ಸೆನ್ಸಾರ್ ಮಂಡಳಿಯಲ್ಲಿ ಪಾಸಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ರಾಬರ್ಟ್'

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ರಾಬರ್ಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ರಾಬರ್ಟ್ ದರ್ಶನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮೂಲಕ ಅಭಿಮಾನಿಗಳ ನಿರೀಕ್ಷೆ, ಕುತೂಹಲ ಇಮ್ಮಡಿಗೊಳಿಸಿರುವ ರಾಬರ್ಟ್ ಮಾರ್ಚ್ 11ರಂದು ತೆರೆಗೆ ಬರುತ್ತಿದೆ.

ಸದ್ಯ ಸಿನಿಮಾತಂಡ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದು, ಇತ್ತೀಚಿಗಷ್ಟೆ ಹೈದರಾಬಾದ್ ಮತ್ತು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಚಿತ್ರದ ಪ್ರಿ ರಿಲೀಸ್ ಈವೆಂಟ್ ನಡೆದಿದೆ. ಸದ್ಯ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ರಾಬರ್ಟ್ ಸೆನ್ಸಾರ್ ನಲ್ಲಿ ಪಾಸ್ ಆಗಿರುವ ಮಾಹಿತಿ ಹೊರಬಿದ್ದಿದೆ.

ಅಂದಹಾಗೆ ರಾಬರ್ಟ್ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಬಹಿರಂಗ ಪಡಿಸಿದೆ. ಇದೇ ಖುಷಿಗೆ ಸಿನಿಮಾತಂಡ ಚಿತ್ರದ 3 ನಿಮಿಷದ ಪ್ರೋಮೋವನ್ನು ರಿಲೀಸ್ ಮಾಡಿದೆ. ರಾಬರ್ಟ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

Darshan starrer Roberrt film gets U/A certificate

ಈಗಾಗಲೇ ರಾಬರ್ಟ್ ಹಾಡುಗಳಿಗೆ ಮತ್ತು ಟ್ರೈಲರ್ ಗೆ ತೆಲುಗಿನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ತೆಲುಗು ಪ್ರೇಕ್ಷಕರು ಸಹ ಕಾತರರಾಗಿದ್ದಾರೆ. ಅಂದಹಾಗೆ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಆಶಾ ಭಟ್ ಮೊದಲ ಕನ್ನಡ ಸಿನಿಮಾವಾಗಿದ್ದು, ಅಭಿಮಾನಿಗಳು ಹೇಗೆ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನು ಚಿತ್ರದಲ್ಲಿ ವಿನೋದ್ ಪ್ರಭಾಕರ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಲನ್ ಆಗಿ ಖ್ಯಾತ ನಟ ಜಗಪತಿ ಬಾಬು ಅಬ್ಬರಿಸಿದ್ದಾರೆ. ದೇವರಾಜ್, ರವಿಶಂಕರ್ ಸೇರಿದಂತೆ ದೊಡ್ಡ ಕಲಾವಿದರ ದಂಡೆ ಸಿನಿಮಾದಲ್ಲಿದೆ.

Recommended Video

ಸೆನ್ಸಾರ್ ನಲ್ಲಿ ಗೆದ್ದ ರಾಬರ್ಟ್ | Roberrt gets U/A Certificate | Darshan | Tharun Sudhir

More from Filmibeat

English summary
Darshan starrer Roberrt film gets U/A certificate. Roberrt set to release on march 11th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X