ಇಂದು ಕನ್ನಡ ಚಿತ್ರರಂಗದ ಇಬ್ಬರಿಗೆ ಹುಟ್ಟುಹಬ್ಬದ ಸಂಭ್ರಮ

ಸ್ಯಾಂಡಲ್ ವುಡ್ ನಲ್ಲಿ ಇಂದು ಇಬ್ಬರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅದು ಮತ್ಯಾರು ಅಲ್ಲ ನಿರ್ದೇಶಕ ದುನಿಯಾ ಸೂರಿ ಮತ್ತು ಹಾಸ್ಯ ನಟ ಶಿವರಾಜ್ ಕೆ ಆರ್ ಪೇಟೆ.

'ದುನಿಯಾ' ಚಿತ್ರದ ಮೂಲಕ ಕನ್ನಡ ಸಿನಿ ದುನಿಯಾದಲ್ಲಿ ಆಳ್ವಿಕೆ ಪ್ರಾರಂಭಿಸಿದ ಸೂರಿ ವಿಭಿನ್ನ ಸಿನಿಮಾಗಳ ಮೂಲಕ ಚಿತ್ರಪ್ರಿಯರನ್ನು ರಂಜಿಸುತ್ತಾ ಬಂದಿದ್ದಾರೆ. ಕ್ರೈಮ್ ಬೇಸ್ಡ್ ಸಿನಿಮಾಗಳನ್ನು ನಿರ್ದೇಶನ ಮಾಡುವಲ್ಲಿ ಹೆಚ್ಚು ಖ್ಯಾತಿಗಳಿಸಿರುವ ಸೂರಿ ಕಳೆದ ವರ್ಷ ರಿಲೀಸ್ ಆಗಿದ್ದ 'ಟಗರು' ಸಿನಿಮಾ ಮತ್ತೊಮ್ಮೆ ಸಾಬೀತು ಪಡಿಸಿತ್ತು.

director duniya suri and actor shivaraj kr pete celebrating birthday today

ಸದ್ಯ ಸೂರಿ 'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 'ಟಗರು' ಖ್ಯಾತಿಯ ಡಾಲಿ ಧನಂಜಯ್ ನಾಯಕನಾಗಿ ಕಾಣಿಸಿ ಕೊಂಡಿರುವ 'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರದ ಧನಂಜಯ್ ಭಯಾನಂಕ ಲುಕ್ ಅನ್ನು ಇತ್ತೀಚಿಗಷ್ಟೆ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ.

ಇನ್ನು ಕಾಮಿಡಿ ನಟನಾಗಿ ಕನ್ನಡ ಚಿತ್ರಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿರುವ ನಟ ಶಿವರಾಜ್ ಕೆ ಆರ್ ಪೇಟೆ ಅವರೂ ಸಹ ಇಂದು ಹುಟ್ಟಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸಿರುವ ಶಿವರಾಜ್ ಕೆ ಆರ್ ಪೇಟೆ ಸದ್ಯ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

director duniya suri and actor shivaraj kr pete celebrating birthday today

'ಅಯೋಗ್ಯ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಿನಿ ಪಯಣ ಪ್ರಾರಂಭಿಸಿರುವ ಶಿವರಾಜ್ ಕೆ ಆರ್ ಪೇಟೆ ವಿಭಿನ್ನ ಶೈಲಿಯ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದಾರೆ. ಕಿಚ್ಚ ಸುದೀಪ್ ಮತ್ತು ದರ್ಶನ್ ಅಂತಹ ಖ್ಯಾತ ನಟರ ಜೊತೆ ಅಭಿನಯಿಸಿರುವ ಶಿವರಾಜ್ ಕೆ ಆರ್ ಪೇಟೆ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.

ಅಷ್ಟೆಯಲ್ಲದೆ ಶಿವರಾಜ್ ಸದ್ಯ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇಂದು ಹುಟ್ಟುಹಬ್ಬದ ಪ್ರಯುಕ್ತ 'ನಾನು ಮತ್ತು ಗುಂಡ' ಚಿತ್ರದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ಈ ಇಬ್ಬರು ಸ್ಟಾರ್ಸ್ ಗೂ ನಮ್ಮ ಕಡೆಯಿಂದ ಹುಟ್ಟುಹಬ್ಬದ ಶುಭಾಷಯಗಳು.

More from Filmibeat

English summary
Kannada director Duniya Suri and comedy actor Shivaraj K R Pete celebrating birthday today. Shivaraj K R Pete's 'Naanu Mattu Gunda' movie teaser will release today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X