For Quick Alerts
  ALLOW NOTIFICATIONS  
  For Daily Alerts

  ದರ್ಶನ್ ಹೊಸ ಸಿನಿಮಾದ ಟೈಟಲ್ ಬಿಡುಗಡೆಗೆ ದಿನಾಂಕ ಫಿಕ್ಸ್

  By ಫಿಲ್ಮಿಬೀಟ್ ಡೆಸ್ಕ್
  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸೂಪರ್ ಸಕ್ಸಸ್ ಬಳಿಕ ಯಾವುದೇ ಸಿನಿಮಾಗೆ ಸಹಿ ಮಾಡಿಲ್ಲ. ಕಳೆದ ವರ್ಷದ ಲಾಕ್ ಡೌನ್ ನಿಂದ ದರ್ಶನ್ ಯಾವುದೇ ಸಿನಿಮಾದ ಚಿತ್ರೀಕರಣದಲ್ಲಿಯೂ ಭಾಗಿಯಾಗಿಲ್ಲ. ಲಾಕ್ ಡೌನ್ ಬಳಿಕ ದರ್ಶನ್ ತೋಟದ ಮನೆಯಲ್ಲೇ ಸಮಯ ಕಳೆದಿದ್ದರು. ಇದೀಗ ವರ್ಷದ ಬಳಿಕ ಚಾಲೆಂಜಿಂಗ್ ಸ್ಟಾರ್ ಚಿತ್ರೀಕರಣದಲ್ಲಿ ಬ್ಯುಸಿಯಾಗುತ್ತಿದ್ದಾರೆ.

  ದರ್ಶನ್ ಹೊಸ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ದರ್ಶನ್ ಮುಂದಿನ ಸಿನಿಮಾ ಯಾವುದು ಎನ್ನುವುದು ಕುತೂಹಲ ಮೂಡಿಸಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬೀಳುವ ಸಮಯ ಹತ್ತರ ಬಂದಿದೆ. ದರ್ಶನ್ ಹೊಸ ಸಿನಿಮಾದ ಟೈಟಲ್ ಬಿಡುಗಡೆ ಮಾಡುವ ದಿನಾಂಕ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ ಸಿನಿಮಾತಂಡ.

  ಹಿಂದಿಯಲ್ಲಿ ರಾಬರ್ಟ್ ಅಬ್ಬರ: 5 ದಿನದಲ್ಲಿ 20 ಮಿಲಿಯನ್ ವೀಕ್ಷಣೆಹಿಂದಿಯಲ್ಲಿ ರಾಬರ್ಟ್ ಅಬ್ಬರ: 5 ದಿನದಲ್ಲಿ 20 ಮಿಲಿಯನ್ ವೀಕ್ಷಣೆ

  ಅಂದಹಾಗೆ ದರ್ಶನ್ ಮುಂದಿನ ಸಿನಿಮಾ ನಿರ್ಮಾಪಕಿ ಶೈಲಜಾ ನಾಗ್ ಜೊತೆ ಮಾಡುವುದಾಗಿ ಈಗಾಗಲೇ ಬಹಿರಂಗವಾಗಿತ್ತು. ಆದರೆ ಯಾವಾಗ, ಸಿನಿಮಾ ಟೈಟಲ್ ಏನು ಎನ್ನುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿರಲಿಲ್ಲ. ಇದೀಗ ಆ ಸಮಯ ಹತ್ತಿರಬಂದಿದೆ. ದರ್ಶನ್ ನಟನೆಯ 55ನೇ ಸಿನಿಮಾದ ಟೈಟಲ್ ಗಣೇಶ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ.

  ಸೆಪ್ಟಂಬರ್ 10 ಗಣೇಶ ಚತುರ್ಥಿ ದಿನ ಚಾಲೆಂಜಿಂಗ್ ಸ್ಟಾರ್ ನಟನೆಯ ಹೊಸ ಸಿನಿಮಾದ ಟೈಟಲ್ ಬಿಡುಗಡೆಯಾಗುತ್ತಿದೆ. ಈ ಮೂಲಕ ಅಭಿಮಾನಿಗಳ ಹಬ್ಬದ ಸಂಭ್ರಮ ಡಬಲ್ ಮಾಡುತ್ತಿದೆ ಸಿನಿಮಾತಂಡ. ಅಂದಹಾಗೆ ದರ್ಶನ್ 55ನೇ ಸಿನಿಮಾಗೆ ನಿರ್ಮಾಪಕಿ ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರ ಮೀಡಿಯ ಹೌಸ್ ಸ್ಟುಡಿಯೋ ಬ್ಯಾನರ್‌ನಲ್ಲಿ ಮೂಡಿಬರುತ್ತಿದೆ. ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

  ಅಂದಹಾಗೆ ಸೂಪರ್ ಹಿಟ್ ಯಜಮಾನ ಸಿನಿಮಾದ ಬಳಿಕ ಮತ್ತೆ ಈ ಟೀಂ ಒಂದಾಗುತ್ತಿರುವುದು ವಿಶೇಷ. ಯಜಮಾನ ಸಿನಿಮಾಗೂ ಹರಿಕೃಷ್ಣ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೀಗ ಎರಡನೇ ಬಾರಿ ದರ್ಶನ್‌ಗೆ ಆಕ್ಷನ್ ಕಟ್ ಹೇಳುತ್ತಿರುವುದು ಕುತೂಹಲ ಮಾಡಿಸಿದೆ. ಇನ್ನು ವಿಶೇಷ ಎಂದರೆ ದರ್ಶನ್ 55ನೇ ಸಿನಿಮಾ ಮೀಡಿಯ ಹೌಸ್ ಸ್ಟುಡಿಯೋದಲ್ಲಿ ಮೂಡಿಬರುತ್ತಿರುವ 10ನೇ ಸಿನಿಮಾವಾಗಿದೆ. ಚಿತ್ರದ ಬಗ್ಗೆ ಸದ್ಯ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ.

  ಸೆಪ್ಟಂಬರ್ 10ರಂದು ಟೈಟಲ್ ಜೊತೆಗೆ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ದರ್ಶನ್ ಕೊನೆಯದಾಗಿ ರಾಬರ್ಟ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು ರಾಬರ್ಟ್ ಸಿನಿಮಾ. ಈ ಚಿತ್ರಕ್ಕೆ ಉಮಾಪತಿ ಶ್ರಿನಿವಾಸ್ ಬಂಡವಾಳ ಹೂಡಿದ್ದರು. ಈ ಸಿನಿಮಾ ಬಳಿಕ ದರ್ಶನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಹೆಚ್ಚಾಗಿತ್ತು. ಇದೀಗ ಕುತೂಹಲಕ್ಕೆ ತೆರೆಬೀಳುವ ಸಮಯ ಹತ್ತರ ಬರ್ತಿದೆ.

  ಅಂದಹಾಗೆ ದರ್ಶನ್ ರಾಕ್ ಲೈನ್ ವೆಂಕಟೇಶ್ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ರಾಜವೀರ ಮದಕರಿ ನಾಯಕ ಸಿನಿಮಾ ತಡವಾದ ಕಾರಣ ಆ ಸಿನಿಮಾಗೂ ಮೊದಲು ದರ್ಶನ್, ರಾಕ್ ಲೈನ್ ವೆಂಕಟೇಶ್ ಜೊತೆ ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಆಗಲೇ ಶೈಲಜಾ ನಾಗ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  English summary
  Darshan's upcoming D55 movie title to launched on Ganesh Chaturthi September 10.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X