Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ಸಂಭ್ರಮದಲ್ಲಿ ದಿಗಂತ್: ಅಭಿಮಾನಿಗಳಿಗೆ 'ಮಾರಿ ಗೋಲ್ಡ್' ಗಿಫ್ಟ್
ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.
ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಬೆಂಗಳೂರು to ಹಾಸನ: 192 ಕಿ.ಮೀ ಸೈಕಲ್ ತುಳಿದ ದಿಗಂತ್!
ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
Recommended Video
ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.