"ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ಡೆವಿಲ್ ಮುಂದೆ ಸಾಗಲಿ, ನನ್ನ ಸಹಮತವಿದೆ"; ಪತ್ನಿಯ ಮೂಲಕ ಫ್ಯಾನ್ಸ್‌ಗೆ ದರ್ಶನ್ ಸಂದೇಶ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ, ಶೀಘ್ರವೇ ಬಂಧಿಸುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಮತ್ತೆ ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರು ಏಳೂ ಮಂದಿಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರಿಂದ ಮತ್ತೆ ಜೈಲು ಸೇರಿಬೇಕಾಗಿದೆ.

ದರ್ಶನ್ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಸಿನಿಮಾ ಮಂದಿ ನಿಟ್ಟುಸಿರು ಬಿಟ್ಟಿದ್ದರು. ಇಲ್ಲಿಗೆ ಎಲ್ಲರೂ ಸರಿ ಹೋಗುತ್ತವೆ. ಇನ್ನು ದರ್ಶನ್ ವೇಗವಾಗಿ ಸಿನಿಮಾಗಳನ್ನು ಮಾಡುತ್ತಾರೆಂದು ನಂಬಿದ್ದರು. ಆದರೆ, ಅದೆಲ್ಲವೂ ಕೆಲವು ತಿಂಗಳಗಳಲ್ಲೇ ತಲೆಕೆಳಗಾಗಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಟ್ರಯಲ್ ಮುಗಿಯುವವರೆಗೂ ದರ್ಶನ್ ಜೈಲಿನಲ್ಲಿಯೇ ಇರಬೇಕಾಗಬಹುದೆಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Darshan send message to fans and Devil movie producer and director through wife Vijayalakshmi

ಈ ಮಧ್ಯೆ ದರ್ಶನ್ ನಟಿಸಿರುವ 'ಡೆವಿಲ್' ಸಿನಿಮಾದ ನಿರ್ಮಾಪಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಹೀಗಾಗಿ ಎರಡನೇ ಬಾರಿ ದರ್ಶನ್ ಜೈಲು ಸೇರುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ, 'ಡೆವಿಲ್' ಸಿನಿಮಾದ ನಿರ್ಮಾಪಕ-ನಿರ್ದೇಶಕರಿಗೆ ಸಂದೇಶವನ್ನು ಕಳುಹಿಸಿದ್ದಾರೆ. ಅದನ್ನು ಪತ್ನಿ ವಿಜಯಲಕ್ಷ್ಮಿ ದರ್ಶನ್ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಅದೇನು ಅಂತ ನೋಡುವುದಾರೇ,


ಜೈಲಿನಿಂದ ದರ್ಶನ್ ಸಂದೇಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಅವರ ಅಭಿಮಾನಿಗಳು 'ಡೆವಿಲ್' ಸಿನಿಮಾದ ಕನಸು ಕಂಡಿದ್ದರು. ಅವರ ಆಸೆಯನ್ನು ಈಡೇರಿಸುವುದಕ್ಕೆ ದರ್ಶನ್ ಕೂಡ ಮುಂದಾಗಿದ್ದರು. 'ಡೆವಿಲ್' ಸಿನಿಮಾದ ಶೂಟಿಂಗ್ ಅನ್ನು ಮುಗಿಸಿದ್ದರು. ಇನ್ನೇನು ಈ ವರ್ಷದ ಮುಗಿಯುವುದರೊಳಗೆ ಸಿನಿಮಾ ರಿಲೀಸ್ ಆಗುತ್ತೆ ಎಂದು ಕಾದು ಕೂತಿದ್ದವರಿಗೆ ಶಾಕ್ ಆಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮತ್ತೆ ಜೈಲು ಸೇರಿದ್ದಾರೆ. ಹೀಗಾಗಿ 'ಡೆವಿಲ್' ರಿಲೀಸ್ ವೇಳೆ ದೊಡ್ಡ ಸೆಲೆಬ್ರೆಷನ್ ಮಾಡಬೇಕು ಎಂದಿದ್ದ ದರ್ಶನ್‌ ಫ್ಯಾನ್ಸ್‌ಗೆ ನಿರಾಸೆಯಾಗಿದೆ. ಅದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶವನ್ನು ಕಳುಹಿಸಿದ್ದಾರೆ.

'ಡೆವಿಲ್' ಕಳುಹಿಸಿದ ಸಂದೇಶವೇನು?

ವಿಜಯಲಕ್ಷ್ಮಿ ಮೂಲಕ ದರ್ಶನ್ ಕಳುಹಿಸಿರುವ ಸಂದೇಶ ಹೀಗಿದೆ.

"ಎಲ್ಲರಿಗು ನಮಸ್ಕಾರ. ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ." ಎಂದು ದರ್ಶನ್ ಅಭಿಮಾನಿಗಳಿಗೆ ಕಳುಹಿಸಿದ ಸಂದೇಶದಲ್ಲಿ ಹೇಳಿದ್ದಾರೆ.

ಹಾಗೇ "ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ 'ದಿ ಡೆವಿಲ್' ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆ-ತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ." ಎಂದಿದ್ದಾರೆ.

ಕೊನೆಯ ಸಾಲಿನಲ್ಲಿ ಏನಿದೆ?

ದರ್ಶನ್ ಅಭಿಮಾನಿಗಳಿಗೆ ಹಾಗೂ ಸಿನಿಪ್ರಿಯರಿಗೆ ಕೊನೆಯ ಒಂದು ಸಾಲಿನಲ್ಲಿ ಸಿನಿಮಾವನ್ನು ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು ಎಂದಿದ್ದಾರೆ."ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು" ಎಂದಿದ್ದಾರೆ. ದರ್ಶನ್ ಜೈಲಿಗೆ ಹೋಗುತ್ತಿದ್ದಂತೆ 'ಡೆವಿಲ್' ಸಿನಿಮಾದ "ಇದ್ರೆ ನಿಮ್ಮದಿಯಾಗಿರಬೇಕು" ಹಾಡು ಟ್ರೋಲ್ ಆಗಿದ್ದನ್ನು ಇಟ್ಟುಕೊಂಡು ಈ ಮಾತನ್ನು ಹೇಳಿರಬಹುದೆಂದು ಅಂದಾಜಿಸಲಾಗಿದೆ.

More from Filmibeat

English summary
Darshan send message to fans and Devil movie producer and director through wife Vijayalakshmi.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X