twitter
    For Quick Alerts
    ALLOW NOTIFICATIONS  
    For Daily Alerts

    ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ

    |

    ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದರು.

    ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್‌ಗೌಡ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಫುಡ್‌ ಕಿಟ್‌ ವಿತರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, 'ಮನೆ ಅಗತ್ಯ ಇರುವ ಕಲಾವಿದರು ಅರ್ಜಿ ಹಾಕಬಹುದು. ತಕ್ಷಣವೇ ಅಂಥ ಕಲಾವಿದರಿಗೆ ಕಡಿಮೆ ದರದಲ್ಲಿ ಮನೆ ಹಂಚಿಕೆ ಮಾಡಲಾಗುವುದು' ಎಂದರು.

    ಕೊರೊನಾ ರೋಗಿಗಳ ಸೇವೆಯಲ್ಲಿ ನಿರತ 'ಉಸಿರು' ತಂಡಕ್ಕೆ ಕೈಜೋಡಿಸಿದ ದರ್ಶನ್ಕೊರೊನಾ ರೋಗಿಗಳ ಸೇವೆಯಲ್ಲಿ ನಿರತ 'ಉಸಿರು' ತಂಡಕ್ಕೆ ಕೈಜೋಡಿಸಿದ ದರ್ಶನ್

    ಈಚೆಗೆ ಪ್ರಕಟಿಸಲಾದ ಪ್ಯಾಕೇಜ್‌ನಲ್ಲಿ ಕಲಾವಿದರಿಗೆ 3,000 ಕೊಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದರಲ್ಲಿ ಚಿತ್ರರಂಗದ ಪೋಷಕ ಕಲಾವಿದರೂ ಸೇರಿದ್ದಾರಾ ಇಲ್ಲವಾ ಎಂಬ ಬಗ್ಗೆ ಗೊಂದಲವಿದೆ. ಚಿತ್ರರಂಗದ ಕಲಾವಿದರಿಗೂ ಆ ಹಣ ಸಿಗುವ ಬಗ್ಗೆ ಕನ್ನಡ ಮತ್ತು‌ ಸಂಸ್ಕೃತ ಇಲಾಖೆ ಕ್ರಮ ವಹಿಸುವ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

     Title: DCM Ashwath Narayan distributed Food Kit to Film Actors

    ಪೋಷಕ ಕಲಾವಿದರನ್ನು ಆದ್ಯತೆಯ ಗುಂಪು ಎಂದು ಪರಿಗಣಿಸಿ ಅವರಿಗೂ ವ್ಯಾಕ್ಸಿನೇಷನ್ ನೀಡಲಾಗುವುದು. ಈ ಬಗ್ಗೆ ಕಲಾವಿದರ ಪಟ್ಟಿ ನೀಡುವಂತೆ ಕೇಳಲಾಗಿದೆ. ಇದಲ್ಲದೆ, ಈ ಫುಡ್‌ ಕಿಟ್‌ ಪಡೆಯುತ್ತಿರುವ ಎಲ್ಲ ಕಲಾವಿದರಿಗೆ ವೈಯಕ್ತಿಕವಾಗಿ ತಲಾ 1,000 ರೂ. ಚೆಕ್‌ ನೀಡುವುದಾಗಿ ಇದೇ ವೇಳೆ ಡಿಸಿಎಂ ಹೇಳಿದರು.

    'ಶಾಲಾ-ಕಾಲೇಜು ಶುಲ್ಕ ಕಡಿಮೆಗೊಳಿಸಿ': ಸಿಎಂಗೆ ಪತ್ರ ಬರೆದ ನಟ ಕಿರಣ್ ರಾಜ್'ಶಾಲಾ-ಕಾಲೇಜು ಶುಲ್ಕ ಕಡಿಮೆಗೊಳಿಸಿ': ಸಿಎಂಗೆ ಪತ್ರ ಬರೆದ ನಟ ಕಿರಣ್ ರಾಜ್

    ಹಿರಿಯ ಕಲಾವಿದರಾದ ಹೊನ್ನವಳ್ಳಿ ಕೃಷ್ಣ, ಮೀಸೆ ಅಂಜನಪ್ಪ, ಉಮೇಶ್ ಹೆಗ್ಡೆ, ಡಿಂಗ್ರಿ ನಾಗರಾಜ್, ಸಿತಾರಾ ಹಾಗೂ ಟ್ರಸ್ಟ್‌ನ ಭರತ್ ಗೌಡ, ನಟರಾದ ಗಣೇಶ್ ರಾವ್ ಕೆಸರ್ಕಾರ್, ಕೆಂಪೇಗೌಡ ಫುಡ್‌ ಕಿಟ್‌ ವ್ಯವಸ್ಥೆ ಮಾಡಿದ್ದರು. ಡಿಸಿಎಂ ಅವರು ಸಾಂಕೇತಿಕವಾಗಿ 30 ಕಲಾವಿದರಿಗೆ ಕಿಟ್‌ ವಿತರಣೆ ಮಾಡಿದ್ದು, ಉಳಿದ 200 ಕಿಟ್‌ಗಳನ್ನು ಕಲಾವಿದರ ಮನೆಗೆ ತಲುಪಿಸಲಾಗುವುದು ಎಂದು ಭರತ್‌ ಗೌಡ ಮಾಹಿತಿ ನೀಡಿದರು.

     Title: DCM Ashwath Narayan distributed Food Kit to Film Actors

    ಸಾವಿನ ಲೆಕ್ಕ ಮುಚ್ಚಿಡುತ್ತಿಲ್ಲ:

    ಸರಕಾರವು ಕೋವಿಡ್‌ ಸಾವಿನ ಲೆಕ್ಕವನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಅರೋಪ ಅಸತ್ಯದಿಂದ ಕೂಡಿದೆ. ಪ್ರತಿ ಸೋಂಕಿತನ ಬಗ್ಗೆಯೂ ಮಾಹಿತಿ ಇದೆ. ಯಾರಾದರೂ ಸಾವನ್ನಪ್ಪಿದರೆ ಆ ಮಾಹಿತಿಯೂ ವಿವಿಧ ಹಂತಗಳಲ್ಲಿ ದಾಖಲಾಗುತ್ತಿದೆ. ಇದೆಲ್ಲವನ್ನು ಬಹಳ ವ್ಯವಸ್ಥಿತವಾಗಿ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪದಲ್ಲಿ ಹುರಳಿಲ್ಲ. ಜನರಲ್ಲಿ ಗೊಂದಲ ಉಂಟು ಮಾಡುವುದು ಬೇಡ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

     Title: DCM Ashwath Narayan distributed Food Kit to Film Actors

    Recommended Video

    Upendra ರಾಜಕೀಯ ಉದ್ದೇಶದ ಬಗ್ಗೆ ಅಭಿಮಾನಿಗಳಲ್ಲಿ ನಿರಾಸೆ | Filmibeat Kannada

    ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೂ ಲಸಿಕೆ ಅಭಾವ ಇದೆ ಎನ್ನುವುದು ನಿಜ. ಆದರೆ, ಸರಕಾರ ಉತ್ಪಾದಕರಿಂದ ಲಸಿಕೆ ಪಡೆದು ಜನರಿಗೆ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಹಂತ ಹಂತವಾಗಿ ಲಭ್ಯವಾಗುತ್ತಿರುವ ಲಸಿಕೆಯನ್ನು ಆಗಿಂದಾಗ್ಗೆ ಕೊಡಲಾಗುತ್ತಿದೆ. ಆದ್ಯತೆಯ ಮೇರೆಗೆ ಯಾರಿಗೆ ಕೋಡಬೇಕೋ ಅವರಿಗೆ ಕೊಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    English summary
    Karnataka Deputy CM Ashwath Narayan distributed Food Kit to Film Actors along with Bharat Gowda Charitable Trust.
    Monday, May 24, 2021, 9:33
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X