ರಾಯಚೂರು ವಿದ್ಯಾರ್ಥಿನಿ ಸಾವು ಖಂಡಿಸಿದ ನಟ ದರ್ಶನ್

Recommended Video

ಟ್ವೀಟ್ ಮಾಡಿ ಮಾನವೀಯತೆ ಮೆರೆದ ದರ್ಶನ್..! | FILMIBEAT KANNADA

ರಾಯಚೂರಿನ ಮಾಣಿಕ್ ಪ್ರಭು ದೇವಸ್ಥಾನದ ಗುಡ್ಡದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಈ ದುರಂತ ಸಾವನ್ನ ಇಡೀ ರಾಜ್ಯದ ಜನ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ದುಷ್ಟರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕೂಗು ಕೇಳಿಬರುತ್ತಿದ್ದು, ಬಹುತೇಕ ಕಡೆ ಪ್ರತಿಭಟನೆ ನಡೆಯುತ್ತಿದೆ. ಈ ಸಂಬಂಧ ಒಬ್ಬ ಆರೋಪಿಯನ್ನ ಕೂಡ ಬಂಧಿಸಲಾಗಿದೆಯಂತೆ.

ಈ ಘಟನೆಗೆ ಬಗ್ಗೆ ಹಲವು ಕನ್ನಡ ಸಿನಿಮಾ ತಾರೆಯರು ಸಂತಾಪ ಸೂಚಿಸಿದ್ದಾರೆ. ರಶ್ಮಿಕಾ ಮಂದಣ್ಣ, ರಕ್ಷಿತಾ ಪ್ರೇಮ್, ಹರ್ಷಿಕಾ ಪೂಣಚ್ಛ, ಸತೀಶ್ ನೀನಾಸಂ ಸೇರಿದಂತೆ ಹಲವರು ಖಂಡಿಸಿದ್ದಾರೆ.

Darshan tweets about raichur engineering student death incident

ಇದೀಗ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 'ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ತನಿಖೆ ಅತೀ ಶೀಘ್ರದಲ್ಲಿ ಸರಿಯಾಗಿ ನಡೆದು ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನು ಬದ್ಧವಾಗಿ ತಕ್ಕ ಶಾಸ್ತಿಯಾಗಬೇಕೆಂದು ಕೋರಿಕೊಳ್ಳುತ್ತಿದ್ದೇನೆ' ಎಂದು ಆಗ್ರಹಿಸಿದ್ದಾರೆ.

ಇನ್ನು 'ಈ ರೇಪ್ & ಮರ್ಡರ್ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪ್ರತಿಕ್ರಿಯಿಸಿದ್ದು, ತಪ್ಪು ಯಾರೇ ಮಾಡಿದ್ದರೂ, ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

More from Filmibeat

English summary
Kannada actor darshan condemns death of engineering student in Raichur.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X