ತನ್ನ ಇನ್‌ಸ್ಟಾಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ; ಒಳಗೊಳಗೆ ಏನು ನಡೀತಿದೆ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪೊಲೀಸರು ದರ್ಶನ್ ಹಾಗೂ ಪವಿತ್ರಾ ಗೌಡರನ್ನು ಪ್ರಮುಖ ಆರೋಪಿಗಳೆಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರ ಕಸ್ಟಡಿಯಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಕಾಗಿದ್ದಾರೆ. ಇತ್ತ ಜನರು ನಟ ದರ್ಶನ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಚಿತ್ರದುರ್ಗ ಸೇರಿದಂತೆ ಹಲವೆಡೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರತಿಭಟನೆಗಳು ಆಗುತ್ತಿವೆ. ಈ ಮಧ್ಯೆ ದರ್ಶನ್ ಪತ್ನಿಯ ನಡೆ ಅಚ್ಚರಿಯನ್ನು ಮೂಡಿಸಿದೆ. ಪತಿ ದರ್ಶನ್ ಕೊಲೆ ಪ್ರಕರಣದಲ್ಲಿ ಸಿಕ್ಕಿಬೀಳುತ್ತಿದ್ದಂತೆ ವಿಜಯಲಕ್ಷ್ಮಿ ದರ್ಶನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ದರ್ಶನ್‌ರನ್ನು ಅನ್‌ಫಾಲೋ ಮಾಡಿದ್ದರು. ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು.

Darshan wife Vijayalakshmi deleted instagram account whats cooiking

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿದ್ದರೂ, ಪತ್ನಿ ವಿಜಯಲಕ್ಷ್ಮಿ ಇದೂವರೆಗೂ ಬಹಿರಂಗವಾಗಿ ಪ್ರತಿಕ್ರಿಯೆ ಕೊಟ್ಟಿಲ್ಲ. ಇನ್‌ಸ್ಟಾಗ್ರಾಂನಲ್ಲಿ ದರ್ಶನ್‌ರನ್ನು ಅನ್‌ಫಾಲೋ ಮಾಡಿದ್ದ ವಿಜಯಲಕ್ಷ್ಮಿ ತಮ್ಮ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ. ಹೀಗಾಗಿ ವಿಜಯಲಕ್ಷ್ಮಿ ನಡೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಹೌದು, ವಿಜಯಲಕ್ಷ್ಮಿ ದರ್ಶನ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಆಕ್ಟಿವ್ ಆಗಿದ್ದರು. ಆಗಾಗ ತಮ್ಮ ಫೋಟೊಗಳನ್ನು ಹಾಕಿ ತಮ್ಮ ಫಾಲೋವರ್‌ಗಳೊಂದಿಗೆ ಕನೆಕ್ಟ್ ಆಗಿರುತ್ತಿದ್ದರು. ದರ್ಶನ್ ಜೊತೆಯಲ್ಲಿ ಕೆಲವು ಫೋಟೊಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದರು. ಹಾಗೇ ಹೆಚ್ಚಾಗಿ ಮಗನೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಿದ್ದೂ ಇದೆ. ಈಗ ಇನ್‌ಸ್ಟಾಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Darshan wife Vijayalakshmi deleted instagram account whats cooiking

ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಂ ಖಾತೆಯನ್ನು ಯಾಕೆ ಡಿಲೀಟ್ ಮಾಡಿದ್ರು? ಅನ್ನೋದು ಈಗ ಯಕ್ಷ ಪ್ರಶ್ನೆಯಾಗಿದೆ. ಈ ಮೂಲಕ ದರ್ಶನ್ ಅವರಿಂದ ದೂರು ಉಳಿಯುವುದಕ್ಕೆ ವಿಜಯಲಕ್ಷ್ಮಿ ನಿರ್ಧರಿಸಿದ್ದಾರಾ? ಇಲ್ಲಾ ದರ್ಶನ್ ಹಾಗೂ ತಮ್ಮ ಪುತ್ರ ವಿನೀಶ್ ಫೋಟೊಗಳು ಇರುವುದರಿಂದ ಈ ಪರಿಸ್ಥಿತಿಯಲ್ಲಿ ಬಳಕೆಯಾಗದೇ ಇರಲಿ ಅಂತ ಹೀಗಿ ಮಾಡಿದ್ರಾ? ಸದ್ಯಕ್ಕಂತೂ ನಿಗೂಢ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿ ಬಂದ ಬಳಿಕ ವಿಜಯಲಕ್ಷ್ಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ ಮಾಧ್ಯಮಗಳಲ್ಲಿ ವರದಿಯಾದಂತೆ ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ವಿಜಯಲಕ್ಷ್ಮಿ ಜೊತೆ ಫೋನ್‌ನಲ್ಲಿ ಮಾತಾಡಿದ್ದರು ಎನ್ನಲಾಗಿದೆ. ಈ ವೇಳೆ ನಾನೇನು ತಪ್ಪು ಮಾಡಿಲ್ಲ ಎಂದು ಹೇಳಿಕೊಂಡಿದ್ದರು ಎಂದು ಹೇಳಲಾಗಿತ್ತು. ಸದ್ಯ ಪತಿಯ ಮೇಲಿರುವ ಆರೋಪದ ಬಗ್ಗೆ ವಿಜಯಲಕ್ಷ್ಮಿ ಸ್ಟ್ಯಾಂಡ್ ಏನು? ಅನ್ನೋದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ.

ಅಸಲಿಗೆ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವಿನ ಕಿತ್ತಾಟವೇ ರೇಣುಕಾಸ್ವಾಮಿ ಕೊಲೆಗೆ ಕಾರಣವಾಯ್ತಾ? ಅನ್ನೋ ಪ್ರಶ್ನೆ ಎದ್ದಿದೆ. ಯಾಕಂದ್ರೆ, ದರ್ಶನ್ ಜೊತೆಗೆ 10 ವರ್ಷಗಳ ಸಂಬಂಧ ಎಂದು ಪವಿತ್ರಾ ಗೌಡ ಕೆಲವು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ವಿಜಯಲಕ್ಷ್ಮಿ ಪವಿತ್ರಾ ಗೌಡ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಇನ್‌ಸ್ಟಾಗ್ರಾಂನಲ್ಲೇ ಇಬ್ಬರೂ ಕಿತ್ತಾಡಿಕೊಂಡಿದ್ದರು.

ದರ್ಶನ್ ಜೊತೆಗಿನ ಫೋಟೊಗಳನ್ನು ಪವಿತ್ರಾ ಗೌಡ ರಿವೀಲ್ ಮಾಡುತ್ತಿದ್ದಂತೆ ಕೆಲ ಅಭಿಮಾನಿಗಳು ಸಪೋರ್ಟ್ ಮಾಡಿದ್ದರು. ಮತ್ತೆ ಕೆಲ ಅಭಿಮಾನಿಗಳು ವಿರೋಧಿಸಿದ್ದರು. ಇನ್ನು ರೇಣುಕಾಸ್ವಾಮಿ ಕೂಡ ಈ ಕಾರಣಕ್ಕೆ ಪವಿತ್ರಾ ಗೌಡ ವಿರುದ್ಧ ಸಿಟ್ಟಿಗೆದ್ದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದೆ. ಇದೇ ಈಗ ಕೊಲೆಯವರೆಗೂ ಬಂದು ನಿಂತಿದೆ ಅನ್ನೋದು ಸದ್ಯಕ್ಕೆ ಸಿಕ್ಕಿರೋ ಮಾಹಿತಿ.

More from Filmibeat

English summary
Darshan wife Vijayalakshmi deleted instagram account.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X