For Quick Alerts
  ALLOW NOTIFICATIONS  
  For Daily Alerts

  ಧ್ರುವ ಸರ್ಜಾ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್; 'ದುಬಾರಿ'ಯಾದ ಆಕ್ಷನ್ ಪ್ರಿನ್ಸ್

  |

  ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ನಡುವೆ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಧ್ರುವ ಸರ್ಜಾ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲಕ್ಕೆ ಈ ಹಿಂದೆಯೇ ತೆರೆ ಎಳಿದ್ದರು. ಆದರೆ ಸಿನಿಮಾದ ಬಗ್ಗೆ ಹೆಚ್ಚೇನು ಬಿಟ್ಟುಕೊಟ್ಟಿರಲಿಲ್ಲ. ದಸರಾ ಹಬ್ಬದ ಸಮಯದಲ್ಲಿ ಸ್ಕ್ರಿಪ್ಟ್ ಪೂಜೆ ಮಾಡಿದ್ದ ಸಿನಿಮಾತಂಡ ಇದೀಗ ಟೈಟಲ್ ಅನೌನ್ಸ್ ಮಾಡಿದೆ.

  ಹೊಸ ಚಿತ್ರ ಘೋಷಿಸಿ ಮಾಧ್ಯಮಗಳಿಗೆ ಖಡಕ್ ಸಂದೇಶ ಕೊಟ್ಟ ಧ್ರುವ ಸರ್ಜಾ | Dhruva Sarja | Dubari | Nanda Kishore

  ಅದ್ದೂರಿ, ಬಹದ್ದೂರ್, ಭರ್ಜರಿ, ಪೊಗರು ಸಿನಿಮಾದ ಬಳಿಕ ಧ್ರುವ 'ದುಬಾರಿ'ಯಾಗಿ ಬರ್ತಿದ್ದಾರೆ. ಹೌದು ಧ್ರುವ ಸರ್ಜಾ ಹೊಸ ಸಿನಿಮಾಗೆ ದುಬಾರಿ ಎಂದು ಟೈಟಲ್ ಇಡಲಾಗಿದೆ. 'I am very costly' ಎನ್ನುವ ಟ್ಯಾಗ್ ಲೈನ್ ಇದೆ. ಇಂದು ಶುಕ್ರವಾರ ಬೆಳಗ್ಗೆ 5 ಗಂಟೆ ಬ್ರಾಹ್ಮಿ ಮುಹೂರ್ತದಲ್ಲಿ, ಬಸವೇಶ್ವರ ನಗರ ಆಂಜನೇಯ ದೇವಸ್ಥಾನದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಹೊಸ ಸಿನಿಮಾಗೆ ಚಾಲನೆ ನೀಡಲಾಗಿದೆ.

  ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಖರಾಬು ಹಾಡು

  ಹಿರಿಯ ನಟಿ ತಾರಾ ಧ್ರುವ ಸರ್ಜಾ ಹೊಸ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಹಾರೈಸಿದ್ದಾರೆ. ಈ ಸಮಯದಲ್ಲಿ ಹಿರಿಯ ನಟ ದೊಡ್ಡಣ್ಣ ಸಹ ಹಾಜರಿದ್ದರು.

  ಅಂದಹಾಗೆ ದುಬಾರಿ ನಿರ್ದೇಶಕ ನಂದಕಿಶೋರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಈಗಾಗಲೇ ನಂದಕಿಶೋರ್ ಮತ್ತು ಧ್ರುವ ಕಾಂಬಿನೇಷನ್ ನಲ್ಲಿ ಪೊಗರು ಸಿನಿಮಾ ಮೂಡಿಬರುತ್ತಿದೆ. ಈಗ ಮತ್ತದೆ ಜೋಡಿ ದುಬಾರಿ ಮೂಲಕ ಎರಡನೇ ಬಾರಿ ಒಂದಾಗಿರುವುದು ಕುತೂಹಲ ಮೂಡಿಸಿದೆ. ಚಿತ್ರಕ್ಕೆ ಉದಯ್ ಮೆಹ್ತಾ ನಿರ್ಮಾಣ ಮಾಡುತ್ತಿದ್ದಾರೆ.

  ಸದ್ಯ ಸಿನಿಮಾದ ಟೈಟಲ್ ಮಾತ್ರ ಅನೌನ್ಸ್ ಮಾಡಲಾಗಿದೆ. ಆದರೆ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ ಸಿನಿಮಾತಂಡ. ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ, ಧ್ರುವ ಸರ್ಜಾಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ.

  English summary
  Kannada Actor Dhruva Sarja next movie with Nandakishore titled Dubaari.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X