Don't Miss!
- News
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಅದಾನಿ, ಇದು ಆರ್ಥಿಕ ದಿವಾಳಿತನದ ಮುನ್ಸೂಚನೆಯೇ
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟನೆ-ನಿರ್ದೇಶನ-ಸಂಕಲನ ತರಗತಿಗಳನ್ನು ಪುನರಾರಂಭಿಸಿದ 'ಜಿ ಅಕಾಡೆಮಿ'
ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ಜಿ ಅಕಾಡೆಮಿಯ ತರಗತಿಗಳು ಮತ್ತೆ ಪುನರಾರಂಭವಾಗಿದೆ. ಆಗಸ್ಟ್ 17ನೇ ತಾರೀಖಿನಿಂದ ತರಗತಿಗಳು ಶುರುವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ದಾಖಲಾತಿ ಪಡೆಯಬಹುದು.
Recommended Video
'ರಾಜಾಹುಲಿ' ಖ್ಯಾತಿಯ ನಿರ್ದೇಶಕ ಗುರುದೇಶಪಾಂಡೆ ಜಿ ಅಕಾಡೆಮಿಯನ್ನು ಸ್ಥಾಪಿಸಿದ್ದು, ಕನ್ನಡದ ಖ್ಯಾತ ನಿರ್ದೇಶಕ, ತಂತ್ರಜ್ಞರಿಂದ ಮಾರ್ಗದರ್ಶನ ಕೊಡಿಸುತ್ತಿದ್ದಾರೆ. ನಟನೆ, ನಿರ್ದೇಶನ, ಸಂಕಲನ ಕಲಿಯುವ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಅನುಭವಿ ಸಿನಿಮಾ ಮೇಕರ್ಸ್ ಪಾಠ ಮಾಡುತ್ತಿದ್ದಾರೆ.
ಸುನಿಲ್ ಕುಮಾರ್ ದೇಸಾಯಿ, ದಯಾಳ್ ಪದ್ಮನಾಭನ್, ರಾಘು ಶಿವಮೊಗ್ಗ, ಮೌನೇಶ್ ಬಡಿಗೇರ್, ಬಿಎಂ ಗಿರಿರಾಜ್, ಭರ್ಜರಿ ಚೇತನ್ ಕುಮಾರ್, ರಾಜ್ಯ ಪ್ರಶಸ್ತಿ ವಿಜೇತರಾದ ಸಂಚಾರಿ ವಿಜಯ್, ಸಂಕಲನಕಾರರ ಆದಂತಹ ಸುರೇಶ್ ಅರಸ್, ಕೆಂಪರಾಜು, ದೀಪಕ್, ಖ್ಯಾತ ಡ್ಯಾನ್ಸ್ ಮಾಸ್ಟರ್ ಆದಂತಹ ಮುರಳಿ ಮಾಸ್ಟರ್, ಮತ್ತು ಸ್ಟಂಟ್ ಮಾಸ್ಟರ್ ಡಿಫರೆಂಟ್ ಡ್ಯಾನಿ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಆದಂತಹ ಮಣಿಕಾಂತ್ ಕದ್ರಿ, ಶ್ರೀಧರ್ ವಿ ಸಂಭ್ರಮ್ ಸೇರಿದಂತೆ ಹಲವರು ಜಿ ಅಕಾಡೆಮಿಯ ಸದಸ್ಯರಾಗಿದ್ದಾರೆ.
ಇದೀಗ, ಜಿ ಅಕಾಡೆಮಿಯ ಹೊಸ ಸದಸ್ಯರಾಗಿ ಖ್ಯಾತ ನಿರ್ದೇಶಕರಾದ ಶಶಾಂಕ್ ಮತ್ತು ಪವನ್ ಒಡೆಯರ್ ಸಹ ಸೇರ್ಪಡೆಯಾಗಿದ್ದು, ವಿದ್ಯಾರ್ಥಿಗಳಿಗೆ ಚಲನಚಿತ್ರ ನಟನೆ-ನಿರ್ದೇಶನ-ಸಂಕಲನ ಕುರಿತಾದ ತರಗತಿಗಳನ್ನು ನಡೆಸಿಕೊಡಲಿದ್ದಾರೆ.

ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿ ಅಕಾಡೆಮಿ ಸಕಲ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಸಂಪೂರ್ಣವಾಗಿ ಕಚೇರಿಯ ಹಾಗೂ ತರಗತಿಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛಗೊಳಿಸಿದೆ. ಮಾಸ್ಕ್ ಕಡ್ಡಾಯ ಮಾಡಿದೆ, ಸಾಮಾಜಿಕ ಅಂತರವನ್ನು ಸಹ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿದೆ.
ಇದರ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಲು ಸಂಪರ್ಕಿಸಿ 9900777222/9900195195