For Quick Alerts
  ALLOW NOTIFICATIONS  
  For Daily Alerts

  ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಂಪತಿ

  |

  ಸ್ಯಾಂಡಲ್ ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಇಂದು ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇದೇ ದಿನ ಕಳೆದ ವರ್ಷ ನವೆಂಬರ್ 24ರಂದು ಧ್ರುವ ಸರ್ಜಾ, ಬಹುಕಾಲದ ಗೆಳತಿ ಪ್ರೇರಣಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

  ಧ್ರುವ ಸರ್ಜಾ ಮದುವೆಗೆ ಇಡೀ ಸ್ಯಾಂಡಲ್ ವುಡ್ ಸಾಕ್ಷಿಯಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಯಶ್, ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಭಾಗಿಯಾಗಿ ಧ್ರುವ ಸರ್ಜಾ ದಂಪತಿಗೆ ಶುಭಹಾರೈಸಿದ್ದರು.

  ಧ್ರುವ ಸರ್ಜಾ ಕೂದಲಿಗೆ ಕತ್ತರಿ: ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಕೂದಲು ದಾನ

  ನಟ ಧ್ರುವ ಸರ್ಜಾ ಮತ್ತು ಪ್ರೇರಣಾ ಶಂಕರ್ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. 15 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಶಾಲಾ ದಿನಗಳಿಂದಲೇ ಪ್ರೇರಣಾ ಮೇಲೆ ಧ್ರುವ ಹೃದಯದಲ್ಲಿ ಪ್ರೀತಿ ಮೊಳಕೆಯೊಡೆದಿತ್ತು. ತಮ್ಮ ಪ್ರೇಮ ಕಹಾನಿಯನ್ನ ಕುಟುಂಬದವರಿಗೆ ತಿಳಿಸಿ, ಎಲ್ಲರ ಸಮ್ಮತಿ ಪಡೆದು ಧ್ರುವ ಸರ್ಜಾ-ಪ್ರೇರಣಾ ಮದುವೆ ಆಗಿದ್ದಾರೆ.

  ಇಬ್ಬರ ಸುಂದರ ದಾಂಪತ್ಯಕ್ಕೀಗ ವರುಷದ ಸಂಭ್ರಮ. ಇಬ್ಬರು ಸಂತೋಷವಾಗಿ, ಖುಷಿಖುಷಿಯಾಗಿ ಜೀವನ ನಡೆಸುತ್ತಿದ್ದಾರೆ. ಇಬ್ಬರು ಹೀಗೆ ಸಂತೋಷವಾಗಿ ಜೀವನ ನಡೆಸಲಿ ಎನ್ನುವುದು ಅಭಿಮಾನಿಗಳ ಆಶಯ. ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  ಚಿತ್ರರಂಗದ 40 ವರ್ಷದ ಅನುಭವವನ್ನು ಪತ್ನಿಯ ಜೊತೆ ಬಂದು ಹಂಚಿಕೊಂಡ ಜಗ್ಗೇಶ್ | Jaggesh 40 years Cine Journey

  ಧ್ರುವ ಸರ್ಜಾ ಸದ್ಯ 'ಪೊಗರು' ಸಿನಿಮಾದ ಚಿತ್ರೀಕರಣ ಮುಗಿಸಿ 'ದುಬಾರಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 'ಪೊಗರು' ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾವಾಗಿದ್ದು, ಈ ವರ್ಷದ ಕೊನೆಯಲ್ಲಿ ಅಂದರೆ ಕ್ರಿಸ್ಮಸ್ ಗೆ ಅಥವ ಮುಂದಿನ ವರ್ಷ ಸಂಕ್ರಾಂತಿಗೆ ರಿಲೀಸ್ ಆಗುವ ಸಾಧ್ಯತೆ ಇದೆ.

  English summary
  Kannada Actor Dhruva Sarja and Prerana Shankar celebrating their first year wedding anniversary.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X