For Quick Alerts
  ALLOW NOTIFICATIONS  
  For Daily Alerts

  ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಖಾತೆಗಳು ಹ್ಯಾಕ್

  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಸಾಮಾಜಿಕ ಜಾಲತಾಣದ ಖಾತೆಗಳು ಹ್ಯಾಕ್ ಆಗಿವೆ ಎಂಬ ಸುದ್ದಿ ಹೊರಬಿದ್ದಿದೆ.

  ತಮಿಳು ಸ್ಟಾರ್ ಡೈರೆಕ್ಟರ್ ಸಿನಿಮಾ ಮೂಲಕ ಮತ್ತೆ ಒಂದಾದ ಶಿವಣ್ಣ, ಡಾಲಿ | Filmibeat Kannada

  ಈ ಕುರಿತು ಸ್ವತಃ ವಿಜಯಲಕ್ಷ್ಮಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ''ನನ್ನ ಸಾಮಾಜಿಕ ಜಾಲತಾಣ ಖಾತೆಗಳಿಂದ ಆಕ್ಷೇಪಾರ್ಹ ಪೋಸ್ಟ್ ಅಥವಾ ಸಂದೇಶಗಳು ಬಂದಲ್ಲಿ ದಯವಿಟ್ಟು ಕ್ಷಮಿಸಿ, ನನ್ನ ಸಾಮಾಜಿಕ ಜಾಲತಾಣಗಳು ಹ್ಯಾಕ್ ಆಗಿವೆ'' ಎಂದು ಬರೆದುಕೊಂಡಿದ್ದಾರೆ.

  ಉದ್ಯಮ ಕ್ಷೇತ್ರ ಪ್ರವೇಶಿಸುತ್ತಿದ್ದಂತೆ ಪ್ರಶಸ್ತಿ ಪಡೆದ ದರ್ಶನ್ ಪತ್ನಿಉದ್ಯಮ ಕ್ಷೇತ್ರ ಪ್ರವೇಶಿಸುತ್ತಿದ್ದಂತೆ ಪ್ರಶಸ್ತಿ ಪಡೆದ ದರ್ಶನ್ ಪತ್ನಿ

  ದರ್ಶನ್ ವಿಜಯಲಕ್ಷ್ಮಿ ಅವರ ಸೋಶಿಯಲ್ ಮೀಡಿಯಾ ಖಾತೆಗಳು ಹ್ಯಾಕ್ ಆಗಿದೆ ಎಂದು ತಿಳಿಯುತ್ತಿದ್ದಂತೆ ಅಭಿಮಾನಿಗಳು ಅಚ್ಚರಿಗೊಳಗಾಗಿದ್ದಾರೆ.

  ಅಂದ್ಹಾಗೆ, ವಿಜಯಲಕ್ಷ್ಮಿ ಅವರು ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಸಮಾಜದ ಬೆಳವಣಿಗೆ ಹಾಗೂ ಘಟನೆಗಳ ಬಗ್ಗೆ ಸದಾ ಪೋಸ್ಟ್ ಹಾಕುತ್ತಿರುತ್ತಾರೆ.

  ಇನ್ನು ವಿಜಯಲಕ್ಷ್ಮಿ ಕೆಲವು ದಿನಗಳ ಹಿಂದೆಯಷ್ಟೇ ಹೊಸ ಉದ್ಯಮವೊಂದನ್ನು ಆರಂಭಿಸಿದ್ದರು. 'ಮೈ ಫ್ರಶ್ ಬಾಸ್ಕೆಟ್' ಎಂಬ ಆನ್‌ಲೈನ್ ಆಪ್ ಸ್ಥಾಪಿಸಿದ್ದ ದರ್ಶನ್ ಪತ್ನಿ ರೈತರಿಗೆ ನೆರವಾಗುವಂತೆ ವ್ಯಾಪಾರ ಪ್ರಾರಂಭಿಸಿದ್ದರು. ಈ ಆಪ್ ಬಳಸಿ ರೈತರು ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದಿತ್ತು. ವಿಜಯಲಕ್ಷ್ಮಿ ಅವರ ಈ ಕೆಲಸಕ್ಕೆ 'ಟೈಮ್ಸ್ ಬಿಸಿನೆಸ್' ಅವರು ಉದಯೋನ್ಮುಖ ಮಹಿಳಾ ಉದ್ಯಮಿ ಎಂಬ ಪ್ರಶಸ್ತಿ ನೀಡಿ ಗೌರವಿಸಿತ್ತು.

  English summary
  Kannada actor Darshan Wife Vijayalakshmi's social media accounts hacked.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X