ಅಂಬರೀಶ್ ಹುಟ್ಟುಹಬ್ಬಕ್ಕೆ ದರ್ಶನ್ ಶುಭಕೋರಿದ್ದು ಹೀಗೆ

Recommended Video

ಅಂಬರೀಶ್ ಹುಟ್ಟುಹಬ್ಬಕ್ಕೆ ದರ್ಶನ್ ಶುಭಕೋರಿದ ದರ್ಶನ್ | FILMIBEAT KANNADA

ರೆಬೆಲ್ ಸ್ಟಾರ್ ಅಂಬರೀಶ್ ಅವರ 67ನೇ ಜನ್ಮದಿನ. ಜಲೀಲಾನಿಲ್ಲದ ಮೊದಲ ಹುಟ್ಟುಹಬ್ಬವನ್ನು ಅಭಿಮಾನಿಗಳು ನೋವಿನಲ್ಲಿಯೆ ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೊದಲ್ಲಿರುವ ಅಂಬರೀಶ್ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂಬಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ಮಂಡ್ಯದಲ್ಲಿ ಇಂದು ಅಂಬಿ ಹುಟ್ಟುಹಬ್ಬವನ್ನು ಸ್ವಾಭಿಮಾನಿಗಳ ವಿಜಯೋತ್ಸವ ಹೆಸರಿನಲ್ಲಿ ಆಚರಿಸಲಾಗುತ್ತಿದೆ. ಸುಮಲತಾ ಅಂಬರೀಶ್ ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿದ ಸಂತಸದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸಿರುವ ಮೂಲಕ ಮಂಡ್ಯ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಸುಮಲತಾ.

ರೆಬೆಲ್ ಇಲ್ಲದ ಮೊದಲ ಹುಟ್ಟುಹಬ್ಬಕ್ಕೆ ಅಂಬಿಯ ಮೊದಲ ಮಗನ ಹಾಗೆ ಇದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷವಾಗಿ ಶುಭಕೋರಿದ್ದಾರೆ. ಅಂಬರೀಶ್ ಜೊತೆ ಕಾರಿನಲ್ಲಿ ಕುಳಿತಿರುವ ಫೋಟೋವನ್ನು ಟ್ವಿಟರ್ ನಲ್ಲಿ ಶೇರ್ ಮಾಡುವ ಮೂಲಕ ಅಂಬರೀಶ್ ಅವರಿಗೆ ವಿಶ್ ಮಾಡಿದ್ದಾರೆ.

Darshan wishes to Rebel star Ambareesh on his 67th birthday

"ನಲ್ಮೆಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬ. ದೈಹಿಕವಾಗಿ ನಮ್ಮನ್ನು ಅಗಲಿದರೂ ಸಹ ಮಾನಸಿಕವಾಗಿ ಹುಮ್ಮಸ್ಸಿನ ಚಿಲುಮೆಯಾಗಿ ಸದಾ ನಮ್ಮೊಂದಿಗೆ ಜೀವಂತವಾಗಿರುತ್ತಾರೆ. ಅವರ ಪ್ರೀತಿ-ಆದರ್ಶಗಳು ಸದಾ ಅವರ ಕುಟುಂಬ ಹಾಗೂ ಅಭಿಮಾನಿಗಳನ್ನು ಕಾಯುತ್ತಿರುತ್ತದೆ" ಎಂದು ಹೇಳಿದ್ದಾರೆ.

ಅಂಬರೀಶ್ ಜೊತೆ ದರ್ಶನ್ ಅಣ್ಣವ್ರ ಮಗ, ಅಂಬರೀಶ, ಬುಲ್ ಬುಲ್ ಮತ್ತು ಕುರುಕ್ಷೇತ್ರ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಂಬರೀಶ್ ಕೊನೆಯದಾಗಿ ಮಗ ಅಭಿಷೇಕ್ ಅಭಿನಯದ ಚೊಚ್ಚಲ ಚಿತ್ರ 'ಅಮರ್' ಸಿನಿಮಾದಲ್ಲಿ ಬಣ್ಣಹಚ್ಚಿದ್ದಾರೆ. 'ಅಮರ್' ಚಿತ್ರದಲ್ಲಿ ಅಂಬಿ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

More from Filmibeat

English summary
Challenging star Darshan wishes to Rebel star Ambareesh on his 67th birthday. ಅಂಬರೀಶ್ ಹುಟ್ಟುಹಬ್ಬಕ್ಕೆ ದರ್ಶನ್ ಶುಭಕೋರಿದ ದರ್ಶನ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X