For Quick Alerts
  ALLOW NOTIFICATIONS  
  For Daily Alerts

  ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧ್ರುವ ಸರ್ಜಾ, ಪ್ರೇಮ್ ಸಿನಿಮಾ ಲಾಂಚ್

  |

  ಧ್ರುವಾ ಸರ್ಜಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗಾಗಲೇ ಎ ಪಿ ಅರ್ಜುನ್ ನಿರ್ದೇಶನದ 'ಮಾರ್ಟಿನ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾ ಕೂಡ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಈಗ ಮತ್ತೊಂದು ಸಿನಿಮಾ ಸೆಟ್ಟೇರಿದೆ.

  'ಏಕ್‌ ಲವ್ ಯಾ' ಸಿನಿಮಾ ಬಳಿಕ ಜೋಗಿ ಪ್ರೇಮ್ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಪಕ್ಕಾ ಕಮರ್ಷಿಯಲ್ ಮಾಸ್ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಆಕ್ಷನ್ ಪ್ರಿನ್ ಧ್ರುವ ಸರ್ಜಾ ಜೊತೆಯಾಗಿದ್ದಾರೆ. ಧ್ರುವ ಹಾಗೂ ಜೋಗಿ ಪ್ರೇಮ್ ಮೊದಲ ಕಾಂಬಿನೇಷನ್ ಸಿನಿಮಾ ಹೇಗಿರುತ್ತೆ ಅನ್ನುವುದನ್ನು ಸ್ಯಾಂಡಲ್‌ವುಡ್‌ ಕುತೂಹಲದಿಂದ ನೋಡುತ್ತಿದೆ.

  ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸೆಟ್ಟೇರಿತು ಸಿನಿಮಾ

  ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಕಾಂಬಿನೇಷನ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಇದೇ ಸಿನಿಮಾವನ್ನು ಅಣ್ಣಾವ್ರ ಹುಟ್ಟುಹಬ್ಬದ ದಿನದಂದು, ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಹೂರ್ತ ಮಾಡಿದೆ ಚಿತ್ರತಂಡ. ತಾಯಿ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಬಳಿಕ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ, ನಟ ಧ್ರುವ ಸರ್ಜಾ ಹಾಗೂ ನಿರ್ಮಾಪಕ ನಿರ್ಮಾಪಕ ನಿಶಾ ವೆಂಕಟ್ ಕೊಣಂಕಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

  ಚಾಮುಂಡಿ ಬೆಟ್ಟದ ಆವರಣದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ತೇರು ಎಳೆಯುವ ದೃಶ್ಯವನ್ನು ಪ್ರೇಮ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಈ ಸಂಭ್ರಮದ ಕ್ಷಣಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಿದ್ದರು. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಸಿನಿಮಾ ಭೂಗತಲೋಕದ ಹಿನ್ನೆಲೆಯಿದೆ ಎಂದು ಹೇಳಲಾಗುತ್ತಿದೆ.

  1970-ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ

  ಈ ಹೊಸ ಕಾಂಬಿನೇಷನ್ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಆದರೆ, ಚಿತ್ರದ ಪೋಸ್ಟರ್‌ನಲ್ಲಿ '1970-ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ' ಸಬ್ ಟೈಟಲ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸದ್ಯ ಶೂಟಿಂಗ್ ಆರಂಭ ಆಗಿದ್ದು, ಮೇ ತಿಂಗಳಿನಲ್ಲಿ ಚಿತ್ರದ ಟೈಟಲ್ ಲಾಂಚ್ ಮಾಡಲು ಚಿತ್ರ ತಂಡ ಮುಂದಾಗಿದೆ. ಅಂದ್ಹಾಗೆ ಇದು 1970ರ ಬೆಂಗಳೂರಿನ ಭೂಗತಲೋಕದ ನೈಜ ಕಥೆಯನ್ನು ಆಧರಿಸಿದ ಚಿತ್ರವಾಗಿದ್ದು, ಫ್ಯಾನ್ ಇಂಡಿಯಾ ಸಿನಿಮಾವಾಗಿದೆ.

  Dhruvasarja And Jogi Prem Combination First Movie Launched

  "ಚಿತ್ರದ ಕತೆ ಕೇಳಿ ತುಂಬ ಖುಷಿ ಆಯಿತು. ಕತೆ ತುಂಬಾ ಪವರ್‌ಫುಲ್ ಆಗಿದೆ. ಕತೆ ಕೇಳಿದ ತಕ್ಷಣ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ಚಿತ್ರದಲ್ಲಿ ನಾನು ಅತ್ಯಂತ ಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತೇನೆ. ಇದು ರೌಡಿಸಂ ಚಿತ್ರವಾದರೂ ಕುಟುಂಬ ಸಹಿತ ನೋಡುವ ರೀತಿಯಲ್ಲಿ ಚಿತ್ರವನ್ನು ತೆಗೆಯಲಾಗುತ್ತೆ." ಎಂದು ಧ್ರುವ ಸರ್ಜಾ ಹೇಳಿದ್ದಾರೆ. "ಇದು ಭೂಗತಲೋಕದ ಸಿನಿಮಾವಾದರೂ ಸಹ ರಕ್ತಚರಿತ್ರೆಯ ಜೊತೆಗೆ ಸೆಂಟಿಮೆಂಟ್ ಹಾಗೂ ಉತ್ತಮ ಹಾಡುಗಳನ್ನು ನಿರೀಕ್ಷೆ ಮಾಡಬಹುದು. ಕುಟುಂಬ ವರ್ಗದವರನ್ನು ಸಹ ಈ ಸಿನಿಮಾ ಸೆಳೆಯುವ ವಿಶ್ವಾಸದಲ್ಲಿದ್ದೇವೆ." ಎಂದು ನಿರ್ದೇಶಕ ಜೋಗಿ ಪ್ರೇಮ್ ಹೇಳಿದ್ದಾರೆ.

  English summary
  Dhruvasarja And Jogi Prem Combination First Movie Launched, Know More,
  Monday, April 25, 2022, 10:03
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X