Don't Miss!
- News
Breaking; ಸಾಹಿತಿ, ವಿಮರ್ಶಕ ಕೆ. ವಿ. ತಿರುಮಲೇಶ್ ನಿಧನ
- Technology
ಜಿಯೋ ಗ್ರಾಹಕರೆ, ಈ ರೀಚಾರ್ಜ್ ಪ್ಲ್ಯಾನ್ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?
- Automobiles
'ಅಲ್ಟ್ರಾವೈಲೆಟ್ F77' ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
- Lifestyle
ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ಕುರಿತ ಆಸಕ್ತಿಕರ ಸಂಗತಿಗಳಿವು
- Sports
ನೀವೇ ನಮಗೆ ಸ್ಪೂರ್ತಿ: ಕಿರಿಯರ ಸಾಧನೆಗೆ ಹರ್ಮನ್ಪ್ರೀತ್ ಕೌರ್ ಮುಕ್ತಕಂಠದ ಶ್ಲಾಘನೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಧೈರ್ಯಂ' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್
ಕೃಷ್ಣ ಅಜಯ್ ರಾವ್ ನಟನೆಯ 'ಧೈರ್ಯಂ' ಸಿನಿಮಾದ ಬಿಡುಗಡೆಯ ದಿನಾಂಕ ನಿಗದಿ ಆಗಿದೆ. ಸಿನಿಮಾವನ್ನು ಇದೇ ತಿಂಗಳು ಅಂದರೆ ಜುಲೈ 21ಕ್ಕೆ ರಿಲೀಸ್ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಂಡಿದೆ.
ಈ ಹಿಂದೆ 'ಮಳೆ' ಸಿನಿಮಾವನ್ನು ನಿರ್ದೇಶನ ಮಾಡಿದ್ದ ಶಿವ ತೇಜಸ್ 'ಧೈರ್ಯಂ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಫ್ಯಾಮಿಲಿ ಡ್ರಾಮಾದ ಜೊತೆಗೆ ಲವ್, ಆಕ್ಷನ್, ಸೆಂಟಿಮೆಂಟ್ ಹೀಗೆ ಎಲ್ಲ ರೀತಿಯ ಕಮರ್ಷಿಯಲ್ ಅಂಶಗಳು ಚಿತ್ರದಲ್ಲಿದೆ.
ಒಬ್ಬ ಮಿಡಲ್ ಕ್ಲಾಸ್ ಹುಡುಗ ಏನಾದರು ಸಾಧಿಸುವುದಕ್ಕೆ ಹೊರಟಾಗ ಅವನಿಗೆ ಆಗುವ ತೊಂದರೆಗಳ ಮೇಲೆ ಸಿನಿಮಾದ ಕಥೆ ಸಾಗಿದೆ. ಜೊತೆಗೆ ಎಲ್ಲರ ಜೀವನದಲ್ಲಿ ಬರುವ ಸಮಸ್ಯೆಗಳನ್ನು ಚಿತ್ರದಲ್ಲಿ ತೋರಿಸಿದ್ದಾರೆ. 'ಧೈರ್ಯಂ' ಚಿತ್ರದಲ್ಲಿ ಒಂದು ಕ್ಯೂಟ್ ಲವ್ ಸ್ಟೋರಿ ಕೂಡ ಇದ್ದು ಅಧಿತಿ ಎನ್ನುವ ಹೊಸ ಹುಡುಗಿ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
''ಜಿಂಕೆಮರಿ' ಖ್ಯಾತಿಯ ಎಮಿಲ್ 'ಧೈರ್ಯಂ' ಸಿನಿಮಾಗೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಆಡಿಯೋ ಸೂಪರ್ ಹಿಟ್ ಆಗಿದೆ. ಜೊತೆಗೆ ಇತ್ತೀಚಿಗಷ್ಟೆ ರಿಲೀಸ್ ಆದ ಸಾಧು ಕೋಕಿಲ ಅವರ 'ಪಿ ಕೆ' ಗೆಟಪ್ ಸಖತ್ ಸದ್ದು ಮಾಡಿತ್ತು. ಈ ರೀತಿ ಇಷ್ಟು ದಿನ ಅನೇಕ ವಿಶೇಷತೆಗಳ ಮೂಲಕ ಕುತುಹಲ ಹುಟ್ಟಿಸಿದ್ದ 'ಧೈರ್ಯಂ' ಚಿತ್ರ ಇದೇ ತಿಂಗಳು 21ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.