ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಮುಹೂರ್ತಕ್ಕೆ ದಿನಾಂಕ ಫಿಕ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಒಡೆಯ ಸಿನಿಮಾ ರಿಲೀಸ್ ಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸ್ ಸಿಕ್ಕಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ 'ಗಂಡುಗಲಿ ಮದಕರಿ ನಾಯಕ' ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ದರ್ಶನ್ ಅಭಿನಯದ ಎರಡನೆ ಐತಿಹಾಸಿಕ ಚಿತ್ರ ಇದಾಗಿದೆ. ಈಗಾಗಲೆ 'ಸಂಗೊಳ್ಳಿ ರಾಯಣ್ಣ' ಚಿತ್ರದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದ ದರ್ಶನ್ ಈಗ 'ಗಂಡುಗಲಿ ಮದಕರಿ ನಾಯಕ'ನಾಗಿ ಆಳ್ವಿಕೆ ಮಾಡಲಿದ್ದಾರೆ. ಬಗ್ ಬಜೆಟ್ ನಲ್ಲಿ ಅದ್ದೂರಿಯಾಗಿ ತಯಾರಾಗುತ್ತಿರುವ 'ಗಂಡುಗಲಿ ಮದಕರಿ ನಾಯಕ' ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ನಿರ್ಮಿಸಲಿದೆ ಎನ್ನುವುದು ಚಿತ್ರತಂಡದ ನಂಬಿಕೆ. ಸದ್ಯದ ಚಿತ್ರದ ಅಪ್ ಡೇಟ್ ಅಂದರೆ ಮೂಲಗಳ ಪ್ರಕಾರ ಚಿತ್ರ ಮುಂದಿನ ತಿಂಗಳು ಸೆಟ್ಟೇರಲಿದೆಯಂತೆ.

ಡಿಸೆಂಬರ್ ನಲ್ಲಿ ಮುಹೂರ್ತ

ಡಿಸೆಂಬರ್ ನಲ್ಲಿ ಮುಹೂರ್ತ

ದರ್ಶನ್ ಅಭಿನಯದ ಬಹು ನಿರೀಕ್ಷೆಯ ಗಂಡುಗಲಿ ಮದಕರಿ ನಾಯಕ ಚಿತ್ರ ಮುಂದಿನ ತಿಂಗಳು ಸೆಟ್ಟೇರಲಿದೆ. ಹೌದು, ಡಿಸಂಬರ್ 2ಕ್ಕೆ ಗಂಡುಗಲಿ ಮದಕರಿ ನಾಯಕ ಚಿತ್ರ ಸೆಟ್ಟೇರಲಿದೆ. ಅದ್ದೂರಿ ಮುಹೂರ್ತದ ಮೂಲಕ ಚಿತ್ರಕ್ಕೆ ಚಾಲನೆ ಸಿಗಲಿದೆ.

ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ಐತಿಹಾಸಿಕ ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಲಿದ್ದಾರೆ. ಮೊದಲ ಬಾರಿಗೆ ದರ್ಶನ್ ಮತ್ತು ರಾಜೇಂದ್ರ ಸಿಂಗ್ ಬಾಬು ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ನಾದ ಬ್ರಹ್ಮ ಹಂಸಲೇಖ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಶೋಕ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಇರಲಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ.

ಬೇರೆ ಬೇರೆ ಸ್ಥಳಗಳಲ್ಲಿ ಚಿತ್ರೀಕರಣ

ಬೇರೆ ಬೇರೆ ಸ್ಥಳಗಳಲ್ಲಿ ಚಿತ್ರೀಕರಣ

'ಗಂಡುಗಲಿ ಮದಕರಿ ನಾಯಕ' ಕನ್ನಡ ಚಿತ್ರರಂಗದಲ್ಲಿ ಒಂದು ಮೈಲುಗಲ್ಲು ಸೃಷ್ಟಿಸಲಿದೆ ಎನ್ನುವುದು ಚಿತ್ರತಂಡದ ನಂಬಿಕೆ. ಬರಹಗಾರ ಬಿ ಎಲ್ ವೇಣು ಅವರ ಕೃತಿಯನ್ನು ಆಧಾರಿತವಾಗಿ ಗಂಡುಗಲಿ ಮದಕರಿ ನಾಯಕ ಸಿನಿಮಾ ಮೂಡಿ ಬರಲಿದೆ. ಬಹು ನಿರೀಕ್ಷೆಯ ಚಿತ್ರದ ಚಿತ್ರೀಕರಣ ಬೆಂಗಳೂರು, ಚಿತ್ರದುರ್ಗ, ಮುಂಬೈ, ಹೈದರಾಬಾದ್ ಮತ್ತು ರಾಜಸ್ಥಾನಗಳಲ್ಲಿ ನಡೆಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ಶತಕ ಬಾರಿಸಿದ ಕುರುಕ್ಷೇತ್ರ

ಶತಕ ಬಾರಿಸಿದ ಕುರುಕ್ಷೇತ್ರ

ದರ್ಶನ್ ಅಭಿನಯದ ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಕುರುಕ್ಷೇತ್ರ ಸಿನಿಮಾ ಶತಕ ಬಾರಿಸಿದೆ. ಬಹುತಾರಗಣದ ಪೌರಾಣಿಕ 'ಕುರುಕ್ಷೇತ್ರ' ಚಿತ್ರಾಭಿಮಾನಿಗಳ ಮನಗೆದ್ದು ಯಶಸ್ವಿ ನೂರು ದಿನ ಪೂರೈಸಿದೆ. 'ಕುರುಕ್ಷೇತ್ರ' ಸಿನಿಮಾದ ವಿತರಣೆ ಜವಾಬ್ದಾರಿ ವಹಿಸಿಕೊಂಡಿದ್ದ ರಾಕ್ ಲೈನ್ ವೆಂಕಟೇಶ್ ಈಗ ಗಂಡುಗಲಿ ಮದಕರಿ ನಾಯಕನಿಗೆ ಬಂಡವಾಳ ಹೂಡುತ್ತಿದ್ದಾರೆ. ನಿರೀಕ್ಷೆಯ ಮತ್ತೊಂದು ಐತಿಹಾಸಿಕ ಚಿತ್ರ ಹೇಗೆ ಮೂಡಿ ಬರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.

More from Filmibeat

English summary
Challenging star Darshan starrer most expected Gandugali Madakari Nayaka movie muhurtha will be held on December 2.
Read more about: darshan ದರ್ಶನ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X