For Quick Alerts
  ALLOW NOTIFICATIONS  
  For Daily Alerts

  ಧ್ರುವ ಸರ್ಜಾ ಕೂದಲಿಗೆ ಕತ್ತರಿ: ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಕೂದಲು ದಾನ

  |

  ಸ್ಯಾಂಡಲ್ ವುಡ್ ನಟ ಧ್ರುವ ಕಳೆದ ವರ್ಷಗಳಿಂದ ಕೂದಲು ಬಿಟ್ಟಿದ್ದರು. ಪೊಗರು ಸಿನಿಮಾಗಾಗಿ ಉದ್ದ ಕೂದಲು ಬೆಳೆಸಿದ್ದ ಧ್ರುವ ಇದೀಗ ತನ್ನ ಕೂದಲಿಗೆ ಕತ್ತರಿ ಹಾಕಿದ್ದಾರೆ. ಪೊಗರು ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದ ಹಿನ್ನಲೆ ಹೇರ್ ಕಟ್ ಮಾಡಿದ್ದಾರೆ. ಎರಡು ವರ್ಷಗಳಿಂದ ಬೆಳೆಸಿದ್ದ ಕೂದಲಿಗೆ ಕತ್ತರಿ ಹಾಕಿ, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ದಾನ ಮಾಡುವುದಾಗಿ ಹೇಳಿದ್ದಾರೆ.

  ಕೂದಲಿಗೆ ಕತ್ತರಿ ಹಾಕಿಸಿ ಭಾವುಕ ಸಂದೇಶ ಕೊಟ್ಟ Dhruva Sarj | Filmibeat Kannada

  ಕೂದಲಿಗೆ ಕತ್ತರಿ ಹಾಕುವ ವಿಡಿಯೋವನ್ನು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹೇರ್ ಕಟ್ ಮಾಡಿಸುವ ಮೊದಲು ವಿಡಿಯೋದಲ್ಲಿ ಮಾತನಾಡಿರುವ ಧ್ರುವ, 'ಪೊಗರು ಶೂಟಿಂಗ್ ಮುಗೀತು, ಸ್ನೇಹಿತರೆಲ್ಲ ಕುಳಿತು ಕೂದಲು ದಾನ ಮಾಡುವಂತೆ ಹೇಳಿದರು. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ಧ್ರುವ ಸರ್ಜಾ ಹೇಳಿದ್ದಾರೆ. ಮುಂದೆ ಓದಿ...

  ಕೋಲಾರದಲ್ಲಿ ಧ್ರುವ ಸರ್ಜಾ ನೋಡಲು ಮುಗಿಬಿದ್ದ ಜನ: ಪೊಲೀಸರಿಂದ ಲಾಠಿ ಚಾರ್ಜ್

  ಕೂದಲು ದಾನದ ಬಗ್ಗೆ ಧ್ರುವ ಹೇಳಿದ್ದೇನು?

  ಕೂದಲು ದಾನದ ಬಗ್ಗೆ ಧ್ರುವ ಹೇಳಿದ್ದೇನು?

  '10 ಇಂಚು ಉದ್ದ ಇರುವ ಕೂದಲನ್ನು ದಾನ ಮಾಡಬಹುದು. ಸಾಕಷ್ಟು ಜನ ದಾನ ಮಾಡಿದ್ದಾರೆ. ಕ್ಯಾನ್ಸರ್ ಬಂದು ಕೂದಲು ಉದುರುವ 15 ವರ್ಷದ ಒಳಗಿನ ಮಕ್ಕಳಿಗೆ ಕೂದಲು ಉಪಯೋಗವಾಗುತ್ತೆ. ಅವರಿಗೆ ಸಹಾಯವಾಗಲಿ ಎಂದು ಹೀಗೆ ಮಾಡುತ್ತಿದ್ದೇನೆ. ಕೂದಲು ಕತ್ತರಿಸುವ ಎಲ್ಲರೂ ಹೀಗೆ ಮಾಡಿದರೆ ಸಾಕಷ್ಟು ಜನರಿಗೆ ಒಳ್ಳೆಯದಾಗುತ್ತೆ.' ಎಂದು ಧ್ರುವ ಸರ್ಜಾ ಹೇಳಿದ್ದಾರೆ.

  ಪೊಗರು ಸಿನಿಮಾದ ಚಿತ್ರೀಕರಣ ಮುಕ್ತಾಯ

  ಪೊಗರು ಸಿನಿಮಾದ ಚಿತ್ರೀಕರಣ ಮುಕ್ತಾಯ

  ಪೊಗರು ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ನಂದಕಿಶೋರ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದೆ. ಧ್ರುವ ಸರ್ಜಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.

  ಕ್ರಿಸ್ಮಸ್ ಗೆ ರಿಲೀಸ್ ಗೆ ಆಗುತ್ತಾ ಪೊಗರು?

  ಕ್ರಿಸ್ಮಸ್ ಗೆ ರಿಲೀಸ್ ಗೆ ಆಗುತ್ತಾ ಪೊಗರು?

  ಭಾರಿ ನಿರೀಕ್ಷೆ ಮೂಡಿಸಿರುವ ಪೊಗರು ಸಿನಿಮಾ ಕ್ರಿಸ್ಮಸ್ ಅಥವಾ ಮುಂದಿನ ವರ್ಷ ಸಂಕ್ರಾಂತಿಗೆ ತೆರೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಚಿತ್ರದ ಡೈಲಾಗ್ ಟ್ರೈಲರ್ ಮತ್ತು ಒಂದು ಹಾಡನ್ನು ರಿಲೀಸ್ ಮಾಡಲಾಗಿದ್ದು, ಸಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

  ಕೋಲಾರದಲ್ಲಿ ಧ್ರುವ ಸರ್ಜಾ

  ಕೋಲಾರದಲ್ಲಿ ಧ್ರುವ ಸರ್ಜಾ

  ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಕೊಂಡಯ್ಯ ಹಾರ್ಡ್‌ ವೇರ್ ಮಳಿಗೆ ಉದ್ಘಾಟನೆ ಕಾರ್ಯಕ್ರಮಕ್ಕೆ ನಟ ಧ್ರುವ ಸರ್ಜಾ ಆಗಮಿಸಿದರು. ನೆಚ್ಚಿನ ನಟ ಬಂದ ವಿಷಯ ತಿಳಿದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು ಸ್ಥಳಿಯ ಪೊಲೀಸರು ಹರಸಾಹಸ ಪಟ್ಟಿದ್ದು, ಕೆಲವು ಸಂದರ್ಭದಲ್ಲಿ ಲಾಠಿ ಚಾರ್ಜ್ ಮಾಡಲಾಗಿದೆ. ಹಾರ್ಡ್‌ ವೇರ್ ಮಳಿಗೆ ಉದ್ಘಾಟನೆ ಬಳಿಕ ಮಾತನಾಡಿದ ಧ್ರುವ ಸರ್ಜಾ ''ಕೊರೊನಾ ಸಂಧರ್ಭದಲ್ಲಿ ನಿಮ್ಮನ್ನು ಭೇಟಿ ಮಾಡಿಲ್ಲ, ಇಷ್ಟು ಜನರನ್ನು ನೋಡಿದಕ್ಕೆ ಖುಷಿ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

  English summary
  Kannada Actor Dhruva Sarja Donated His Hair to Cancer Affected Children.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X