For Quick Alerts
  ALLOW NOTIFICATIONS  
  For Daily Alerts

  'ಪೊಗರು' ಸಿನಿಮಾದ ವಿವಾದ: ಬೇಷರತ್ ಕ್ಷಮೆ ಕೇಳಿದ ನಟ ಧ್ರುವ ಸರ್ಜಾ

  |

  ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪಿಸಿ ಬ್ರಾಹ್ಮಣರು ಪ್ರತಿಭಟನೆ ಮಾಡಿದ್ದರು. ಸಿನಿಮಾದಲ್ಲಿ ಪುರೋಹಿತಶಾಹಿ ವರ್ಗಕ್ಕೆ ತುಂಬಾ ಅವಮಾನಿಸಲಾಗಿದೆ. ಈ ಹಿಂದೆಯೂ ಸಹ ಅನೇಕ ಚಿತ್ರಗಳಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡೋ ದೃಶ್ಯಗಳನ್ನ ಬಲವಂತವಾಗಿ ಸೃಷ್ಟಿಸಲಾಗಿದೆ. ಕಥೆಗೆ ಬೇಡದೆ ಇದ್ರೂ ಸಹ ಅನಗತ್ಯ ಟೀಕೆಗಳನ್ನ ಮಾಡಲಾಗುತ್ತಿದೆ ಎಂದು ಬ್ರಾಹ್ಮಣರು ಕಿಡಿಕಾರಿದರು.

  ಮೊದಲ ಬಾರಿಗೆ ಪೊಗರು ಚಿತ್ರದ ಬಜೆಟ್ ಬಗ್ಗೆ ಮಾತನಾಡಿದ್ರು ಧ್ರುವ ಸರ್ಜಾ | Pogaru | DhruvaSarja PressMeet

  ಇದಾದ ಬಳಿಕ ಸಿನಿಮಾತಂಡ ಕ್ಷಮೆ ಕೇಳಿ, ಸಿನಿಮಾದ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಹೇಳಿತ್ತು. ಅದರಂತೆ ಸಿನಿಮಾ ಕೆಲುವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ವಿವಾದ ಸುಖಾಂತ್ಯ ಕಂಡ ಬಳಿಕ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದ ಮೂಲಕ ಬೇಷರತ್ ಕ್ಷಮೆಯಾಚಿಸಿದ್ದಾರೆ.

  ಪೊಗರು ವಿವಾದ: ಫಿಲಂ ಚೇಂಬರ್‌ ಬಳಿ ಧ್ರುವ ಸರ್ಜಾ ಅಭಿಮಾನಿಗಳು ಪ್ರತಿಭಟನೆ

  'ನಮ್ಮ ಇಡೀ ಕುಟುಂಬ ಹನುಮಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿದಂಲೂ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ.. ನಾವು ಎಲ್ಲಾ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ.

  ಈ ಕಾರಣಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತೇನೆ. ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ಧವಾಗಿದೆ. ನನ್ನ ಮನವಿಯನ್ನು ಪುರಷ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದ ವಿರಲಿ' ಎಂದಿದ್ದಾರೆ.

  ಒಟ್ನಲ್ಲಿ ಸ್ಯಾಂಡಲ್ ವುಡ್ ನಲ್ಲಿ ಭುಗಿಲೆದಿದ್ದ ಪೊಗರು ವಿವಾದ ತಾರ್ಕಿಕ ಅಂತ್ಯ ಕಂಡಿದೆ. ನಾಳೆಯಿಂದ ಪೊಗರು ಕತ್ತರಿ ಹಾಕಿದ ಸಿನಿಮಾ ಪ್ರದರ್ಶನ ಕಾಣಲಿದೆ.

  English summary
  Actor Dhruva sarja Apologies over Pogaru Controversy after Brahmins community outrage.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X