ನಡೆದಾಡುವ ದೇವರ ಪುಣ್ಯ ಸ್ಮರಣೆ: 'ಅವರ ಕೆಲಸದಿಂದ ಸದಾ ಜೀವಂತ' ಎಂದ ದರ್ಶನ್
ನಡೆದಾಡುವ ದೇವರು, ತ್ರಿವಿಧ ದಾಸೋಹಿ ದಿವಂಗತ ಡಾ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆಯ ದಿನದಂದು ಚಲನಚಿತ್ರ ನಟ ದರ್ಶನ್ ಅವರು ಸ್ಮರಿಸಿಕೊಂಡಿದ್ದಾರೆ. ''ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದು ನೆನಪಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಾಸ ''ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ 2ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದಿದ್ದಾರೆ.
ಡಾ ಶಿವಕುಮಾರಸ್ವಾಮೀಜಿ ಅವರನ್ನು ಸ್ಮರಿಸಿದ ದರ್ಶನ್ ಅವರಿಗೆ ಧನ್ಯವಾದ ಹೇಳಿದ ಅಭಿಮಾನಿಗಳು ''ತ್ರಿವಿಧ ದಾಸೋಹಿ''ಯನ್ನು ನೆನಪಿಸಿಕೊಂಡಿದ್ದಾರೆ.

ಹಿರಿಯ ನಟ ಜಗ್ಗೇಶ್ ಅವರು ಸಹ ಶಿವಕುಮಾರ ಸ್ವಾಮೀಜಿ ಅವರನ್ನು ಸ್ಮರಿಸಿಕೊಂಡಿದ್ದು, ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದಿವೆ. ಬೆಳಗ್ಗೆಯಿಂದಲೂ ಭಕ್ತರು ಮಠಕ್ಕೆ ಆಗಮಿಸಿದ್ದರು. ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಸಹ ಪೂಜೆಯಲ್ಲಿ ಭಾಗವಹಿಸಿದ್ದರು.


Click it and Unblock the Notifications











