Just In
Don't Miss!
- News
ಕೊರೊನಾ ಲಸಿಕೆ ಅಭಿಯಾನ: ಕೊಡಗು ಶೇ 84, ರಾಜ್ಯದಲ್ಲಿ 62% ಪೂರ್ಣ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Sports
ಐಎಸ್ಎಲ್: ಗೋವಾದ ಜಯದ ಓಟಕ್ಕೆ ಬ್ರೇಕ್ ಹಾಕಲು ಎಟಿಕೆಎಂಬಿ ಸಜ್ಜು
- Automobiles
2020ರ ಡಿಸೆಂಬರ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡ ನ್ಯೂ ಜನರೇಷನ್ ಕ್ರೆಟಾ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರಿ ಮೊತ್ತಕ್ಕೆ 'ಪೊಗರು' ಹಿಂದಿ ಡಬ್ಬಿಂಗ್ ರೈಟ್ಸ್ ಮಾರಾಟ
ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷೆಯ ಪೊಗರು ಸಿನಿಮಾದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ರಿಲೀಸ್ ಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಪೊಗರು ಸಿನಿಮಾ ಚಿತ್ರದಿಂದ ಮತ್ತೊಂದು ಸುದ್ದಿಕೇಳಿಬರುತ್ತಿದೆ.
ಪೊಗರು ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಬೇಡಿಕೆ ಹೆಚ್ಚಾಗಿದೆಯಂತೆ. ಹಿಂದಿ ಡಬ್ಬಿಂಗ್ ಹಕ್ಕನ್ನು ಕೋಟಿ ಕೋಟಿ ಕೊಟ್ಟು ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಹೌದು, ಪೊಗರು ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕನ್ನು ಬಾಲಿವುಡ್ ನ ನಿರ್ಮಾಪಕ ಆರೆ ಕೆ ದಗ್ಗಲ್ ಅವರು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಧ್ರುವ ಸರ್ಜಾ 'ಪೊಗರು' ಸಿನಿಮಾ ಬಿಡುಗಡೆಗೆ ಎರಡು ದಿನಾಂಕ ಫಿಕ್ಸ್

7.2 ಕೋಟಿ ರೂಪಾಯಿಗೆ ಮಾರಾಟ
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಪೊಗರು ಸಿನಿಮಾದ ಹಿಂದಿ ಡಬ್ಬಿಂಗ್ ಬರೋಬ್ಬರಿ 7.2ಕೋಟಿ ರೂಪಾಯಿಗೆ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸಿನಿಮಾತಂಡ ಇನ್ನು ಅಧಿಕ ಮಾಹಿತಿ ಬಹಿರಂಗಪಡಿಸಿಲ್ಲ. ದೊಡ್ಡ ಮೊತ್ತಕ್ಕೆ ಮಾರಾಟವಾಗಿರುವ ಬಗ್ಗೆ ಸಿನಿಮಾತಂಡ ಫುಲ್ ಖುಷ್ ಆಗಿದೆ ಎಂದು ಹೇಳಲಾಗುತ್ತಿದೆ.

ಕ್ರಿಸ್ಮಸ್ ಅಥವಾ ಸಂಕ್ರಾಂತಿಗೆ ರಿಲೀಸ್
ಸದ್ಯ ಚಿತ್ರೀಕರಣ ಮುಗಿಸಿರುವ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಂದರೆ ಕ್ರಿಸ್ಮಸ್ ಗೆ ಅಥವಾ ಮುಂದಿನ ವರ್ಷ ಸಂಕ್ರಾಂತಿಗೆ ರಿಲೀಸ್ ಮಾಡುವ ಪ್ಲಾನ್ ಮಾಡಲಾಗಿದೆ. ಪರಿಸ್ಥಿತಿ ಹೀಗೆ ಇದ್ದರೆ ಸಿನಿಮಾ ಇದೇ ವರ್ಷ ಡಿಸೆಂಬರ್ ಗೆ ರಿಲೀಸ್ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಕೋವಿಡ್ ನಿಯಮ ಸಡಿಲಿಕೆ ಆಗುತ್ತಾ ಎಂದು ಕಾದು ಸಿನಿಮಾವನ್ನು ಚಿತ್ರಮಂದಿರಕ್ಕೆ ತರುವ ಪ್ಲಾನ್ ಮಾಡಿದೆ ಸಿನಿಮಾತಂಡ.
ಧ್ರುವ ಸರ್ಜಾ ಕೂದಲಿಗೆ ಕತ್ತರಿ: ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಕೂದಲು ದಾನ

ನಂದಕಿಶೋರ್ ನಿರ್ದೇಶನ
ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೇ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಹಿನ್ನಲೆ ಚಿತ್ರೀಕರಣ ತಡವಾಗಿದ್ದು, ರಿಲೀಸ್ ಸಹ ಮುಂದಕ್ಕೆ ಹೋಗಿದೆ. ಪೊಗರು ನಂದ ಕಿಶೋರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ವಿಶೇಷ ಎಂದರೆ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ.

ಟ್ರೈಲರ್ ಮತ್ತು ಖರಾಬು ಹಾಡು ಸೂಪರ್ ಹಿಟ್
ಚಿತ್ರದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದಿಂದ ಒಂದು ಹಾಡು ಮತ್ತು ಡೈಲಾಗ್ ಟ್ರೈಲರ್ ರಿಲೀಸ್ ಆಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.