ಮಂಡ್ಯದಲ್ಲೇ ಸುಮಲತಾ ಅಂಬರೀಶ್‌ಗೆ ದರ್ಶನ್ ಟಕ್ಕರ್; ಖ್ಯಾತ ಜ್ಯೋತಿಷಿ ಭವಿಷ್ಯ

ನಟ ದರ್ಶನ್ ಇನ್‌ಸ್ಟಾಗ್ರಾಮ್‌ನಲ್ಲಿ ಇದ್ದಕ್ಕಿಂದಂತೆ ಸುಮಲತಾ ಅಂಬರೀಶ್ ಅವರನ್ನು ಅನ್‌ಫಾಲೋ ಮಾಡಿದ್ದು ಭಾರೀ ಚರ್ಚೆ ಹುಟ್ಟಾಕ್ಕಿದೆ. ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನನುವ ಊಹಾಪೋಹ ಶುರುವಾಗಿದೆ. ಆದರೆ ಇದಕ್ಕೆ ನಟಿ, ಮಾಜಿ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ದರ್ಶನ್ ಟಕ್ಕರ್ ಕೊಡುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿನಿ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಅವರು ಮಾಡಿರುವ ಟ್ವೀಟ್‌ಗಳು ವೈರಲ್ ಆಗುತ್ತಿದೆ. ದರ್ಶನ್‌ ಮಂಡ್ಯದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಇತ್ತೀಚೆಗೆ ಪ್ರಶಾಂತ್ ಕಿನಿ ಭವಿಷ್ಯ ನುಡಿದಿದ್ದರು. ದರ್ಶನ್-ಸುಮಲತಾ ನಡುವೆ ಬಿರುಕು ಮೂಡಿದೆ ಎನ್ನುತ್ತಿದ್ದಂತೆ ಇದೀಗ ಹೊಸ ಚರ್ಚೆ ಶುರುವಾಗಿದೆ.

Darshan will challenge Sumalatha in Mandya only Astrologer Prashanth Kini prediction

ದರ್ಶನ್ ರಾಜಕೀಯಕ್ಕೆ ಬರುತ್ತಾರೆ, 2027ರ ಕೊನೆಗೆ ಸಿನಿಮಾಗಳಲ್ಲಿ ನಟಿಸುವುದು ನಿಲ್ಲಿಸುತ್ತಾರೆ ಎಂದು ಕಳೆದ ವರ್ಷ ಜ್ಯೋತಿಷಿ ಪ್ರಶಾಂತ್ ಕಿನಿ ಟ್ವೀಟ್ ಮಾಡಿದ್ದರು. ದರ್ಶನ್ ಜೈಲಿನಲ್ಲಿ ಇದ್ದಾಗ ಟ್ವೀಟ್ ಮಾಡಿ 2025ರ ಏಪ್ರಿಲ್ ಅಥವಾ ಮೇ ವೇಳೆಗೆ ದರ್ಶನ್ ಜೈಲಿನಿಂದ ಹೊರ ಬರುತ್ತಾರೆ. ಬಳಿಕ ಸಿನಿಮಾ ಬಿಟ್ಟು ರಾಜಕೀಯರಂಗಕ್ಕೆ ಇಳಿಯುತ್ತಾರೆ ಎಂದು ಬರೆದುಕೊಂಡಿದ್ದರು. ಇದೀಗ ದರ್ಶನ್ ಹಾಗೂ ಸುಮಲತಾ ಬಗ್ಗೆ ಮಾಡಿರುವ ಕಾಮೆಂಟ್ ಸದ್ದು ಮಾಡ್ತಿದೆ.

ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್ದರು. ದರ್ಶನ್ ಮಾತ್ರವಲ್ಲ ಪ್ರಜ್ವಲ್ ಮತ್ತು ಯಶ್ ಮಾತ್ರ ಸಂಕಷ್ಟಕ್ಕೀಡಾಗಿದ್ದರು. ದರ್ಶನ್ ಕಾರಣದಿಂದ ಸುಮಲತಾ ಮಂಡ್ಯ ಗೆದ್ದರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸಂಕಷ್ಟಕ್ಕೆ ಸಿಲುಕಿದ ನಂತರ ಸುಮಲತಾ ಅವರನ್ನು ಕೈಬಿಟ್ಟರು. ಈಗ ದರ್ಶನ್ ಮಂಡ್ಯದಲ್ಲಿ ಮಾತ್ರ ಸುಮಲತಾಗೆ ಸವಾಲು ಹಾಕಲಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಹಾಗೂ ದರ್ಶನ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಮಾಡಿದ ಯಾವುದೋ ಪೋಸ್ಟ್‌ಗೆ ಏನೇನೋ ಕಲ್ಪಿಸಿಕೊಳ್ಳಬೇಡಿ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದರು. "ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ" ಎಂದು ಬರೆದುಕೊಂಡಿದ್ದರು.

"ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು. ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ" ಎಂದು ಸುಮಲತಾ ತಿಳಿಸಿದ್ದರು.

"ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ" ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು.

More from Filmibeat

English summary
Actor Darshan will challenge Ex MP Sumalatha in Mandya only; Astrologer Prashanth Kini prediction
Read more about: darshan sumalatha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X