ನಟ ದರ್ಶನ್ ಎಡಗೈಗೆ ಯಶಸ್ವಿ ಶಸ್ತ್ರ ಚಿಕಿತ್ಸೆ; ಶೀಘ್ರ ಚೇತರಿಕೆಗೆ ಫ್ಯಾನ್ಸ್ ಪ್ರಾರ್ಥನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣದ ವೇಳೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ದರ್ಶನ್ ಕೈಗೆ ಶಸ್ತ್ರಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ದರ್ಶನ್ ಅಭಿಮಾನಿ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೊ ವೈರಲ್ ಆಗುತ್ತಿದೆ. ಫೋಟೊ ಅಭಿಮಾನಿಗಳು ಬೇಗ ಗುಣಮುಖರಾಗಿ ಬಾಸ್ ಎಂದು ಪ್ರಾರ್ಥಿಸುತ್ತಿದ್ದಾರೆ.

Devil actor Darshan poses with his lady fan after successful left hand surgery

ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಸಣ್ಣ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ದೊಡ್ಡ ಸೆಟ್ ಹಾಕಿ ಆಕ್ಷನ್ ಸನ್ನಿವೇಶ ಸೆರೆಹಿಡಿಯಲಾಗಿದೆ. ಚಿತ್ರೀಕರಣದ ವೇಳೆ ದರ್ಶನ್ ಕೈಗೆ ಪೆಟ್ಟಾಗಿತ್ತು. ಕೈ ನೋವಿಗೆ ಪಟ್ಟಿ ಧರಿಸಿ 'ಮ್ಯಾಟ್ನಿ' ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಹಾಜರಾಗಿದ್ದರು.

ನೋವು ಹೆಚ್ಚಾದ ಮೇಲೆ ಕೈಗೆ ಬೆಲ್ಟ್ ಧರಿಸಿ ಓಡಾಡುವಂತಾಯಿದೆ. ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಬೆಂಬಲಿಗರ ಸಭೆಗೂ ಬೆಲ್ಟ್ ಧರಿಸಿ ದರ್ಶನ್ ಕಾಣಿಸಿಕೊಂಡಿದ್ದರು. ಆ ವೇದಿಕೆಯಲ್ಲೇ ತಮ್ಮ ಕೈ ನೋವು ಹಾಗೂ ಶಸ್ತ್ರಚಿಕಿತ್ಸೆ ಮಾತನಾಡಿದ್ದರು. ಆ ಸಭೆಯಲ್ಲಿ ಭಾಗವಹಿಸಲೇಬೇಕು, ತಮ್ಮ ಮದರ್ ಇಂಡಿಯಾ ಜೊತೆಗೆ ಇರಬೇಕು ಎನ್ನುವ ಕಾರಣಕ್ಕೆ ಸರ್ಜರಿಯನ್ನು 2 ದಿನ ಮುಂದೂಡಿದ್ದರು.

"ನಾನು ಕಳೆದ ಬಾರಿ ಬಂದಾಗ ಬಲಗೈ ಮುರಿದಿತ್ತು, ಈಗ ಎಡಗೈ. ಏಪ್ರಿಲ್ 2ರಂದು ಆಪರೇಷನ್ ಇತ್ತು. ಆದರೆ ಅಮ್ಮನಿಗೆ ಡೇಟ್ ಕೊಟ್ಟುಬಿಟ್ಟಿದ್ದೀನಿ. ಅದು ಮುಗಿಸಿ ಬರ್ತೀನಿ' ಅಂತ ವೈದ್ಯರಿಗೆ ಹೇಳಿ, ಮಂಡ್ಯಕ್ಕೆ ಬಂದಿದ್ದೇನೆ. ಇವತ್ತು ರಾತ್ರಿ ಆಸ್ಪತ್ರೆಗೆ ದಾಖಲಾಗಿ, ನಾಳೆ ಬೆಳಗ್ಗೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ. ಅದಕ್ಕೆ ದಯವಿಟ್ಟು ನಾನು ಹೋಗಬೇಕಾದರೆ, ಸ್ವಲ್ಪ ಜಾಗ ಮಾಡಿಕೊಡಿ, ಕೈ ಎಳೆಯಬೇಡಿ ಎಂದು ಬೇಡಿಕೊಳ್ಳುತ್ತೇನೆ" ಎಂದು ಮನವಿ ಮಾಡಿಕೊಂಡಿದ್ದರು.

Devil actor Darshan poses with his lady fan after successful left hand surgery

ಮಂಡ್ಯ ಸಭೆ ಬಳಿಕ ಬೆಂಗಳೂರಿನಲ್ಲಿ ನಡೆದ 'ಜಾಜಿ' ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗಿದ್ದರು. ಜಾಜಿ ಹೆಜ್ಜೆ ಹಾಕಿರುವ ಸಾಂಗ್ ಡೀ ಬೀಟ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಕೈ ನೋವಿನಲ್ಲೇ ನಗುತ್ತಾ ಸಾಂಗ್ ಅನಾವರಣ ಮಾಡಿದ್ದರು.

ಇನ್ನು 'ಕಾಟೇರ' ಸಿನಿಮಾ ಯಶಸ್ವಿಯಾಗಿ 100 ದಿನ ಪೂರೈಸಿದೆ. 50 ದಿನ ಪೂರೈಸುವ ಮುನ್ನ ಓಟಿಟಿಗೆ ಸಿನಿಮಾ ಬಂದರೂ ಕ್ರೇಜ್ ಮಾತ್ರ ಕಮ್ಮಿ ಆಗಲಿಲ್ಲ. ಪ್ರೇಕ್ಷಕರು ಥಿಯೇಟರ್‌ನಲ್ಲೇ ಸಿನಿಮಾ ನೋಡಲು ಮನಸ್ಸು ಮಾಡಿದ್ದರು. ಹಾಗಾಗಿ ಓಟಿಟಿಗೆ ಸಿನಿಮಾ ಬಂದಿದ್ದರೂ ಜನ ದೊಡ್ಡ ಪರದೆಯಲ್ಲೇ 'ಕಾಟೇರ'ನ ಆರ್ಭಟ ಕಣ್ತುಂಬಿಕೊಂಡರು.

'ಕಾಟೇರ' ಬಳಿಕ 'ಡೆವಿಲ್' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ 'ತಾರಕ್' ಚಿತ್ರದಲ್ಲಿ ದರ್ಶನ್ ಹಾಗೂ ಪ್ರಕಾಶ್ ಒಟ್ಟಿಗೆ ಕೆಲಸ ಮಾಡಿದ್ದರು. ಸಿನಿಮಾ ಹಿಟ್ ಆಗಿತ್ತು. ಅದೇ ಕಾಂಬಿನೇಷನ್‌ನಲ್ಲಿ ಆಕ್ಷನ್ ಎಂಟರ್‌ಟೈನರ್ 'ಡೆವಿಲ್' ಸಿನಿಮಾ ಬರಲಿದೆ. 15 ದಿನಗಳ ದರ್ಶನ್ ವಿಶ್ರಾಂತಿ ಪಡೆಯಲಿದ್ದಾರೆ. ಏಪ್ರಿಲ್ 20ರ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಅಕ್ಟೋಬರ್ ವೇಳೆಗೆ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೀತಿದೆ.

More from Filmibeat

English summary
Darshan after successful surgery following on-set injury
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X