ಎರಡು ತಿಂಗಳು ನೆಮ್ಮದಿಯಿಂದ ಓಡಾಡಿಕೊಂಡು ಇರಬಹುದು ದರ್ಶನ್..!
ದರ್ಶನ್ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದಾರೆ. ಆದರೆ ದರ್ಶನ್‌ಗೆ ಸಂಪೂರ್ಣ ನೆಮ್ಮದಿ ಇನ್ನು ಸಿಕ್ಕಿಲ್ಲ. ಯಾಕೆಂದರೆ ದರ್ಶನ್‌ಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಕೋರಿ ಖಾಕಿ ಪಡೆ ಸುಪ್ರೀಂ ಕೋರ್ಟ್‌ನ ಮೆಟ್ಟಿಲನ್ನೇರಿದೆ. ಇದರಿಂದ ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಹೀಗಾಗಿ ಯಾವ ಕ್ಷಣದಲ್ಲಿ ಅದೇನಾಗುತ್ತೋ ಎಂಬ ಭಯ ದರ್ಶನ್ ಅವರಿಗೆ ಇದ್ದೇ ಇದೆ.
ಮತ್ತೊಂದು ಕಡೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ನಿನ್ನೆ.. ಪ್ರಕರಣದ ಪ್ರಮುಖ ಆರೋಪಿಯಾದ ಪವಿತ್ರಾ ಗೌಡ ಮತ್ತು ದರ್ಶನ್ ಸೇರಿ ಉಳಿದ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಸಮಯದಲ್ಲಿ ಪ್ರಕರಣದ ತನಿಖೆಯ ಜವಾಬ್ಧಾರಿ ವಹಿಸಿಕೊಂಡಿರುವ ಎಸಿಪಿ ಚಂದನ್ ಕುಮಾರ್ ದರ್ಶನ್ ಮತ್ತು ಪವಿತ್ರಾ ಗೌಡಗೆ ಶಾಕ್ ನೀಡಿದ್ದಾರೆ.

ನಿನ್ನೆ [ ಮೇ 20 ] ದರ್ಶನ್ ಮತ್ತು ಉಳಿದ ಆರೋಪಿಗಳ ವಿರುದ್ಧ 132 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದರಿಂದ ದರ್ಶನ್‌ಗೆ ಮುಂಬರುವ ದಿನಗಳಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಯಾಕೆಂದರೆ.. ಇಲ್ಲಿಯವರೆಗೆ ದರ್ಶನ್ ಪರ ವಕೀಲರು ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇರಲೇ ಇಲ್ಲ ಎಂಬರ್ಥದಲ್ಲಿ ವಾದ ಮಾಡುತ್ತಿದ್ದರು. ಆದರೆ, ನಿನ್ನೆ [ ಮೇ 20 ] ಸಲ್ಲಿಸಲಾದ ಚಾರ್ಜ್‌ಶೀಟ್ ಜೊತೆ ಕೆಲ ಮಹತ್ವದ ಸಾಕ್ಷಿಗಳನ್ನ ಕೂಡ ಪೊಲೀಸರು ನೀಡಿದ್ದಾರೆ.
ಇನ್ನು ಶೆಡ್‌ನಲ್ಲಿ ರೇಣುಕಸ್ವಾಮಿ ಸತ್ತು ಮಲಗಿದ್ದಾಗ ದರ್ಶನ್ ಜೊತೆ ಪುನೀತ್, ರವಿಶಂಕರ್, ಅನುಕುಮಾರ್ ಮತ್ತು ಜಗದೀಶ್ ತೆಗೆಸಿಕೊಂಡಿದ್ದ ಫೋಟೊವನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ, ಪುನೀತ್ ಮೊಬೈಲ್‌ನಲ್ಲಿ ಡಿಲೀಟ್ ಆಗಿದ್ದ ಫೋಟೊವನ್ನು ಪೊಲೀಸರು ರಿಟ್ರೀವ್ ಮಾಡಿರುವ ಪೊಲೀಸರು ಆ ಫೋಟೊವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು TV 9 ಕನ್ನಡ ಸೇರಿ ಅನೇಕ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಹಿನ್ನೆಲೆ ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇದ್ದರು ಎನ್ನುವುದಕ್ಕೆ ಪುಷ್ಠಿ ಸಿಕ್ಕಂತಾಗಿದ್ದು ಮುಂದಿನ ದಿನಗಳಲ್ಲಿ ಈ ವಿಚಾರ ದರ್ಶನ್‌ಗೆ ಕಂಟಕವಾಗಬಹುದು ಎನ್ನುವ ಮಾತು ಸದ್ಯ ಕೇಳಿ ಬರುತ್ತಿದೆ.ರಿಟ್ರೀವ್ ಆದ ಫೋಟೊ ಮತ್ತು ಡೇಟಾಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಪರ ವಕೀಲರು
ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುವ ಸಾಧ್ಯತೆ ಇದೆ .
ಹೀಗಿರುವಾಗ ಇದೀಗ ದರ್ಶನ್ ಮತ್ತು ಪವಿತ್ರಾ ಗೌಡಗೆ ತಾತ್ಕಾಲಿಕ ರಿಲೀಫ್ ಕೂಡ ಸಿಕ್ಕಿದೆ. ಹೌದು, ಅಸಲಿಗೆ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಬೇಕಿತ್ತು.
ಆದರೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಮತ್ತೆ ಮುಂದೂಡಲಾಗಿದೆ. ಮೇ 26ರಿಂದ ಜುಲೈ 13ರರ ವರೆಗೆ ಸುಪ್ರೀಂ ಕೋರ್ಟ್‌ಗೆ ಬೇಸಿಗೆ ರಜೆ ಶುರುವಾಗುತ್ತಿರುವ ಹಿನ್ನೆಲೆ ನ್ಯಾ.ಪರ್ದೀವಾಲ ಮತ್ತು ಆರ್.ಮಹಾದೇವನ್ ಪೀಠ ವಿಚಾರಣೆಯನ್ನು ಮುಂದೂಡಿ ಆದೇಶವನ್ನು ಹೊರಡಿಸಿದ್ದಾರೆ.
ಇನ್ನು ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಕೂಡ ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಜುಲೈ 10ರವರೆಗೆ ದರ್ಶನ್ ಯಾವ ಚಿಂತೆ ಇಲ್ಲದೇ ನೆಮ್ಮದಿಯಾಗಿ ಓಡಾಡಬಹುದು. ಮತ್ತೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆಯ ದಿನಾಂಕ ಜುಲೈ 14ರ ನಂತರ ಗೊತ್ತಾಗಲಿದೆ.
ಇನ್ನುಳಿದಂತೆ 2024ರ ಡಿಸೆಂಬರ್ 13ರಂದು ಹೈಕೋರ್ಟ್ ಏಕಸದಸ್ಯ ಪೀಠ ರೇಣುಕಾಸ್ವಾಮಿ ಪ್ರಕರಣದಲ್ಲಿ ಎ2 ದರ್ಶನ್ ಮತ್ತು ಎ1 ಆರೋಪಿಯಾಗಿದ್ದ ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.


Click it and Unblock the Notifications











