ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡೇಶ್ವರಿ ದರ್ಶನ ಪಡೆದ ದರ್ಶನ್
ಇಂದು ಮೊದಲ ಆಷಾಢ ಶುಕ್ರವಾರದ ಸಲುವಾಗಿ ಮೈಸೂರು ಭಾಗದ ಜನರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಇಂದು ( ಜೂನ್ 23 ) ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಕಾಟೇರ ಚಿತ್ರದಲ್ಲಿ ಬ್ಯುಸಿ ಇರುವ ದರ್ಶನ್ ಬೆಳಗ್ಗೆ ವೇಳೆ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ದರ್ಶನ್ ತಮ್ಮ ಸ್ನೇಹಿತರ ಜತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದು, ನಟ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇನ್ನು ದರ್ಶನ್ ಫಿಟ್‌ನೆಸ್ ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸದ್ಯ ದರ್ಶನ್ ಕಾಟೇರ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರು ಹಾಗೂ ಮಂಡ್ಯ ಭಾಗಗಳಲ್ಲಿ ಕಾಟೇರ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಈ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದ್ದಾರೆ ಹಾಗೂ ರಾಕ್‌ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದಾರೆ.
ಇನ್ನು ದರ್ಶನ್ ಅವರು ಕಾಟೇರ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಫೋಟೊವೊಂದು ಕಳೆದ ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ದರ್ಶನ್ ಹಸಿರು ಧ್ವಜ ಹಿಡಿದು ನಿಂತಿರುವ ಬ್ಯಾಕ್ ಸ್ಟಿಲ್ ಇದಾಗಿತ್ತು.
ವಿಧಾನಸೌಭೆ ಚುನಾವಣೆ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳ ಕಾಲ 'ಕಾಟೇರ' ಚಿತ್ರೀಕರಣದಿಂದ ದರ್ಶನ್ ಬಿಡುವು ಪಡೆದುಕೊಂಡಿದ್ದರು. ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ದರ್ಶನ್ ಚುನಾವಣೆ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇನ್ನು ಮತದಾನದ ನಂತರ ದರ್ಶನ್ ವಲ್ಡ್‌ಲೈಫ್ ಫೋಟೊಗ್ರಫಿಗಾಗಿ ಉತ್ತರಕಾಂಡ್‌ಗೆ ಹೋಗಿದ್ದರು. ಅಲ್ಲಿಂದ ವಾಪಸ್ ಬಂದ ಬಳಿಕ ಹೈದರಾಬಾದ್ ರಾಮೋಜಿ ಫಿಲ್ಮ್‌ಸಿಟಿಯಲ್ಲಿ'ಕಾಟೇರ' ಚಿತ್ರದ ಒಂದು ಸಣ್ಣ ಶೆಡ್ಯೂಲ್ ಮುಗಿಸಲಾಗಿತ್ತು.
ಬಳಿಕ ಸ್ವಲ್ಪ ದಿನಗಳ ಕಾಲ ಬಿಡುವು ಪಡೆದುಕೊಂಡಿದ್ದ ದರ್ಶನ್ 'ಕಾಟೇರ' ಚಿತ್ರದ ಚಿತ್ರೀಕರಣಕ್ಕೆ ಹಾಜರ್ ಆಗಿದ್ದಾರೆ. ಬೆಂಗಳೂರಿನಲ್ಲೇ ಸಿನಿಮಾ ಚಿತ್ರೀಕರಣದ ಮತ್ತೆ ಆರಂಭವಾಗಿದೆ. ನಟ ದರ್ಶನ್ ಹಸಿರು ಬಾವುಟ(ದಂಡಕ್ಕೆ ಹಸಿರು ಬಣ್ಣದ ಟವೆಲ್ ಕಟ್ಟಿರುವ) ಹಿಡಿದು ಹಿಂದಕ್ಕೆ ತಿರುಗಿ ನಿಂತಿರುವ ಫೋಟೊ ವೈರಲ್ ಆಗ್ತಿದೆ.
70ರ ದಶಕದ ಕಥೆಯನ್ನು ಹೇಳಲಾಗ್ತಿದೆ. 'ಉಳುವವನೆ ಭೂಮಿಯ ಒಡೆಯ' ಕಾಯ್ದೆ ಜಾರಿಗೆ ತಂದಾಗ ಹಳ್ಳಿಗಳಲ್ಲಿ ನಡೆದ ಸಂಘರ್ಷಗಳ ಹಿನ್ನಲೆಯಲ್ಲಿ ಈ ಕಥೆಯನ್ನು ಕಟ್ಟಿಕೊಡಲಾಗುತ್ತಿದೆ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡುತ್ತಿರುವುದು ವಿಶೇಷ. ರಾಕ್‌ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞರ ತಂಡ ಕಟ್ಟಿಕೊಂಡು ತರುಣ್ ಸುಧೀರ್ ಈ ಸಿನಿಮಾ ತೆರೆಗೆ ತರುತ್ತಿದ್ದಾರೆ.
ಕಳೆದ ವರ್ಷ ವರಲಕ್ಷ್ಮಿ ಹಬ್ಬದಂದು 'ಕಾಟೇರ' ಚಿತ್ರದ ಮುಹೂರ್ತ ನೆರವೇರಿತ್ತು. ನಂತರ ರಾಕ್‌ಲೈನ್ ಸ್ಟುಡಿಯೋದಲ್ಲಿ ಫಸ್ಟ್ ಶೆಡ್ಯೂಲ್ ಶೂಟಿಂಗ್ ನಡೆದಿತ್ತು. ನಂತರ ಕನಕಪುರ, ತುಂಬನೆರಳೆ ಹಳ್ಳಿ ಸೇರಿದಂತೆ ಕೆಲವೆಡೆ ಚಿತ್ರವನ್ನು ಸೆರೆಹಿಡಿಲಾಗಿತ್ತು. ಹಳ್ಳಿಯ ಸೆಟ್ ನಿರ್ಮಾಣ ಮಾಡಿ ಕೂಡ ಒಂದಷ್ಟು ಸನ್ನಿವೇಶಗಳನ್ನು ಕಟ್ಟಿಕೊಡಲಾಗಿದೆ. ವರ್ಷಾಂತ್ಯಕ್ಕೆ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.


Click it and Unblock the Notifications











