ಧನಂಜಯ್ ನಟನೆಯ 'ಬಡವ ರಾಸ್ಕಲ್' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಕೊರೊನಾ 2ನೇ ಅಲೆ ಲಾಕ್‌ಡೌನ್ ಸಡಿಲಿಕೆ ಆಗಿದೆ. ಜೊತೆಗೆ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಸಿಗುತ್ತಿದೆ. ಶೇ. 50ರಷ್ಟು ಚಿತ್ರಮಂದಿರ ಭರ್ತಿಗೆ ಅನುಮತಿ ನೀಡಲಾಗಿದೆ. ಇದರ ಬೆನ್ನಲ್ಲೇ ಈಗ ಕನ್ನಡ ಸಿನಿಮಾಗಳು ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಿವೆ. ಈಗಾಗಲೇ ಬಹುನಿರೀಕ್ಷೆಯ 'ಭಜರಂಗಿ-2' ಮತ್ತು 'ಸಲಗ' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಇದೀಗ ಮತ್ತೊಂದು ಬಹುನಿರೀಕ್ಷೆಯ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ.

ಅದು ಮತ್ಯಾವುದು ಅಲ್ಲ ಡಾಲಿ ಧನಂಜಯ್ ನಟನೆಯ 'ಬಡವ ರಾಸ್ಕಲ್' ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗಿತ್ತು. ಆದರೆ ಕೊರೊನಾ ಅಡ್ಡಿಯಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ರಿಲೀಸ್ ಡೇಟ್ ಬಹಿರಂಗಗೊಳಿಸಿದ್ದಾರೆ.

ಅಂದಹಾಗೆ ಧನಂಜಯ್ ನಟನೆಯ 'ಬಡವ ರಾಸ್ಕಲ್' ಸೆಪ್ಟೆಂಬರ್ 24ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸ್ವತಃ ಚಿತ್ರತಂಡ ಬಹಿರಂಗ ಪಡಿಸಿದೆ. ಚಿತ್ರದ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ಧನಂಜಯ್, "ಪಕ್ಕ middle class gangsters ಜೊತೆಗೆ, "ಬಡವ ರಾಸ್ಕಲ್ " ಆಗಿ ನಿಮ್ಮ ಮುಂದೆ ಬರುತಿದ್ದೇನೆ, ಇದೆ ಸೆಪ್ಟೆಂಬರ್ 24 ಕ್ಕೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ" ಎಂದು ಹೇಳಿದ್ದಾರೆ.

Dhananjay starrer Badava Rascal set to release on september 24

ಧನಂಜಯ್ ಅವರೇ ಹೇಳುವ ಹಾಗೆ ಇದು ಮಧ್ಯಮ ವರ್ಗದ ಹುಡುಗನ ಕಥೆೆಯಾಗಿದೆ. ಚಿತ್ರಕ್ಕೆ ಶಂಕರ್ ಗುರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್ ಗೆ ಜೋಡಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಅಮೃತಾ ಮತ್ತು ಧನಂಜಯ್ ಎರಡನೇ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಮೊದಲು 'ಪೋಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದಲ್ಲಿ ಒಟ್ಟಿಗೆ ಕಣಿಸಿಕೊಂಡಿದ್ದರು.

Recommended Video

ಹೆಣ್ಣುಮಕ್ಕಳು ಬಂದ್ರೆ ಈ ತರ ಶರಣಾಗ್ತಾರೆ ಡಿ ಬಾಸ್

ಇನ್ನು ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆ ಸಿದ್ಧವಾಗಿವೆ. ಸದ್ಯ ಸಲಗ, ಭಜರಂಗಿ-2 ಮತ್ತು ಬಡವ ರಾಸ್ಕಲ್ ಸಿನಿಮಾಗಳು ತೆರೆಗೆ ಬರಲು ರೆಡಿಯಾಗಿವೆ. ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಸದ್ಯ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿರುವ ಸಿನಿಮಾಗಳ ಬಿಡುಗಡೆ ದಿನಾಂಕ ಸಹ ಸದ್ಯದಲ್ಲೇ ಘೋಷಣೆ ಆಗಲಿದೆ.

More from Filmibeat

English summary
Dhananjay starrer Badava Rascal movie release date announced. This movie set to release on September 24.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X