ವಿಶೇಷ ಸೂಚನೆ: ದರ್ಶನ್ ಹುಟ್ಟುಹಬ್ಬಕ್ಕೆ ಹೋಗುವ ಮುಂಚೆ ಈ ಸ್ಟೋರಿ ಓದಿ

By Bharath Kumar

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಮಾತ್ರ ಬಾಕಿಯಿದ್ದು, 'ಡಿ-ಬಾಸ್' ಭಕ್ತರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಫೆಬ್ರವರಿ 16 ರಂದು ದರ್ಶನ್ ಜನುಮದಿನವನ್ನ ಕೊಂಡಾಡಲು ದಾಸನ ಅಭಿಮಾನಿಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೈನ್ ಆರಂಭಿಸಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಚಕ್ರವರ್ತಿಯ ಕಟೌಟ್ ಗಳು, ಬ್ಯಾನರ್ ಗಳು ಸಿದ್ದಗೊಳ್ಳುತ್ತಿವೆ.

ಈ ನಡುವೆ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ದಾಸ ದರ್ಶನ್ ವಿಶೇಷವಾದ ಮನವಿ ಮಾಡಿಕೊಂಡಿದ್ದಾರೆ. ಹುಟ್ಟಹಬ್ಬವನ್ನ ಆಚರಿಸಿ, ಆದ್ರೆ, ಬೇರೆಯವರಿಗೆ ತೊಂದರೆಕೊಡಬೇಡಿ ಎಂದು ಪತ್ರ ಬರೆದು ಕೇಳಿಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಚಕ್ರವರ್ತಿಯ ಹುಟ್ಟುಹಬ್ಬಕ್ಕೆ ಹೋಗುವ ಮುಂಚೆ ಇದನ್ನ ಗಮನದಲ್ಲಿಟ್ಟಿಕೊಂಡು ಹೋಗಬೇಕಾಗಿದೆ..

Darshan Writes letter to Fans

ದಾಸನ ಪತ್ರದಲ್ಲಿ ಏನಿದೆ ಓದಿ....

ನಲ್ಮೆಯ ಅಭಿಮಾನಿಗಳಲ್ಲಿ,,,,,,

ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ. ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರದೂರುದ ಊರುಗಳಿಂದ ಬಂದು ನನಗೆ ಶುಭಾಶಯ ಕೋರಿ ನಿಮ್ಮದೇ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯ ಫಲವೆಂದೇ ಭಾವಿಸುತ್ತೇನೆ. ಈ ನಿಮ್ಮ ಪ್ರೀತಿಗೆ ನಾನು ಚಿರರುಣಿ. ನಿಮಗೆಲ್ಲ ತುಂಬು ಹೃದಯದ ಧನ್ಯವಾದ. ಆದರೆ, ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ದಯವಿಟ್ಟು ನೀವೆಲ್ಲರೂ ಅಕ್ಕಪಕ್ಕದ ಮನೆಯ ನಿವಾಸಿಗಳಿಗೆ ತೊಂದರೆ ಆಗದಂತೆ ಶಾಂತಿ ಹಾಗೂ ಶಿಸ್ತಿನಿಂದ ವರ್ತಿಸಬೇಕಾಗಿ ನಿಮ್ಮೆಲ್ಲರಲ್ಲಿ ಕೈಮುಗಿದು ಕೇಳಿಕೊಳ್ಳುತ್ತೇನೆ. ದಯವಿಟ್ಟು ಯಾರೂ ನನ್ನ ಅಕ್ಕಪಕ್ಕದ ಮನೆಯ ಕಾಂಪೌಂಡ್ ಹತ್ತುವುದು, ಒಳಪ್ರವೇಶಿಸುವುದು, ಹೂಕುಂಡಗಳನ್ನ ಬೀಳಿಸುವುದು, ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ತೋರಬಾರದು. ನನ್ನ ಬಗ್ಗೆ ಇಷ್ಟೆಲ್ಲಾ ಪ್ರೀತಿ ಅಭಿಮಾನ ಇಷ್ಟಿರುವ ನೀವೆಲ್ಲ ನನ್ನ ಕೋರಿಕೆಯನ್ನ ನಡೆಸಿಕೊಡುವಿರಾಗಿ ನಂಬಿರುತ್ತೇನೆ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿ.....

ಇಂತಿ ನಿಮ್ಮ ಪ್ರೀತಿಯ ದಾಸ ದರ್ಶನ್

More from Filmibeat

English summary
Challenging star Darshan has Wrote a letter to his Fans about his Birthday Celebration. february 16th Darshan will celebrates his 41st Birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X