ಹುಟ್ಟುಹಬ್ಬದ ಸಂಭ್ರಮದಲ್ಲಿ ಧನಂಜಯ್: ಡಾನ್ ಜಯರಾಜ್ ಆಗಿ ಎಂಟ್ರಿ ಕೊಟ್ಟ ಡಾಲಿ

ಸ್ಯಾಂಡಲ್ ವುಡ್ ಡಾಲಿ ಎಂದೇ ಖ್ಯಾತಿಗಳಿಸಿರುವ ನಟ ಧನಂಜಯ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಚಂದನವನದ ಬ್ಯುಸಿಯಸ್ಟ್ ನಟ ಧನಂಜಯ್ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಪ್ರತಿವರ್ಷ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸುತ್ತಿದ್ದ ಧನಂಜಯ್ ಈ ಬಾರಿ ಸರಳವಾಗಿ ಆಪ್ತರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಸ್ಟಾರ್ ಕಲಾವಿದರು ಅದ್ದೂರಿ, ಸಂಭ್ರಮದ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿ ಎರಡು ವರ್ಷಗಳಾಗಿದೆ. ಕೊರೊನಾ ಕಾರಣದಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಕೇಕ್ ಕತ್ತರಿಸಿ ಸಂಭ್ರಮಿಸುವ ಕ್ಷಣ ಹೊರಟುಹೋಗಿದೆ.

ಆದರೆ ಸಾಮಾಜಿಕ ಜಾಲತಾಣದ ಮೂಲಕವೇ ಅಭಿಮಾನಿಗಳು ಹುಟ್ಟುಹಬ್ಬನ್ನು ಸಂಭ್ರಮಿಸುತ್ತಿದ್ದಾರೆ. ಡಾಲಿಗೆ ವಿಶ್ ಮಾಡಿ ಸಂತಸ ಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಧನಂಜಯ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಅಂದಹಾಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿದ್ದರೂ ಅಭಿಮಾನಿಗಳಿಗೆ ಸಖತ್ ಸರ್ಪ್ರೈಸ್ ನೀಡಿದ್ದಾರೆ.

ಡಾಲಿ ಹುಟ್ಟುಹಬ್ಬದ ಪ್ರಯುಕ್ತ 'ಹೆಡ್ ಬುಷ್' ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಈಗ ಅಭಿಮಾನಿಗಳ ನಿದ್ದೆಗೆಡಿಸಿದೆ. ಹೌದು ಚಿತ್ರದಲ್ಲಿ ಧನಂಜಯ್ ಬೆಂಗಳೂರಿನ ಭೂಗತ ಲೋಕದಲ್ಲಿ ಡಾನ್ ಆಗಿದ್ದ ಎಂ ಪಿ ಜಯರಾಜ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಟೀಸರ್ ನಲ್ಲಿ ಧನಂಜಯ್ ರೌಡಿ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ.

Dhananjay Birthday: Head Bush movie teaser release for Dhananjay birthday

ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಧನಂಜಯ್ ಮತ್ತೊಂದು ನಟ ರಾಕ್ಷಸನಾಗಿ ಅಬ್ಬರಿಸಿದ್ದಾರೆ. ಡಾಲಿಯ ಹೊಸ ಅವತಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಂ.ಪಿ ಜಯರಾಜ್ ಆಗಿ ಧನಂಜಯ್ ಅವರನ್ನು ತೆರೆಮೇಲೆ ನೋಡಲು ಕಾತರರಾಗಿದ್ದಾರೆ. ಅಂದಹಾಗೆ ಚಿತ್ರಕ್ಕೆ ಅಗ್ನಿ ಶ್ರೀಧರ್ ಕಥೆ-ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಶೂನ್ಯ ಎನ್ನುವ ಯುವ ಪ್ರತಿಭೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ಧನಂಜಯ್ ಜೊತೆ ಬಾಲಿವುಡ್ ನಟಿ ಪಾಯಲ್ ರಜಪೂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು ಮತ್ತು ಪಂಜಾಬಿ ಸಿನಿಮಾಗಳಲ್ಲಿ ಮಿಂಚಿರುವ ನಟಿ ಪಾಯಲ್ ಮೊದಲ ಬಾರಿಗೆ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಹೆಡ್ ಬುಷ್ ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಇನ್ನು ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಡಾಲಿ, ನಟಿ ರಚಿತಾ ಜೊತೆ 'ಮಾನ್ಸೂನ್ ರಾಗ' ಹಾಡುತ್ತಾ ಅಭಿಮಾನಿಗಳ ಮುಂದೆ ಬಂದಿದ್ದರು. ಮಾನ್ಸೂನ್ ರಾಗ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ರಚಿತಾ ರಾಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಡಾಲಿಗೆ ನಾಯಕಿಯಾಗಿದ್ದು, ಇಬ್ಬರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಇನ್ನು ಧನಂಜಯ್ ನಟನೆಯ ಮತ್ತೊಂದು ಬಹುನಿರೀಕ್ಷೆಯ ಸಿನಿಮಾ 'ರತ್ನನ್ ಪ್ರಪಂಚ' ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ರತ್ನನ್ ಪ್ರಪಂಚ ನೋಡಿ ಅನೇಕರು ಫಿದಾ ಆಗಿದ್ದಾರೆ. ಇದಕ್ಕೂ ಮೊದಲು ಧನಂಜಯ್ 'ಉಡುಪಿ ಹೋಟೆಲ್..' ಹಾಡಿನ ಮೂಲಕ ಗಮನ ಸೆಳೆದಿದ್ದರು. 'ಬಡವ ರಾಸ್ಕಲ್' ಚಿತ್ರದ 'ಉಡುಪಿ ಹೋಟೆಲ್..' ಹಾಡನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೂಡ ಪ್ರೇಕ್ಷಕರ ಹೃದಯ ಗೆದ್ದಿದೆ. ಬ್ಯಾಕ್ ಟು ಬ್ಯಾಕ್ ಸರ್ಪ್ರೈಸ್ ಗಳನ್ನು ನೀಡುತ್ತಾ ಅಭಿಮಾನಿಗಳ ಕುತೂಹಲ ಹಚ್ಚಿಸುತ್ತಿರುವ ಧನಂಜಯ್ ಯಾವಾಗ ತೆರೆಮೇಲೆ ಎಂಟ್ರಿ ಕೊಡಲಿದ್ದಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಧನಂಜಯ್ ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ತೆಲುಗಿನ ಬಹು ನಿರೀಕ್ಷೆಯ ಪುಷ್ಪ ಸಿನಿಮಾದಲ್ಲಿ ಧನಂಜಯ್ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಎದುರು ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ ರಾಮ್ ಗೋಪಾಲ್ ವರ್ಮ ಅವರ ಸಿನಿಮಾದಲ್ಲಿ ಮಿಂಚಿದ್ದ ಡಾಲಿ ಇದೀಗ ಎರಡನೇ ಬಾರಿ ತೆಲುಗು ಪ್ರೇಕ್ಷಕರ ಮುಂದೆ ಹೋಗುತ್ತಿದ್ದಾರೆ. ಪುಷ್ಪ ಚಿತ್ರದಲ್ಲಿ ಡಾಲಿಯ ಅಬ್ಬರ ಹೇಗಿರಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

More from Filmibeat

English summary
Dhananjay Birthday: 'Head Bush' movie teaser released for Dhananjay birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X