ರ ಚಿಕಿತ್ಸೆ

ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಮೀಲಗಳು ಮಾಹಿತಿ ನೀಡಿವೆ. ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದೆ.

ಅಪಘಾತ ಆಗಿದ್ದೇಕೆ?

ಅಪಘಾತ ಆಗಿದ್ದೇಕೆ?

ಚಾಲಕನ ನಿಯಂತ್ರಣ ತಪ್ಪಿ, ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದ್ದು, ಕಾರು ಪಂಚರ್ ಆದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿ ನಟರು ಸುಮಾರು 3:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಡೆಯ ಚಿತ್ರದ ಶೂಟಿಂಗ್

ಒಡೆಯ ಚಿತ್ರದ ಶೂಟಿಂಗ್

'ಒಡೆಯ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದರ್ಶನ್, ಅದಕ್ಕೆಂದೇ ಮೈಸೂರಿಗೆ ತೆರಳಿದ್ದರು ಎನ್ನಲಾಗಿದೆ. ಕಾರ್ಯಕ್ರಮ ಮುಗಿಸಿ ತಡರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.ಅಪಘಾತಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

More from Filmibeat

English summary
Kannada actor Darshan along with actors Devraj and Prajwal Devraj met with an accident near Mysuru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X