Don't Miss!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಿಕ್ ಕೊಡುತ್ತಿದೆ 'once upon a time in ಜಮಾಲಿಗುಡ್ಡ'
ಡಾಲಿ ಧನಂಜಯ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ವಿಭಿನ್ನ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ ನಟ ರಾಕ್ಷಸನ ಮತ್ತೊಂದು ಸಿನಿಮಾ ರಿಲೀಸ್‌ಗೆ ತುದಿಗಾಲಲ್ಲಿ ನಿಂತಿದೆ. ಅದುವೇ 'once upon a time in ಜಮಾಲಿಗುಡ್ಡ' .
ಈಗಾಗಲೇ ಪಾತ್ರದ ಹೆಸರು ಹಾಗೂ ವಿಭಿನ್ನ ಗೆಟಪ್‌ನಿಂದ ಗಮನ ಸೆಳೆಯುತ್ತಿರುವ 'once upon a time in ಜಮಾಲಿಗುಡ್ಡ'ದ ಟ್ರೈಲರ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾ ಟ್ರೈಲರ್ ಈಗಾಗಲೇ ಸಿನಿಪ್ರಿಯರಿಗೆ ಸಖತ್ ಕಿಕ್ ಕೊಟ್ಟಿದೆ.
'once upon a time in ಜಮಾಲಿಗುಡ್ಡ' ಸಿನಿಮಾ 95 ಹಾಗೂ 96 ಕಾಲ ಘಟ್ಟದಲ್ಲಿ ನಡೆಯುವ ಕಾಲ್ಪನಿಕ ಕಥೆ. ಹೀಗಾಗಿ ಚಿತ್ರದ ಲೊಕೇಶನ್‌ನಿಂದ ಹಿಡಿದು ಪಾತ್ರದವರೆಗೂ ಹೆಚ್ಚು ಗಮನವನ್ನು ನೀಡಲಾಗಿದೆ.
ಧನಂಜಯ ಹಾಗೂ ಬೇಬಿ ಪ್ರಾಣ್ಯ ನಡುವಿನ ಭಾವನಾತ್ಮಕ ಪಯಣ ಈ ಸಿನಿಮಾದ ಹೈಲೈಟ್. ಜಮಾಲಿಗುಡ್ಡದ ಬಹುತೇಕ ಚಿತ್ರೀಕರಣ ಚಿಕ್ಕಮಗಳೂರಿನ ಬಾಬಾಬುಡನಗಿರಿಯಲ್ಲೇ ನಡೆದಿದೆ.
ಅಂದ್ಹಾಗೆ 'ಜಮಾಲಿಗುಡ್ಡ' ಸಿನಿಮಾ ಈ ವರ್ಷ ಬಿಡುಗಡೆಯಾಗುತ್ತಿರುವ ಧನಂಜಯ್ ಅಭಿನಯದ 6ನೇ ಸಿನಿಮಾ. "ಇದೊಂದು ಫೀಲ್ ಗುಡ್ ಸಿನಿಮಾ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಚಿತ್ರ. ಕುಶಾಲ್ ಗೌಡ ಈ ಚಿತ್ರಕ್ಕಾಗಿ ಫೇಸ್ ಬುಕ್ ಮೂಲಕ ನಿರ್ಮಾಪಕರನ್ನು ಹುಡುಕಿದರು. ಆಗ ಶ್ರೀಹರಿ ಸಿಕ್ಕಿದರು. ಆ ವೇಳೆ ನಾನು ಕೂಡ ಬ್ಯುಸಿಯಾಗಿದ್ದೆ. ಆದರೆ, ಹೆಚ್ಚಿನ ಚಿತ್ರೀಕರಣ ಬಾಬಾಬುಡನಗಿರಿಯಲ್ಲೇ ನಡೆಯಬೇಕಿದ್ದು, ಅದರಲ್ಲೂ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ವಾತಾವರಣದಲ್ಲೇ ಚಿತ್ರೀಕರಣ ನಡೆಯಬೇಕಿಗಿದ್ದರಿಂದ ಬೇಗನೇ ಶೂಟಿಂಗ್‌ನಲ್ಲಿ ಭಾಗವಹಿಸಿದೆ. ಕ್ಯಾಮರಾಮ್ಯಾನ್ ಕಾರ್ತಿಕ್ ಸೇರಿದಂತೆ ಇಡೀ ತಂತ್ರಜ್ಞರ ಕೆಲಸ ಅದ್ಭುತ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಕೂಡ ಸಖತ್ತಾಗಿದೆ." ಎಂದು ಧನಂಜಯ್ ಹೇಳಿದ್ದಾರೆ.
ಅದಿತಿ ಪ್ರಭುದೇವಗೆ 'ಜಮಾಲಿಗುಡ್ಡ' ಸಿನಿಮಾ ತುಂಬಾನೇ ಸ್ಪೆಷಲ್. "ಈ ಚಿತ್ರ ನನ್ನ ವೃತ್ತಿಬದುಕಿನಲ್ಲಿ ಸದಾ ನೆನಪಿನಲ್ಲಿ ಉಳಿಯುವ ಸಿನಿಮಾವಾಗಲಿದೆ. ಈ ಚಿತ್ರದ ಭಾವನಾತ್ಮಕ ಸನ್ನಿವೇಶಗಳಲ್ಲಿ ನಾನು ಎಷ್ಟೋ ಕಡೆ ಸಹಜವಾಗಿ ಅತ್ತಿದ್ದು ಇದೆ. ಅಂತಹ ಅದ್ಭುತ ಸನ್ನಿವೇಶಗಳು ಈ ಚಿತ್ರದಲ್ಲಿದೆ" ಎಂದರು ಈ ಸಿನಿಮಾ ಎಷ್ಟು ಸ್ಪೆಷಲ್ ಅನ್ನೋದನ್ನು ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ.

ಇಪ್ಪತ್ತು ವರ್ಷಗಳ ಹಿಂದೆ ಸಿನಿಮಾದಲ್ಲಿ ನಟಿಸಬೇಕು ಅನ್ನೋ ಆಸೆ ಈಡೇರಲಿಲ್ಲ. ಹೀಗಾಗಿ ಈಗ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಶ್ರೀ ಹರಿ ಕಾಲಿಟ್ಟಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಯಶ್ ಶೆಟ್ಟಿ, ರುಶಿಕಾ, ದಿವ್ಯ, ಪ್ರಾಣ್ಯ, ಸಂತು, ಸಂಕಲನಕಾರ ಹರೀಶ್ ಕೊಮ್ಮೆ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ನೀಡಿದ್ದು, ಡಿಸೆಂಬರ್ 30 ಸಿನಿಮಾ ರಿಲೀಸ್ ಆಗುತ್ತಿದೆ.