ಸಿದ್ದರಾಮಯ್ಯರನ್ನು ಭೇಟಿಯಾದ ನಟ ಧ್ರುವ ಸರ್ಜಾ, ಪ್ರಥಮ್
ನಟ ಧ್ರುವ ಸರ್ಜಾ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ಸಮಯದಲ್ಲಿ ಬಿಗ್‌ಬಾಸ್ ಖ್ಯಾತಿಯ ಪ್ರಥಮ್, ನಿರ್ದೇಶಕ ನಂದ ಕಿಶೋರ್ ಜೊತೆಗಿದ್ದರು.
ಸಿದ್ದರಾಮಯ್ಯ ಅವರನ್ನು 'ಪೊಗರು' ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಧ್ರುವ ಸರ್ಜಾ ಆಹ್ವಾನಿಸಿದ್ದಾರೆ. ಈ ಸಮಯ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಸಹ ಜೊತೆಯಿದ್ದರು.
ದಾವಣಗೆರೆಯಲ್ಲಿ ಫೆಬ್ರವರಿ 14 ರಂದು 'ಪೊಗರು' ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಬಹು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿನಿಮಾ ಸೆಲೆಬ್ರಿಟಿಗಳ ಜೊತೆಗೆ ರಾಜಕಾರಣಿಗಳು ಸಹ ಜೊತೆಯಾಗಲಿದ್ದಾರೆ.

ಸಿದ್ದರಾಮಯ್ಯ ಅವರು ಹಲವು ಬಾರಿ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಕೆಲವು ತಿಂಗಳ ಹಿಂದೆ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ 'ಸಲಗ' ಸಿನಿಮಾದ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದರು. ಸಿನಿಮಾರಂಗದೊಂದಿಗೆ ಸಿದ್ದರಾಮಯ್ಯ ಅವರದ್ದು ಹಳೆಯ ನಂಟು.
ಪೊಗರು ಸಿನಿಮಾ ಫೆಬ್ರವರಿ 19 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಅದಕ್ಕೆ ಮುನ್ನಾ ಅದ್ಧೂರಿಯಾಗಿ ಪ್ರಚಾರ ಕಾರ್ಯಕ್ರಮ ಮಾಡುವ ಸಲುವಾಗಿ ಆಡಿಯೋ ಕಾರ್ಯಕ್ರಮ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
Recommended Video
ಪೊಗರು ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ನಿರ್ದೇಶನವನ್ನು ನಂದ ಕಿಶೋರ್ ಮಾಡಿದ್ದು, ಕೆಲವು ವಿದೇಶಿ ನಟರು ಸಹ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.


Click it and Unblock the Notifications











