For Quick Alerts
  ALLOW NOTIFICATIONS  
  For Daily Alerts

  ಕ್ರಿಸ್ ಮಸ್ ಗೆ ವಿಶೇಷ ಗಿಫ್ಟ್ ಕೊಡ್ತಿದ್ದಾರೆ 'ರಾಬರ್ಟ್' ದರ್ಶನ್

  |
  ರಿಲೀಸ್ ಆಗಲಿದೆ ರಾಬರ್ಟ್ ಚಿತ್ರದ ಫಸ್ಟ್ ಲುಕ್ | ROBERT | DARSHAN | ONEINDIA KANNADA

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ರಾಬರ್ಟ್ ಚಿತ್ರದ ಭರ್ಜರಿ ಸುದ್ದಿ ಹೊರಬಿದ್ದಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ರಾಬರ್ಟ್ ದರ್ಶನಕ್ಕಾಗಿ ಕಾಯುತ್ತಿದ್ದ ಡಿ ಬಾಸ್ ಅಭಿಮಾನಿಗಳಿಗೆ ದೊಡ್ಡ ಸಂಭ್ರಮದ ಸುದ್ದಿ ಚಿತ್ರತಂಡದಿಂದ ಬಂದಿದೆ.

  ಹೌದು, ರಾಬರ್ಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳು 25ಕ್ಕೆ ಅಂದರೆ ಕ್ರಿಸ್ ಮಸ್ ಗೆ ರಾಬರ್ಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗುತ್ತಿದೆ. ಮೊದಲ ಪೋಸ್ಟರ್ ಬೈಕ್ ಮೇಲೆ ಕುಳಿತಿರುವ ದರ್ಶನ್ ಹಿಂಬದಿಯ ಲುಕ್ ಮಾತ್ರ ರಿಲೀಸ್ ಮಾಡಲಾಗಿತ್ತು. ದರ್ಶನ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದಕ್ಕೆ ಮೊದಲ ಪೋಸ್ಟರ್ ನಿಂದ ಉತ್ತರ ಸಿಕ್ಕಿರಲಿಲ್ಲ. ಹಾಗಾಗಿ ಸದ್ಯ ರಿಲೀಸ್ ಆಗುತ್ತಿರುವ ಪೋಸ್ಟರ್ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

  ಡಿ ಬಾಸ್ 'ರಾಬರ್ಟ್' ತಂಡದಿಂದ ಹೊರಬಿತ್ತು ಭರ್ಜರಿ ಸುದ್ದಿಡಿ ಬಾಸ್ 'ರಾಬರ್ಟ್' ತಂಡದಿಂದ ಹೊರಬಿತ್ತು ಭರ್ಜರಿ ಸುದ್ದಿ

  .ಈಗಾಗಲೆ ರಾಬರ್ಟ್ ಬರೋಬ್ಬರಿ 100 ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಈ ಖುಷಿಯನ್ನು ಚಿತ್ರತಂಡ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು. ಸದ್ಯ ವಾರಣಾಸಿಯಲ್ಲಿ ಬೀಡುಬಿಟ್ಟಿರುವ ಚಿತ್ರತಂಡ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದೆ. ಅಂದ್ಹಾಗೆ ರಾಬರ್ಟ್ ಕೊನೆಯ ಹಂತದ ಚಿತ್ರೀಕರಣದಲ್ಲಿದೆ.

  ಇನ್ನೇನು ಕೆಲವೆ ದಿನಗಳ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುಮಾಡಿಕೊಳ್ಳಲಿದೆ. ರಾಬರ್ಟ್ ಚಿತ್ರದಲ್ಲಿ ದರ್ಶನ್ ಗೆ ನಾಯಕಿ ಆಶಾ ಭಟ್ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ವಿಲನ್ ಆಗಿ ಖ್ಯಾತ ನಟ ಜಗಪತಿ ಬಾಬು ಮಿಂಚಿದ್ದಾರೆ. ಇನ್ನು ನಟ ವಿನೋದ್ ಪ್ರಭಾಕರ್ ಕೂಡ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚಿದ್ದಾರೆ. ಸ್ಯಾಂಡಲ್ ವುಡ್ ನ ನಿರೀಕ್ಷೆಯ ಚಿತ್ರವಾಗಿರುವ ರಾಬರ್ಟ್ ಮುಂದಿನ ವರ್ಷ ಯುಗಾದಿಗೆ ತೆರೆಗೆ ಬರುವ ಸಾಧ್ಯತೆ ಇದೆ.

  English summary
  Kannada actor Darshan starrer Robert movie first look release on December 25th.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X