ನವರಾತ್ರಿಗೆ 'ಡೆವಿಲ್' ಬಿಗ್ ಸರ್‌ಪ್ರೈಸ್; ದರ್ಶನ್ ಅಭಿಮಾನಿಗಳು ರೆಡಿನಾ?

ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಭರದಿಂದ ಸಾಗುತ್ತಿದ್ದು ಡಿಸೆಂಬರ್ 12ಕ್ಕೆ ಸಿನಿಮಾ ತೆರೆಗೆ ತರುವುದಾಗಿ ಚಿತ್ರತಂಡ ಘೋಷಿಸಿದೆ. ಈಗಾಗಲೇ 'ಇದ್ರೇ ನೆಮ್ದಿಯಾಗಿರ್ಬೇಕ್' ಸಾಂಗ್ ಹಿಟ್ ಆಗಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಆದರೂ ಸಿನಿಮಾ ಬಿಡುಗಡೆಗೆ ಯಾವುದೇ ತೊಂದರೆ ಆಗಬಾರದು ಎಂದು ದರ್ಶನ್ ಹೇಳಿದ್ದಾರೆ. ಹಾಗಾಗಿ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೀತಿದೆ. ಅಜನೀಶ್ ಲೋಕನಾಥ್ ಸಂಗೀತದಲ್ಲಿ ಚಿತ್ರದ ಮೊದಲ ಸಾಂಗ್ ಸದ್ಯ 15 ಮಿಲಿಯನ್ ವೀವ್ಸ್ ಸಾಧಿಸಿ ಸದ್ದು ಮಾಡ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹುಕ್ ಸ್ಟೆಪ್ ರೀಲ್ಸ್ ಮಾಡುವವರಿಗೆ ಲೆಕ್ಕವಿಲ್ಲ.

Darshan s Devil Locks December 12 Release Romantic Song to Drop During Navaratri

ನವರಾತ್ರಿ ಸಂಭ್ರಮದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ. ಆಕ್ಷನ್ ಥ್ರಿಲ್ಲರ್ 'ಡೆವಿಲ್' ಚಿತ್ರದಲ್ಲಿ ಒಟ್ಟು 4 ಹಾಡುಗಳಿವೆ. ಈ ಬಾರಿ ಲವ್ ಸಾಂಗ್ ಅಂದ್ರೆ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಆಗಲಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ವಾರವೇ ಸಾಂಗ್ ಹೊರ ಬರುವ ನಿರೀಕ್ಷೆ ಹೆಚ್ಚಿದೆ.

ಕಳೆದ ವರ್ಷ ದಸರಾ ಹಬ್ಬಕ್ಕೆ 'ಡೆವಿಲ್' ಸಿನಿಮಾ ತೆರೆಗೆ ತರುವ ಭರವಸೆ ನೀಡಿದ್ದರು ನಟ ದರ್ಶನ್. ಆದರೆ ರೇಣುಕಾಸ್ವಾಮಿ ಪ್ರಕರಣ ಬೆಳಕಿಗೆ ಬಂದು ಆರೋಪಿಯಾಗಿ ದರ್ಶನ್ ಜೈಲು ಸಂಕಷ್ಟ ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಚಿತ್ರೀಕರಣ ತಡವಾಗಿತ್ತು. ಒಂದೂವರೆ ವರ್ಷದ ಬಳಿಕ ಸಿನಿಮಾ ಬಿಡುಗಡೆ ತಯಾರಿ ನಡೀತಿದೆ.

Darshan s Devil Locks December 12 Release Romantic Song to Drop During Navaratri

'ಡೆವಿಲ್' ಚಿತ್ರದಲ್ಲಿ ದರ್ಶನ್ ಜೋಡಿಯಾಗಿ ರಚನಾ ರೈ ನಟಿಸಿದ್ದಾರೆ. ಇವರಿಬ್ಬರ ಕೆಮೆಸ್ಟ್ರಿ ಹೇಗಿರುತ್ತದೆ ಎಂದು ನೋಡಲು ಅಭಿಮಾನಿಗಳು ಕಾಯುವಂತಾಗಿದೆ. ವರ್ಷದ ಕೊನೆಗೆ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲಿ ದರ್ಶನ್ 'ಡೆವಿಲ್' ಸಿನಿಮಾ ಕೂಡ ಹೈಪ್ ಕ್ರಿಯೇಟ್ ಮಾಡ್ತಿದೆ. 14 ವರ್ಷಗಳ ಹಿಂದೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಅವರು ಜೈಲಿನಲ್ಲಿ ಇದ್ದಾಗಲೇ 'ಸಾರಥಿ' ಸಿನಿಮಾ ತೆರೆಕಂಡು ಗೆದ್ದಿತ್ತು. ಇದೀಗ 'ಡೆವಿಲ್' ಸಿನಿಮಾ ಅದೇ ಮ್ಯಾಜಿಕ್ ರಿಪೀಟ್ ಮಾಡುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಈ ಹಿಂದೆ ದರ್ಶನ್ ಹಾಗೂ ಪ್ರಕಾಶ್ ಕಾಂಬಿನೇಷನ್‌ನಲ್ಲಿ 'ತಾರಕ್' ಸಿನಿಮಾ ತೆರೆಕಂಡು ಸಕ್ಸಸ್ ಕಂಡಿತ್ತು. ಅದೇ ಜೋಡಿ ಮತ್ತೆ ಈ ಬಾರಿ ಒಟ್ಟಿಗೆ ಕೆಲಸ ಮಾಡಿದೆ. ಸ್ವತಃ ಪ್ರಕಾಶ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್‌ ಕುಮಾರ್, ಅವಿನಾಶ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಬೆಂಗಳೂರು, ರಾಜಸ್ಥಾನ ಹಾಗೂ ಥಾಯ್ಲೆಂಡ್‌ನಲ್ಲಿ ಸಿನಿಮಾ ಚಿತ್ರೀಕರಣ ನಡೆದಿದೆ. ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದ್ದು 4 ಹಾಡುಗಳಿಗೆ ಸಂತು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ.

ಈಗಾಗಲೇ ಸಣ್ಣ ಸಣ್ಣ ಟೀಸರ್‌ಗಳು ರಿಲೀಸ್ ಆಗಿ 'ಡೆವಿಲ್' ಸಿನಿಮಾ ಕುತೂಹಲ ಮೂಡಿಸಿದೆ. ದರ್ಶನ್ ಲುಕ್, ಗೆಟಪ್, ಮ್ಯಾನರಿಸಂ ಎಲ್ಲವೂ ಹೊಸತಾಗಿದೆ. ಇನ್ನು ಚಿತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿಯೂ ದರ್ಶನ್ ನಟಿಸಿದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. 'ಇದ್ರೇ ನೆಮ್ದಿಯಾಗಿರ್ಬೇಕ್' ಸಾಂಗ್ ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದ್ದು ಸುಳ್ಳಲ್ಲ. ಈಗ ಬರುವ ರೊಮ್ಯಾಂಟಿಕ್ ಸಾಂಗ್ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಡಿಸೆಂಬರ್‌ನಲ್ಲಿ 'ಡೆವಿಲ್' ಸಿನಿಮಾ ಜೊತೆಗೆ 'ಮಾರ್ಕ್' ಹಾಗೂ '45' ಚಿತ್ರಗಳು ಬಿಡುಗಡೆ ಆಗಲಿದೆ. ಹಾಗಾಗಿ ವರ್ಷಾಂತ್ಯಕ್ಕೆ ಸ್ಯಾಂಡಲ್‌ವುಡ್ ಬಾಕ್ಸಾಫೀಸ್ ಜೋರಾಗಿ ಸದ್ದು ಮಾಡುವ ಸುಳಿವು ಸಿಗುತ್ತಿದೆ.

More from Filmibeat

English summary
Darshan’s Devil Gears Up for December 12 Launch with New Romantic Song for Navratri Festivities
Read more about: darshan sandalwood devil
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X