Darshan Devil:ನಾಳೆಯಿಂದ ಮೈಸೂರಿನಲ್ಲಿ 'ಡೆವಿಲ್' ಶೂಟಿಂಗ್; ದರ್ಶನ್ ಭದ್ರತೆಗೆ ಎಷ್ಟು ಖರ್ಚು?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಪಿಯಾಗಿದ್ದರು. ಈ ಸಂಬಂಧ ಇದೇ ಡೆವಿಲ್ ಸಿನಿಮಾದ ಶೂಟಿಂಗ್‌ಗಾಗಿ ಮೈಸೂರಿನಲ್ಲಿದ್ದ ದರ್ಶನ್‌ರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಅಲ್ಲಿಂದ ದರ್ಶನ್ ನಟಿಸುತ್ತಿದ್ದ ಡೆವಿಲ್ ಸಿನಿಮಾದ ಶೂಟಿಂಗ್ ನಿಂತಿತ್ತು. ಈಗ ಮತ್ತೆ ಡೆವಿಲ್ ಸಿನಿಮಾದ ಶೂಟಿಂಗ್ ಆರಂಭ ಆಗಿದೆ.
'ಕಾಟೇರ'ದಂತಹ ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿದ ಬಳಿಕ ದರ್ಶನ್ 'ಡೆವಿಲ್' ಸಿನಿಮಾವನ್ನು ಒಪ್ಪಿಕೊಂಡಿದ್ದರು. ಮಿಲನ ಪ್ರಕಾಶ್ ಈ ಸಿನಿಮಾವನ್ನು ನಿರ್ದೇಶನ ಮಾಡಿತ್ತಿದ್ದರು. ಮೈಸೂರಿನಲ್ಲಿ ಬಹುತೇಕ ಶೂಟಿಂಗ್ ನಡೆದಿತ್ತು. 'ಡೆವಿಲ್' ಸಿನಿಮಾಗಾಗಿ ಟೀಮ್ ಸೆಟ್ ಹಾಕಿ ಶೂಟಿಂಗ್ ಮಾಡುತ್ತಿತ್ತು. ಅದೇ ಸಮಯದಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು.

ಆ ವೇಳೆ ನಿಂತಿದ್ದ 'ಡೆವಿಲ್' ಶೂಟಿಂಗ್ ಈಗ ಮತ್ತೆ ಆರಂಭ ಆಗಿದೆ. ಮತ್ತೆ ಮೈಸೂರಿನಿಂದಲೇ ಸಿನಿಮಾದ ಶೂಟಿಂಗ್ ಆರಂಭ ಆಗುತ್ತಿದ್ದು, ಇದು ಎರಡನೇ ಹಂತದ ಚಿತ್ರೀಕರಣ ಎನ್ನಲಾಗಿದೆ. ಹಾಗಿದ್ದರೆ, ಡೆವಿಲ್ ಸಿನಿಮಾವನ್ನು ಎಷ್ಟು ದಿನಗಳ ಕಾಲ? ಎಲ್ಲೆಲ್ಲಿ ಶೂಟಿಂಗ್ ಮಾಡುತ್ತಾರೆ ಅನ್ನೋ ಡಿಟೈಲ್ಸ್ ಇಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ದರ್ಶನ್ ಭದ್ರತೆಗಾಗಿ ಲಕ್ಷ ಲೆಕ್ಕದಲ್ಲಿ ಖರ್ಚು ಮಾಡಲಾಗುತ್ತಿದೆ ಎನ್ನಲಾಗಿದೆ.
'ಡೆವಿಲ್' ಸಿನಿಮಾದ ಶೂಟಿಂಗ್ ನಾಳೆಯಿಂದ (ಮಾರ್ಚ್ 12) ಆರಂಭ ಆಗುತ್ತಿದೆ. ಮೈಸೂರಿನಲ್ಲಿ ನಾಲ್ಕು ದಿನಗಳ ಕಾಲ, ಅಂದರೆ ಮಾರ್ಚ್ 12 ರಿಂದ 15ರವರೆಗೆ ಈ ಸಿನಿಮಾದ ಶೂಟಿಂಗ್ ನಡೆಯಲಿದ್ದು, ದರ್ಶನ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಶೆಡ್ಯೂಲ್‌ನಲ್ಲಿ ಟಾಕಿ ಪೋಷನ್ ಅನ್ನು ಶೂಟ್ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಆಕ್ಷನ್ ದೃಶ್ಯಗಳ ಚಿತ್ರೀಕರಣ ಇಲ್ಲ ಅನ್ನೋ ಮಾತು ಕೇಳಿ ಬರುತ್ತಿದೆ.
ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚು ಹೊತ್ತು ನಿಲ್ಲುವುದಕ್ಕೆ ಆಗುವುದಿಲ್ಲ ಎಂದು ಅವರೇ ಹೇಳಿಕೊಂಡಿದ್ದರು. ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೇ ಕಾರಣಕ್ಕೆ ದರ್ಶನ್ ಭಾಗದ ಟಾಕಿ ಪೋಷನ್ ಅನ್ನು ಮೊದಲು ಚಿತ್ರೀಕರಿಸುವುದಕ್ಕೆ ನಿರ್ದೇಶಕ ಮಿಲನ ಪ್ರಕಾಶ್ ನಿರ್ಧರಿಸಿದ್ದು, ಬೆನ್ನು ನೋವಿನಿಂದ ಗುಣಮುಖರಾದ ಬಳಿಕ ಆಕ್ಷನ್ ಸೀನ್‌ಗಳನ್ನು ಶೂಟ್ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿ ಪ್ರಕರಣದ ಬಳಿಕ ನಿಂತಿದ್ದ 'ಡೆವಿಲ್' ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದ್ದು ಅವರ ಅಭಿಮಾನಿಗಳಿಗೆ ಸಮಾಧಾನ ಕೊಟ್ಟಿದೆ. ಅದರಲ್ಲೂ ದರ್ಶನ್ ಮತ್ತೆ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಕ್ಕೆ ಥ್ರಿಲ್ ಆಗಿದ್ದಾರೆ. ಇನ್ನು 'ಡೆವಿಲ್' ಶೂಟಿಂಗ್‌ನಲ್ಲಿ ದರ್ಶನ್ ಭಾಗಿಯಾಗುವ ಬೆನ್ನಲ್ಲೇ ಭದ್ರತೆ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿಯನ್ನು ನೀಡಿದ್ದು, ಸರ್ಕಾರಿ ಅಥಿತಿ ಗೃಹದಲ್ಲಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ಮಾರ್ಚ್ 15ರಂದು ಲಲಿತಮಹಲ್ ಪ್ಯಾಲೆಸ್‌ನಲ್ಲಿ ಡೆವಿಲ್ ಶೂಟಿಂಗ್ ಬೆಳಗ್ಗೆ 7 ಗಂಟೆಯಿಂದ ಶೂಟಿಂಗ್ ಆರಂಭ ಆಗುತ್ತಿದೆ. ಹೀಗಾಗಿ 'ಡೆವಿಲ್' ಸಿನಿಮಾಗೆ 32 ಮಂದಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಚಿತ್ರತಂಡ ಸುಮಾರು 1,64,785 ರೂಪಾಯಿ ಹಣವನ್ನು ಖರ್ಚು ಮಾಡಿದೆ ಎಂದು ನ್ಯೂಸ್ 18 ಕನ್ನಡ ವರದಿ ಮಾಡಿದೆ.
ದರ್ಶನ್ ಹುಟ್ಟುಹಬ್ಬಕ್ಕೆ 'ಡೆವಿಲ್' ಸಿನಿಮಾ ಟೀಸರ್ ರಿಲೀಸ್ ಆಗಿತ್ತು. ದರ್ಶನ್ ಮಾಸ್ ಲುಕ್ ಹಾಗೂ ಡೈಲಾಗ್ ಝಲಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದರು. ಒಟ್ನಲ್ಲಿ 'ಡೆವಿಲ್' ಸಿನಿಮಾದಲ್ಲಿ ದರ್ಶನ್ ಮಾಸ್, ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಳ್ಳುವುದಂತೂ ಪಕ್ಕಾ. ಆದರೆ, ಈಗ ಶುರುವಾಗಿರುವ ಶೂಟಿಂಗ್ ಯಾವಾಗ ಮುಗಿಯುತ್ತೆ? ಯಾವಾಗ ರಿಲೀಸ್ ಆಗುತ್ತೆ ಅನ್ನೋದು ಸದ್ಯಕ್ಕೆ ಹೇಳುವುದಕ್ಕೆ ಕಷ್ಟ.


Click it and Unblock the Notifications











