For Quick Alerts
  ALLOW NOTIFICATIONS  
  For Daily Alerts

  'ರಾಬರ್ಟ್' ಪ್ರಿ-ರಿಲೀಸ್ ಕಾರ್ಯಕ್ರಮ: ಹೈದರಾಬಾದ್ ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ರಿಲೀಸ್ ಗೆ ದಿನಗಣನೆ ಪ್ರಾರಂಭವಾಗಿದೆ. ಸಿನಿಮಾತಂಡ ಸದ್ಯ ಭರ್ಜರಿ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ರಾಬರ್ಟ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಅದ್ದೂರಿಯಾಗಿ ರಿಲೀಸ್ ಆಗುತ್ತಿದ್ದು, ತೆಲುಗು ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

  ಹೈದ್ರಾಬಾದ್ ನಲ್ಲಿ ಇಂದಿನಿಂದ ಡಿ ಬಾಸ್ ಅಬ್ಬರ ಶುರು | DBOSS in Hyderabad | Pre-Release Event Roberrt

  ಸದ್ಯ ಹೈದರಾಬಾದ್ ನಲ್ಲಿ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೈದರಾಬಾದ್ ತಲುಪಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಹೈದರಾಬಾದ್ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡ ದರ್ಶನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

  ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆಗೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

  ಇಂದು ಫೆಬ್ರವರಿ 26ರಂದು ಹೈದರಾಬಾದ್ ನ ಜಿ ಆರ್ ಜಿ ಹಾಲ್ ನಲ್ಲಿ ರಾಬರ್ಟ್ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಸಿನಿಮಾತಂಡ ಎಲ್ಲರಿಗೂ ಆಹ್ವಾನ ನೀಡಿದ್ದು, ಇವತ್ತಿನ ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಯಾರೆಲ್ಲ ಹಾಜರಿರಲಿದ್ದಾರೆ ಎನ್ನುವುದು ಕುತುಹಲ ಮೂಡಿಸಿದೆ.

  ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಸುಮಾರು 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ತರುಣ್ ಸುಧೀರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ರಾಬರ್ಟ್ ಸಿನಿಮಾಗೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ.

  ಅಂದಹಾಗೆ ರಾಬರ್ಟ್ ಹೈದರಾಬಾದ್ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಿನಿಮಾತಂಡ ಸಜ್ಜಾಗಿದೆ. ಇದೇ ತಿಂಗಳು 28ರಂದು ಹುಬ್ಬಳ್ಳಿಯಲ್ಲಿ ಅದ್ದೂರಿ ಪ್ರಿ ರಿಲೀಸ್ ಕಾರ್ಯಕ್ರಮ ನಡೆಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಲಿದ್ದಾರೆ.

  English summary
  Actor Darshan reached Hyderabad for Roberrt pre release Event.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X