ಶಾಂತಿ ಕಾಪಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ ದರ್ಶನ್
Recommended Video

ಮಂಡ್ಯ ಲೋಕಸಭೆ ಅಖಾಡದಲ್ಲಿ ನಟ ದರ್ಶನ್ ಹಾಗೂ ಯಶ್ ಅವರ ವಿರುದ್ಧ ಹಲವು ಟೀಕೆಗಳು ಕೇಳಿಬರ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಬೆಂಬಲಿಗರು ದಾಸನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಗಳನ್ನ ಮಾಡಿ ನಿಂದಿಸುತ್ತಿದ್ದಾರೆ.
ಇದಕ್ಕೆ ಪ್ರತಿಯಾಗಿ ದರ್ಶನ್ ಅಭಿಮಾನಿಗಳು ಕೂಡ ಜೆಡಿಎಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮತ್ತು ವಿಡಿಯೋಗಳನ್ನ ಹಾಕುವ ಮೂಲಕ ಯುದ್ಧ ಸಾರಿದ್ದಾರೆ.
ಇದೆನ್ನಲ್ಲ ಗಮನಿಸಿದ ನಟ ದರ್ಶನ್ ತಮ್ಮ ಅಭಿಮಾನಿಗಳಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು, ಎಲ್ಲರೂ ಸಮಾಧಾನವಾಗಿ ಚುನಾವಣೆ ನಡೆಯಲು ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ.

''ಈ ಚುನಾವಣೆ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆಲ್ಲ ನಾನು ಬೇಜಾರು, ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ, ಅದೇ ರೀತಿ ನನ್ನ ಪ್ರೀತಿಯ ಅಭಿಮಾನಿಗಳು ಸಹ ಏನೇ ಹೇಳಿದರೂ ಅದರ ವಿರುದ್ಧ ಪೋಸ್ಟ್ ಮಾಡುವುದಾಗಲಿ, ವಿಡಿಯೋ ಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ ಕೊಡದೆ ಶಾಂತಿ ಕಾಪಾಡಿಕೊಂಡು ಆರಾಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸನ ಕಳಕಳಿಯ ವಿನಂತಿ'' ಎಂದು ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುಂಚೆ ಮಾಧ್ಯಮದವರ ಜೊತೆ ಮಾತನಾಡಿದ್ದ ದರ್ಶನ್, ಸಿಎಂ ಕುಮಾರಸ್ವಾಮಿ ಅವರ ಡಿ ಬಾಸ್ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ್ದರು. ನಾನು ಪ್ರಚಾರ ಮಾಡುತ್ತೇನೆ ಅಷ್ಟೇ, ಎಲೆಕ್ಷನ್ ಗೆ ನಿಂತಿಲ್ಲ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.


Click it and Unblock the Notifications











