ಚಿರಂಜೀವಿ ಸರ್ಜಾ ಕೊನೆಯ ಚಿತ್ರದಲ್ಲಿ ದರ್ಶನ್, ಧ್ರುವ ಧ್ವನಿ!
ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಎರಡು ವರ್ಷಗಳಾಗುತ್ತಿದೆ. ಅವರ ಅಭಿನಯದ ಕೊನೆಯ ಚಿತ್ರ 'ರಾಜಮಾರ್ತಾಂಡ'. ಈ ಚಿತ್ರದ ರಿಲೀಸ್‌ಗಾಗಿ ಎಲ್ಲರೂ ಕಾಯುತ್ತಿದ್ದಾರೆ ಸದ್ಯ ಚಿತ್ರ ರಿಲೀಸ್‌ಗೆ ರೆಡಿಯಾಗಿದೆ. ಇದೆ ವರ್ಷ ಜೂನ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಚಿತ್ರ ಬಿಡುಗಡೆ ಕುರಿತು ಮಾಹಿತಿ ಚಿತ್ರತಂಡ ಸುದ್ದಿಗೋಷ್ಠಿಯ ನಡೆಸಿದೆ. ಈ ಕಾರ್ಯಕ್ರಮದಲ್ಲಿ ಚಿತ್ರತಂಡ ಮತ್ತು ಮೇಘನಾರಾಜ್ ಹಾಗೂ ಸುಂದರರಾಜ್ ಉಪಸ್ಥಿತರಿದ್ದರು. ಚಿತ್ರದ ಬಹುತೇಕ ಎಲ್ಲಾ ಕೆಲಸಗಳು ಮುಗಿದಿವೆ. ಹಾಗಾಗಿ ಚಿತ್ರದ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಬಿಟ್ಟು ಕೊಟ್ಟಿದೆ.
ಚಿತ್ರದ ಮಾತನಾಡಿದ ನಿರ್ದೇಶಕ "ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು." ಅಂತ ಆ ದಿನವನ್ನು ನೆನಪಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಧ್ರುವ-ದರ್ಶನ್ ಧ್ವನಿ!
"ಟ್ರೈಲರ್‌ಗೆ ಧ್ರುವ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ಸರ್ ಸಹ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ. ಜೂನ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. ದಿನಾಂಕ ನಿಗದಿಯಾಗಿದೆ. ಆದರೆ ಕೊರೊನಾ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ." ಎಂದರು ನಿರ್ದೇಶಕ ರಾಮ್ ನಾರಾಯಣ್.

ಚಿರು 101, ರಾಯನ್ 51 ಅಡಿ ಎತ್ತರದ ಕಕೌಟ್!
" ರಾಜಮಾರ್ತಾಂಡ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಬೇಕೆಂದು ಕೊಂಡಿದ್ದೇವೆ. ಚಿರು ಅವರ 101 ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ 51 ಅಡಿ ಎತ್ತರದ ಕಟೌಟ್ ಸಹ ನಿಲ್ಲಿಸಲಿದ್ದೀವಿ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ." ಎಂದು ನಿರ್ಮಾಪಕ ಶಿವಕುಮಾರ್ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಡೈಲಾಗ್ ಹೇಳಿ ರೇಗಿಸುತ್ತಿದ್ದ ಮೇಘನಾ!
ಚಿರು ಬಗ್ಗೆ ಮಾತನಾಡಿದ ಮೇಘನಾ ರಾಜ್ "ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆಯನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ." ಎಂದು ಚಿತ್ರತಂಡಕ್ಕೆ ಮೇಘನಾರಾಜ್ ಭರವಸೆ ನೀಡಿದ್ದಾರೆ.

ಚಿರಂಜೀವಿ ಚಿತ್ರದಲ್ಲಿದೆ ದೊಡ್ಡ ತಾರಾ ಬಳಗ!
ಚಿರಂಜೀವಿ ಸರ್ಜಾಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.


Click it and Unblock the Notifications











