ಅಕ್ಟೋಬರ್‌ನಲ್ಲಿ 'ಡೆವಿಲ್' ಬಿಡುಗಡೆ ಭಾಗ್ಯ ಇಲ್ಲ? ದರ್ಶನ್ ಅಭಿಮಾನಿಗಳಿಗೆ ಕಹಿಸುದ್ದಿ

ನಟ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಇತ್ತ 'ಡೆವಿಲ್' ಸಿನಿಮಾ ಬಿಡುಗಡೆಗೆ ತಯಾರಿ ನಡೀತಿದೆ. ಚಿತ್ರದ ಕೆಲಸಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ದರ್ಶನ್ ಹೇಳಿದ್ದಾರೆ. ಅವರು ಜೈಲಿನಿಂದ ಬಿಡುಗಡೆ ಆಗುವ ಮುನ್ನ 'ಡೆವಿಲ್' ಸಿನಿಮಾ ತೆರೆಗೆ ಬಂದರೂ ಅಚ್ಚರಿ ಪಡಬೇಕಿಲ್ಲ. ಈ ಹಿಂದೆ 'ಸಾರಥಿ' ಚಿತ್ರದ ವಿಚಾರದಲ್ಲಿ ಇದೇ ನಡೆದಿತ್ತು.

ಪ್ರಕಾಶ್ ನಿರ್ಮಿಸಿ ನಿರ್ದೇಶಿಸಿರುವ 'ಡೆವಿಲ್' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿಲ್ಲ. ಆದರೆ ಅಕ್ಟೋಬರ್ ಕೊನೆ ವಾರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ಭಾವಿಸಲಾಗಿತ್ತು. ಚಿತ್ರತಂಡದಲ್ಲಿ ಕೆಲಸ ಮಾಡಿರುವ ಕೆಲವರು ಇದೇ ಮಾತು ಹೇಳುತ್ತಿದ್ದಾರೆ. ಆದರೆ ಇದೀಗ ಚಿತ್ರತಂಡ ಹೊಸ ಬಿಡುಗಡೆ ದಿನಾಂಕದ ಮೇಲೆ ಕಣ್ಣಿಟ್ಟಿದೆ ಎನ್ನುವ ಊಹಾಪೋಹ ಶುರುವಾಗಿದೆ.

Darshan s Devil Unlikely to Release in October Film Team Considering New Date

ಅಕ್ಟೋಬರ್ ಕೊನೆ ವಾರ ಅಂದರೆ ಹೆಚ್ಚು ಕಮ್ಮಿ ಇನ್ನು ಎರಡು ತಿಂಗಳು. ಆದರೆ ಎರಡಲ್ಲ ಡೆವಿಲ್ ದರ್ಶನಕ್ಕೆ ಇನ್ನು 4 ತಿಂಗಳು ಅಭಿಮಾನಿಗಳು ಕಾಯಬೇಕಾಗಿ ಬರಬಹುದು ಎನ್ನುವ ಚರ್ಚೆ ಶುರುವಾಗಿದೆ. ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಜಾಸ್ತಿಯಿದೆ. ಅದಕ್ಕಾಗಿ ಹೆಚ್ಚಿನ ಸಮಯ ಬೇಕಾಗುತ್ತದೆ. ಜೊತೆಗೆ ದರ್ಶನ್ ಜೈಲು ಸೇರಿದ್ದು ಅವರು ಬರುವವರೆಗೂ ಕಾಯೋಣ ಎಂದು ಚಿತ್ರತಂಡ ತೀರ್ಮಾನಿಸಿದಂತಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಕಳೆದ ವರ್ಷ ಜೈಲು ಸೇರಿದ್ದರು. 5 ತಿಂಗಳ ಬಳಿಕ ಜಾಮೀನು ಪಡೆದು ಹೊರ ಬಂದಿದ್ದರು. ಸಿನಿಮಾ ಚಿತ್ರೀಕರಣ ಮುಗಿಸಿದ್ದರು. ಆದರೆ ಹೈಕೋರ್ಟ್ ಕೊಟ್ಟಿದ್ದ ಜಾಮೀನು ಸುಪ್ರೀಂ ಕೋರ್ಟ್‌ನಲ್ಲೇ ರದ್ದಾಗಿದೆ. ಹಾಗಾಗಿ ಅಷ್ಟು ಸುಲಭವಾಗಿ ಮತ್ತೆ ಜಾಮೀನು ಸಿಗುವುದಿಲ್ಲ ಎನ್ನುವ ಮಾತುಗಳು ಕೇಳಿಬರ್ತಿದೆ. ಇದೆಲ್ಲದರ ನಡುವೆ ಡಿಸೆಂಬರ್‌ನಲ್ಲಿ 'ಡೆವಿಲ್' ಚಿತ್ರ ಬಿಡುಗಡೆಗೆ ಚಿತ್ರತಂಡ ಮುಂದಾಗಿದೆ ಎನ್ನುವ ಗುಸುಗುಸು ಶುರುವಾಗಿದೆ.

"ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ 'ದಿ ಡೆವಿಲ್' ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೇ ಸಾಗಲಿ ಎಂಬುದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ" ಎಂದು ದರ್ಶನ್ ಜೈಲಿನಿಂದಲೇ ಸಂದೇಶ ಕಳುಹಿಸಿದ್ದರು.

Darshan s Devil Unlikely to Release in October Film Team Considering New Date

ಆಗಸ್ಟ್ 15ರಂದು 'ಡೆವಿಲ್' ಚಿತ್ರದ 'ಇದ್ರೇ ನೆಮ್ಮದಿಯಾಗ್ ಇರ್ಬೇಕು' ಸಾಂಗ್ ಬಿಡುಗಡೆ ಆಗಬೇಕಿತ್ತು. ಅದಕ್ಕಿಂತ ಒಂದು ದಿನ ಮುನ್ನ ದರ್ಶನ್ ಬಂಧನವಾಗಿತ್ತು. ಹಾಗಾಗಿ ಸಾಂಗ್ ರಿಲೀಸ್ ಮುಂದೂಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್, ಪ್ರಚಾರ ನಡೆಯಲಿ ಎಂದು ದರ್ಶನ್ ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ ಹಾಡು ಬಿಡುಗಡೆ ಆಗಲಿದ್ದು ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರಬಹುದು ಎನ್ನಲಾಗ್ತಿದೆ.

ಗಣೇಶ ಹಬ್ಬದ ಸಂಭ್ರಮದಲ್ಲಿ ಹಾಡು ಬಿಡುಗಡೆಯಾಗಬಹುದು. ಜೊತೆಗೆ ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎನ್ನುವ ಮಾಹಿತಿ ಕೂಡ ಸಿಗುತ್ತೆ ಎನ್ನುವ ಚರ್ಚೆ ನಡೀತಿದೆ. 2023ರ ಡಿಸೆಂಬರ್ ಕೊನೆ ವಾರ 'ಕಾಟೇರ' ಸಿನಿಮಾ ತೆರೆಗೆ ಬಂದು ಗೆದ್ದಿತ್ತು. ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ 25ಕ್ಕೆ 'ಡೆವಿಲ್' ದರ್ಶನವಾದರೂ ಅಚ್ಚರಿ ಪಡಬೇಕಿಲ್ಲ.

More from Filmibeat

English summary
peculation Rises on Devil Release Date as Darshan Stays Behind Bars
Read more about: darshan devil sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X