ನಿರ್ದೇಶಕ ಭಾರ್ಗವ, ನಟ ಜೈಜಗದೀಶ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
2018ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡ ಚಿತ್ರರಂಗ ಹಿರಿಯ ನಿರ್ದೇಶಕ ಭಾರ್ಗವ, ಹಿರಿಯ ನಟ ಜೈಜಗದೀಶ್ ಅವರಿಗೆ ಪ್ರಶಸ್ತಿ ಲಭಿಸಿದೆ.
ಭಾರ್ಗವ ಮತ್ತು ಜೈಜಗದೀಶ್ ಜೊತೆಯಲ್ಲಿ ಚಿತ್ರರಂಗಕ್ಕೆ ಸಂಬಂಧಿಸಿದ ರಾಜನ್ ಮತ್ತು ದತ್ತು ರಾಜು ಅವರಿಗೂ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಸಿನಿಮಾರಂಗದ ನಾಲ್ಕು ಜನರಿಗೆ ಪ್ರಶಸ್ತಿ ಸಿಕ್ಕಿದೆ.
2018ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 63 ಗಣ್ಯರಿಗೆ ಹೆಸರನ್ನ ಘೋಷಣೆ ಮಾಡಿದೆ. ನವೆಂಬರ್ 29ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಾಡಿಕೆಯಂತೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಬೇಕಿತ್ತು. ಆದ್ರೆ, ಇದೇ ಮೊದಲ ಬಾರಿಗೆ ನವೆಂಬರ್ ಅಂತ್ಯಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
More from Filmibeat
English summary
Karnataka government announced the Rajyotsava award 2018. director bhargava and actor jai jagadish get award.


Click it and Unblock the Notifications











