For Quick Alerts
  ALLOW NOTIFICATIONS  
  For Daily Alerts

  'ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'- ನಟ ದರ್ಶನ್

  |

  ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ.

  ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ.

  ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!

  ದರ್ಶನ್‌ಗೆ ವಿಶೇಷವಾದ ಉಡುಗೊರೆ ನೀಡಿದ ಹುಬ್ಬಳ್ಳಿ ಅಭಿಮಾನಿ

  ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ!

  ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.

  ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ.

  ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

  ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು. ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

  ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್‌ನಲ್ಲಿ ಪೋಷಿಸುತ್ತಿದ್ದಾರೆ.

  'ಹೀರೋ' ಎಂಬ ಟ್ರೆಂಡ್‌ಗೆ ಬ್ರೇಕ್ ಹಾಕಿದ ದಾಸ ದರ್ಶನ್

  ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.

  ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.

  Bigg Boss Kannada 8 : ಕೈ ಕೈ ಮಿಲಾಯಿಸಿಕೊಂಡ ಮಹಿಳಾ ಬಿಗ್ ಬಾಸ್ ಮಹಿಳಾ ಸ್ಪರ್ಧಿಗಳು| Dhanushree & Divya Suresh
  English summary
  World Wildlife Day 2021: Kannada actor, Challening star Darshan wishes and message on World Wildlife Day.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X