»   » ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ಬರಲಿದ್ದಾನೆ ದೊಡ್ಮನೆ ಧೀರ

ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ಬರಲಿದ್ದಾನೆ ದೊಡ್ಮನೆ ಧೀರ

Posted By:
Subscribe to Filmibeat Kannada

ರಾಜ್ ಕುಮಾರ್ ಕುಟುಂಬದಿಂದ ಮತ್ತೋರ್ವ ನಾಯಕ ನಟ ಚಿತ್ರರಂಗಕ್ಕೆ ಕಾಳಿಡುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಸ್ಟೈಲಿಷ್ ಆಗಿ ಫೋಟೋ ಶೂಟ್ ಮಾಡಿಸಿದ್ದ ಧೀರೇನ್ ರಾಮ್ ಕುಮಾರ್ ಇದೇ ವರ್ಷ ಬೆಳ್ಳಿ ಪರದೆಯ ಮೇಲೆ ಬರಲಿದ್ದಾರೆ.

ಈಗಾಗಲೇ ಸಾಕಷ್ಟು ನಿರ್ಮಾಪಕರುಗಳು ಧೀರೇನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ. ಕನ್ನಡ ಸಿನಿಮಾರಂಗದ ಪ್ರಸಿದ್ದ ನಿರ್ಮಾಣ ಸಂಸ್ಥೆಗಳಾದ ಹೊಂಬಾಳೆ ಪ್ರೊಡಕ್ಷನ್ಸ್ ಹಾಗೂ ಜಯಣ್ಣ ಕಂಬೈನ್ಸ್ ಧೀರೇನ್ ಸಿನಿಮಾವನ್ನ ನಿರ್ಮಾಣ ಮಾಡುವ ಸಾಧ್ಯತೆಗಳಿವೆ ಎನ್ನುವ ಸುದ್ದಿ ಹರಿದಾಡಿತ್ತು.

Dheeren Ramkumar's new film will start this year.

ಅಭಿಮಾನಿಯ ಅಭಿಮಾನಕ್ಕೆ ಮನಸೋತ 'ಪುನೀತ

ಅದರಂತೆ ನಿರ್ಮಾಪಕ ಜಯಣ್ಣ ಧೀರೇನ್ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿ ತೋರಿದ್ದಾರಂತೆ. ಒಳ್ಳೆ ಕಥೆ ಹಾಗೂ ನಿರ್ದೇಶಕರಿಗಾಗಿ ಹುಡುಕಾಟ ಶುರುವಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಹೊಸ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಧೀರೇನ್.

Dheeren Ramkumar's new film will start this year.

ಧೀರೇನ್ ಕೂಡ ಚಿತ್ರದಲ್ಲಿ ನಾಯಕನಾಗಲು ಬೇಕಾಗಿರುವ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಲುಕ್ ಟೆಸ್ಟ್ ಗಾಗಿ ಫೋಟೋ ಶೂಟ್ ಮಾಡಿಸಿದ್ದು ಈಗಾಗಲೇ ಕನ್ನಡ ಚಿತ್ರರಂಗದ ರಣವೀರ್ ಸಿಂಗ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

English summary
Kannada actor Dheeren Ramkumar's new film will start this year. There is a possibility of film production in the Jayanna Combines, Dheeren is the son of actor Ram Kumar.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada