For Quick Alerts
  ALLOW NOTIFICATIONS  
  For Daily Alerts

  ಸಂಚಾರಿ ವಿಜಯ್ ಚಿಕಿತ್ಸಾ ವೆಚ್ಚ ಭರಿಸಿದ ಡಾ ಅಶ್ವಥ್ ನಾರಾಯಣ

  |

  ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ.

  Sanchari Vijay ಬ್ರೈನ್ ಫೆಲ್ಯೂರ್ ಆಗಿದೆ ಡೆಡ್ ಆಗಿಲ್ಲ ಎಂದು ಡಾಕ್ಟರ್ ಸ್ಪಷ್ಟನೆ | Filmibeat Kannada

  ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು.

  ಸಂಚಾರಿ ವಿಜಯ್ ಅಪ್‌ಡೇಟ್: ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆಸಂಚಾರಿ ವಿಜಯ್ ಅಪ್‌ಡೇಟ್: ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

  ವಿಜಯ್‌ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

  ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

  ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.

  English summary
  Sanchari Vijay Accident: DCM Ashwath Narayan to pay Actor's medical bills who battles for life in ICU.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X